ಅಪರಾಧ ಪತ್ತೆಗೆ ದೇಶದಲ್ಲೇ ಮೊದಲ ಬಾರಿಗೆ ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆ ಸೃಷ್ಟಿ; 206 ನುರಿತ ಅಧಿಕಾರಿಗಳ ನೇಮಕಕ್ಕೆ ನಿರ್ಧಾರ

TV9 Digital Desk

| Edited By: guruganesh bhat

Updated on:Jul 12, 2021 | 5:03 PM

ಯಾವುದಾದರೂ ಒಂದು ಅಪರಾಧ ಕೃತ್ಯ ನಡೆದ ತಕ್ಷಣ ಘಟನಾ ಸ್ಥಳಕ್ಕೆ ಹೋಗಿ ಇಲ್ಲಿರುವಂತಹ ಸಾಕ್ಷಾಧಾರಗಳನ್ನು ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಸಂರಕ್ಷಣೆ ಮಾಡಲು ಈ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗಿದೆ. ಇದುವರೆಗೆ ಈ ಕೆಲಸವನ್ನು ಸ್ಥಳೀಯ ಅಧಿಕಾರಿಗಳು ಮಾಡುತ್ತಿದ್ದರು.

ಅಪರಾಧ ಪತ್ತೆಗೆ ದೇಶದಲ್ಲೇ ಮೊದಲ ಬಾರಿಗೆ ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆ ಸೃಷ್ಟಿ; 206 ನುರಿತ ಅಧಿಕಾರಿಗಳ ನೇಮಕಕ್ಕೆ ನಿರ್ಧಾರ
ಪೊಲೀಸ್ ಸಿಬ್ಬಂದಿ

ಬೆಂಗಳೂರು: ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು ದೇಶದಲ್ಲಿಯೇ ಮೊದಲ ನುರಿತ ಹಾಗೂ ಪರಿಣಿತರ ‘ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ’ ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ (13 ಜುಲೈ) ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೀನ್ ಆಫ್ ಕ್ರೈಂ ಆಫೀಸರ್ (scene of crime officer) ಹುದ್ದೆಗಳ ಆದೇಶ ಪ್ರತಿಯನ್ನು ಕೊಡಲಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 206 ನುರಿತ ಅಧಿಕಾರಿಗಳ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಅಪರಾಧ ಕೃತ್ಯಗಳ ತನಿಖೆಗೆ ಈ ರೀತಿ ಹೊಸ ಪೊಲೀಸ್ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ.

ಯಾವುದಾದರೂ ಒಂದು ಅಪರಾಧ ಕೃತ್ಯ ನಡೆದ ತಕ್ಷಣ ಘಟನಾ ಸ್ಥಳಕ್ಕೆ ಹೋಗಿ ಇಲ್ಲಿರುವಂತಹ ಸಾಕ್ಷಾಧಾರಗಳನ್ನು ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಸಂರಕ್ಷಣೆ ಮಾಡಲು ಈ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗಿದೆ. ಇದುವರೆಗೆ ಈ ಕೆಲಸವನ್ನು ಸ್ಥಳೀಯ ಅಧಿಕಾರಿಗಳು ಮಾಡುತ್ತಿದ್ದರು. ಆದರೆ ಇನ್ನು ಮುಂದೆ ಮೊದಲ ಹಂತದಲ್ಲಿ ಗಂಭೀರ ಸ್ವರೂಪದ ಅಪರಾಧಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ವಿಶೇಷ ತರಬೇತಿ ಪಡೆದ ಈ ತಂಡ ಅಪರಾಧ ಕೃತ್ಯ ನಡೆದ ಸ್ಥಳಕ್ಕೆ ಮೊದಲು ಭೇಟಿ ನೀಡಲಿದೆ. ಆ ಸ್ಥಳದಲ್ಲಿನ ಎಲ್ಲ ಸಾಕ್ಷಾಧಾರಗಳನ್ನು ಸಂರಕ್ಷಣೆ ಮಾಡುವುದು, ಆನಂತರ ಸಾಕ್ಷಾಧಾರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಡುವುದು, ತನಿಖಾಧಿಕಾರಿಗೆ ಆ ಸಾಕ್ಷಾಧಾರಗಳನ್ನು ಒದಗಿಸುವುದು ಸೇರಿದಂತೆ ಇತರ ಅವಶ್ಯ ಕರ್ತವ್ಯಗಳನ್ನು ಮಾಡುತ್ತಾ ಅಪರಾಧಿಗಳನ್ನು ಅತ್ಯಂತ ಶೀಘ್ರದಲ್ಲಿ ಪತ್ತೆ ಮಾಡಲು ಮೂಲಭೂತವಾಗಿ ಬೇಕಾಗುವ ಎಲ್ಲ ಕೆಲಸ ಕಾರ್ಯಗಳನ್ನು ಈ ಅಧಿಕಾರಿಗಳು ಮಾಡುತ್ತಾರೆ. ಇದರಿಂದ ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣ ಸಾಧ್ಯ. ಈ ವ್ಯವಸ್ಥೆಯ ಪ್ರಮುಖವಾಗಿ ವಿದೇಶಗಳಲ್ಲಿ ಹೆಚ್ಚಾಗಿ ಇದೆ.

ಇದೇ ಸಂದರ್ಭದಲ್ಲಿ ಪೊಲೀಸರ ಆರೋಗ್ಯ ಕಾಪಾಡುವ ಆರೋಗ್ಯ ಭಾಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇರುವ ಕೈಪಿಡಿಯನ್ನು ಪೊಲೀಸ್ ಸಿಬ್ಬಂದಿಗೆ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡಲಿದ್ದಾರೆ. ಅದೇ ರೀತಿ ಪೊಲೀಸರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ವಿದ್ಯಾನಿಧಿ – 2 ಯೋಜನೆಗೆ ನಾಳೆ ಚಾಲನೆ ದೊರೆಯಲಿದೆ. ಇದಷ್ಟೇ ಅಲ್ಲದೆ ಅಗ್ನಿಶಾಮಕದಳ, ಗೃಹರಕ್ಷಕದಳ ಹಾಗೂ ಇತರ ಪೊಲೀಸ್ ಸೇವಾ ಪದಕಗಳನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಳೆ ಪ್ರದಾನಿಸಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

World Population Day 2021: ಜಗತ್ತಿನಲ್ಲಿ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ದೇಶಗಳು ಯಾವುವು? ಅಲ್ಲಿನ ವಿಶೇಷಗಳೇನು? ಇಲ್ಲಿದೆ ವಿವರ

ರೈತರ ಹೊಲ ಗದ್ದೆ ಕಾಯಲೂ ಸೈ, ಕರಾವಳಿಯ ಬಂದರಿಗೂ ಜೈ; ಈ ಕತ್ತಾಳೆ ನಾರಿನ ಬಗ್ಗೆ ನಿಮಗೆಷ್ಟು ಗೊತ್ತು?

(Karnataka Govt decided appoint 206 scene of crime officer to Investigate criminal acts)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada