Panchamasali Reservation: ಒಕ್ಕಲಿಗ ಹಾಗೂ ಲಿಂಗಾಯತರಿಗೆ ಪ್ರತ್ಯೇಕ ಕೆಟಗರಿ ರಚನೆ: ಮೀಸಲಾತಿ ಪರಿಹರಿಸಲು ಬೊಮ್ಮಾಯಿ ಸರ್ಕಾರದ ಹೊಸ ಸೂತ್ರ
Panchamasali Reservation ಚುನಾವಣೆ ಹೊತ್ತಲ್ಲಿ ಎರಡು ಪ್ರಬಲ ಸಮುದಾಯಗಳ ಮೀಸಲಾತಿ ಬೇಡಿಕೆ ಪರಿಹರಿಸಲು ಸರ್ಕಾರ ಹೊಸ ಸೂತ್ರ ಹೆಣೆದಿದೆ. ಈ ಮೂಲಕ ಒಂದೇ ಕಲ್ಲಿನ ಎರಡು ಹಕ್ಕಿಗಳನ್ನು ಹೊಡೆದಿದೆ.
ಬೆಳಗಾವಿ: ಕರ್ನಾಟಕದಲ್ಲಿ ಎರಡು ಪ್ರಬಲ ಸಮುದಾಯದವಾಗಿರುವ ಒಕ್ಕಲಿಗ(vokkaliga) ಹಾಗೂ ಲಿಂಗಾಯತ ಪಂಚಮಸಾಲಿ (panchamasali) ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎರಡು ಪ್ರತ್ಯೇಕ ಕೆಟಗರಿ ಮಾಡಿದೆ. 3Aನಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2C ಕೆಟಗರಿ ಹಾಗೂ 3Bನಲ್ಲಿದ್ದ ಲಿಂಗಾಯತರಿಗೆ 2D ಕೆಟಗರಿ ರಚಿಸಲು ಇಂದು(ಡಿಸೆಂಬರ್ 29) ಬೆಳಗಾವಿಯಲ್ಲಿ ನಡೆದ ಸಚಿವ ಸಂಪುಟದಲ್ಲಿ(Belagavi Cabinet Meeting) ತೀರ್ಮಾನಿಸಿದೆ.
3ಎನಲ್ಲಿದ್ದ ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲು ಸಮ್ಮತಿಸಲಾಗಿದೆ. ಇನ್ನು 3ಬಿನಲ್ಲಿದ್ದ ಲಿಂಗಾಯತರಿಗೆ 2ಡಿ ಮೀಸಲಾತಿ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನವಾಗಿದೆ. 2Aನಲ್ಲಿರುವ 102 ಪಂಗಡಗಳ ಮೀಸಲಾತಿಗೆ ಯಾವುದೇ ಧಕ್ಕೆ ಆಗಲ್ಲ. 2ಎ ನಲ್ಲಿರುವ 102 ಪಂಗಡಗಳ ಮೀಸಲಾತಿ ಟಚ್ ಮಾಡುವುದಿಲ್ಲ. ಯಾವುದೇ ಸಮುದಾಯದ ಮೀಸಲಾತಿಯಲ್ಲಿ ಬದಲಾಗಲ್ಲ. EWSನಲ್ಲಿರುವ ಶೇ.10ರಷ್ಟು ಮೀಸಲಾತಿಯಲ್ಲಿ ಎಷ್ಟು ಉಳಿಯುತ್ತೋ ಅದನ್ನು 2ಸಿ ಹಾಗೂ 2ಡಿಗೆ ಶಿಫ್ಟ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಪ್ರತ್ಯೇಕ ಪ್ರವರ್ಗ ರಚಿಸಿ ಮೀಸಲಾತಿ ನೀಡಲು ಸರ್ಕಾರದ ಪ್ಲ್ಯಾನ್
ಪ್ರತ್ಯೇಕ ಪ್ರವರ್ಗ ರಚಿಸಿ ಮೀಸಲಾತಿ ನೀಡಲು ಸರ್ಕಾರದ ಪ್ಲ್ಯಾನ್ ಮಾಡಿದೆ. ಹಾಲಿ ಒಬಿಸಿ 3A,ಮತ್ತು 3B ರದ್ದಗೊಳಿಸಿ 2C, ಮತ್ತು 2D ರಚನೆಗೆ ಮುಂದಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದ್ದು, 3A ಅಡಿಯಲ್ಲಿ ಒಕ್ಕಲಿಗ, ರೆಡ್ಡಿ, ಬಲಿಜ, ಬಂಟ, ಕೊಡವ ಸೇರಿ 12 ಜಾತಿಗಳು ಒಳಗೊಂಡಿವೆ. 3B ಅಡಿಯಲ್ಲಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳು ಮತ್ತು ಉಪಜಾತಿಗಳನ್ನು ಶಿಫ್ಟ್ ಮಾಡುವ ಪ್ಲ್ಯಾನ್ ಮಾಡಿದೆ.
ಇಡಬ್ಲ್ಯುಎಸ್ ಅಡಿ ರಾಜ್ಯಗಳಿಗೆ ಇರುವ ಅಧಿಕಾರ ಚಲಾಯಿಸಿ ಪಂಚಸಾಲಿಗಳಿಗೆ ಶೇ 4, ಮತ್ತು ಒಕ್ಕಲಿಗರಿಗೆ ಶೇ 3 ಮೀಸಲು ಮರು ಹಂಚಿಕೆಗೆ ಸರ್ಕಾರ ಚಿಂತನೆ ನಡೆಸಿದೆ.
ಇದನ್ನೂ ಓದಿ: SC ST Reservation Hike Bill: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ
ಒಂದೇ ಕಲ್ಲಿನ ಎರಡು ಹಕ್ಕಿ ಹೊಡೆಯುವ ಪ್ಲ್ಯಾನ್
ಹೌದು..ಚುನಾವಣೆ ಸಂದರ್ಭದಲ್ಲಿ ಎರಡು ಪ್ರಬಲ ಸಮುದಾಯಗಳನ್ನು ಎದುರು ಹಾಕಿಕೊಳ್ಳುವ ಬದಲು ಬಿಸೋ ದೊಣ್ಣೆಯಿಂದ ಪಾರಾಗಲು ಪ್ರಯತ್ನಿಸಿದೆ.
ಪ್ರಬಲ ಸಮುದಾಯಗಳಾದ ಒಕ್ಕಲಿಗ ಹಾಗೂ ಲಿಂಗಾಯತ ಪಂಚಮಸಾಲಿ 2A ಕೆಟಗರಿಯಲ್ಲಿ ಸೇರುವಂತೆ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಸೆರ್ಕಾರ 2C ಮತ್ತು 2D ಕೆಟಗರಿ ರಚಿಸುವ ಮೂಲಕ ಚುನಾವಣೆ ಹೊತ್ತಲ್ಲಿ ಎರಡು ಪ್ರಬಲ ಸಮುದಾಯಗಳ ಮೀಸಲಾತಿ ಬೇಡಿಕೆ ಪರಿಹರಿಸಲು ಈ ಹೊಸ ಸೂತ್ರ ಹೆಣೆದಿದೆ. ಇದರೊಂದಿಗೆ ಒಂದೇ ಕಲ್ಲಿನ ಎರಡು ಹಕ್ಕಿಗಳನ್ನು ಹೊಡೆದಿದೆ.
ಹಲವು ಗೊಂದಲ
ಹೊಸದಾಗಿ 2ಸಿ ಹಾಗೂ 2ಡಿ ಕೆಟಗರಿ ಸೃಷ್ಟಿಸುವ ಬಗ್ಗೆಯೂ ಹಲವು ಗೊಂದಲಗಳ ಗೂಡಾಗಿದೆ. 2Aಗೆ ಇರುವ ಶೇ.15ರಷ್ಟು ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡಲ್ಲ ಎಂದು ಸ್ವತಃ ಮಾಧುಸ್ವಾಮಿ ಹೇಳಿದ್ದಾರೆ. ಆದ್ರೆ, 2ಸಿ ಹಾಗೂ 2ಡಿ ಕೆಟಗರಿ ಎಷ್ಟು ಮೀಸಲಾತಿ ಕೊಡಲಾಗುತ್ತೆ ಎನ್ನುವುದೇ ಗೊಂದಲವಾಗಿದೆ.
ರಾಜ್ಯ ಸರ್ಕಾರದ ನಿರ್ಧಾರ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ನೇರವಾಗಿ 2ಎ ಮೀಸಲಾತಿ ನೀಡುತ್ತಾರೆಂಬ ಭರವಸೆ ಇತ್ತು. ಇಂದೇ ಸಮುದಾಯದ ಮುಖಂಡರ ಜೊತೆ ಚರ್ಚಿಸುತ್ತೇವೆ. ಮುಖಂಡರ ಜೊತೆ ಚರ್ಚಿಸಿ ಮುಂದಿನ ನಿರ್ಧಾರದ ಬಗ್ಗೆ ಪ್ರಕಟಿಸುತ್ತೇವೆ. ಅಲ್ಲಿಯವರೆಗೂ ಯಾರೂ ಯಾವುದೇ ನಿರ್ಧಾರ ಪ್ರಕಟಿಸಬಾರದು ಎಂದು ಸ್ಪಷ್ಟಪಡಿಸಿದರು.
ಒಟ್ಟಿನಲ್ಲಿ 2A ಮೀಸಲಾತಿ ಬೇಕೆಂದು ಬೇಡಿಕೆ ಇಟ್ಟಿರುವ ಲಿಂಗಾಯತ ಪಂಚಮಸಾಲಿ ಸಮುದಾಯ ಹಾಗೂ ಒಕ್ಕಲಿಗರಿಗೆ 2ಸಿ ಹಾಗೂ 2ಡಿ ಕೆಟಗೆರಿ ರಚಿಸಿದ್ದು, ಮೀಸಲಾತಿ ಪ್ರಮಾಣ ಎಷ್ಟು ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 7:22 pm, Thu, 29 December 22