45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆ ನೀಡಿದ ಬಳಿಕವೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸದ್ಯ ಲಾಕ್​ಡೌನ್ ಪ್ಯಾಕೇಜ್ ನಿರ್ಣಯವಿಲ್ಲ

|

Updated on: May 12, 2021 | 8:10 PM

Karnataka Govt On above 18 Covid Vaccination: 2ನೇ ಡೋಸ್ ಲಸಿಕೆ ಪಡೆಯುವವರಿಗೆ ಮೊದಲ ಆದ್ಯತೆ ಒದಗಿಸಿ. ಪ್ರತಿ ಜಿಲ್ಲೆಯ ವ್ಯಾಕ್ಸಿನ್ ಲಭ್ಯತೆ ಬಗ್ಗೆ ಮಾಹಿತಿ ಇರಬೇಕು. ವ್ಯಾಕ್ಸಿನ್ ಪೂರೈಸುವ ಕಂಪನಿಗಳ ‌ಜೊತೆ ಸಂಪರ್ಕ‌ವಿರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.

45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆ ನೀಡಿದ ಬಳಿಕವೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸದ್ಯ ಲಾಕ್​ಡೌನ್ ಪ್ಯಾಕೇಜ್ ನಿರ್ಣಯವಿಲ್ಲ
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
Follow us on

ಬೆಂಗಳೂರು: ರಾಜ್ಯದ ಕೊವಿಡ್ ಪರಿಸ್ಥಿತಿ ಕುರಿತು ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಹಲವು ಪ್ರಮುಖ ಸೂಚನೆಗಳನ್ನು ನೀಡಿದರು. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಲಸಿಕೆ ನೀಡಿ ಮುಗಿದ ಬಳಿಕವೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು. ಲಸಿಕೆಯ ಅಗತ್ಯ ಸಂಗ್ರಹ ಇರಿಸಿಕೊಂಡೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ದಿನಾಂಕ ಘೋಷಣೆ ಮಾಡಲಾಗುವುದು ಎಂಬ ನಿರ್ಣಯವನ್ನು ಸಭೆಯನ್ನು ಕೈಗೊಳ್ಳಲಾಯಿತು.  ಜತೆಗೆ ಲಾಕ್ ಡೌನ್ ಅವಧಿಯಲ್ಲಿ ಶ್ರಮಿಕ ವರ್ಗಕ್ಕೆ ವಿಶೇಷ ನೆರವು ಬಗ್ಗೆ ಸದ್ಯ ಯಾವುದೇ ನಿರ್ಧಾರವನ್ನೂ ಕೈಗೊಳ್ಳುವುದು ಬೇಡ ಎಂದು ಕೊವಿಡ್ ಪರಿಸ್ಥಿತಿ ಅವಲೋಕಿಸಿ ನಡೆಸಿದ ಸಭೆ ನಿಶ್ಚಯಿಸಿತು. Karnataka Govt decides will give covid vaccine to above 18 after completed above 45 years old

ರಾಜ್ಯದ ಜನರಲ್ಲಿ ವ್ಯಾಕ್ಸಿನ್ ಬಗ್ಗೆ ಇರುವ ಗೊಂದಲವನ್ನು ಆದಷ್ಟು ಬೇಗ ನಿವಾರಿಸಿ. ಜಿಲ್ಲೆಗಳಲ್ಲಿ ಆಕ್ಸಿಜನ್ ಸರಬರಾಜು ವ್ಯತ್ಯಾಸವಾಗದಂತೆ ಕ್ರಮ ಜಿಲ್ಲೆಗಳಲ್ಲಿ ಕೊರತೆ ಉಂಟಾದರೆ ಕೂಡಲೇ ಬಗೆಹರಿಸಬೇಕು. ಆಕ್ಸಿಜನ್, ಐಸಿಯು ಬೆಡ್ ಸಂಖ್ಯೆ ಹೆಚ್ಚಿಸಲು ಗಮನಹರಿಸಿ. 2ನೇ ಡೋಸ್ ಲಸಿಕೆ ಪಡೆಯುವವರಿಗೆ ಮೊದಲ ಆದ್ಯತೆ ಒದಗಿಸಿ. ಪ್ರತಿ ಜಿಲ್ಲೆಯ ವ್ಯಾಕ್ಸಿನ್ ಲಭ್ಯತೆ ಬಗ್ಗೆ ಮಾಹಿತಿ ಇರಬೇಕು. ವ್ಯಾಕ್ಸಿನ್ ಪೂರೈಸುವ ಕಂಪನಿಗಳ ‌ಜೊತೆ ಸಂಪರ್ಕ‌ವಿರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆಯಲ್ಲಿ ಉಪಸ್ಥಿತರಿದ್ದ ಸಚಿವರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ.ಅಶ್ವತ್ಥ್​ ನಾರಾಯಣ, ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಆರ್.ಅಶೋಕ್, ಡಾ.ಸುಧಾಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಸಿ ಪಿ.ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಪೊಲೀಸ್ ಆಯುಕ್ತ ಕಮಲ್ ಪಂತ್​ ಭಾಗಿಯಾಗಿದ್ದರು.

ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ ಮತ್ತಿತರರ ವಿರುದ್ಧದ ಪಿಐಎಲ್ ರಾಜಕೀಯ ಪ್ರೇರಿತವಾದದ್ದು; ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್ 

ಆಕ್ಸಿಜನ್​ ನಿರ್ವಹಣೆಗಾಗಿ ಹೊಸ ಮಾರ್ಗಸೂಚಿ ಬಿಡುಗಡೆ; ಇಲ್ಲಿದೆ ನೋಡಿ ರಾಜ್ಯ ಸರ್ಕಾರ ಮಾಡಿದ ವ್ಯವಸ್ಥೆಯ ಪಟ್ಟಿ..

(Karnataka govt decideds Vaccination for those over the age of 18 years after the second dose vaccination for those over 45 years of age)

Published On - 8:08 pm, Wed, 12 May 21