ಲಾಕ್ಡೌನ್ನಿಂದ ಸರ್ಕಾರಕ್ಕೆ ಆರ್ಥಿಕ ಹೊರೆ; ಸಚಿವರು ಮತ್ತು ಶಾಸಕರ ವೇತನ ಕಡಿತಗೊಳಿಸಲು ನಿರ್ಧಾರ
ಲಾಕ್ಡೌನ್ನಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯನ್ನು ಅನುಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಚಿವರು ಮತ್ತು ಶಾಸಕರ ವೇತನ ಕಡಿತಕ್ಕೆ ನಿರ್ಧಾರ ಕೈಗೊಂಡಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಲೆ ವೇಗವಾಗಿ ಹರಡುತ್ತಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ 14 ದಿನಗಳ ಕಾಲ ಲಾಕ್ಡಾನ್ ಜಾರಿಮಾಡಿದೆ. ಈ ಬೆನ್ನಲ್ಲೇ ಸರ್ಕಾರ ಆರ್ಥಿಕ ನಷ್ಟ ಅನುಭವಿಸುತ್ತಿದೆ. ಇದರ ನಡುವೆಯೂ ಕೊವಿಡ್ ನಿರ್ವಹಣೆಗಾಗಿ ಸರ್ಕಾರ ಹೋರಾಡಬೇಕಾಗಿದೆ. ಹಾಗಾಗಿ ರಾಜ್ಯ ಸರ್ಕಾರ, ಸಚಿವರು ಮತ್ತು ಶಾಸಕರ ವೇತನ ಕಡಿತಕ್ಕೆ ನಿರ್ಧಾರ ಕೈಗೊಂಡಿದೆ.
ಸಚಿವರ 1 ವರ್ಷದ ವೇತನ ಮತ್ತು ಶಾಸಕರ 1 ತೀಗಳ ವೇತನವನ್ನು ಕಡಿತಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪೊಲೀಸ್ ಮತ್ತು ಆರೋಗ್ಯ ಸಿಬ್ಬಂದಿಯವರನ್ನು ಹೊರತುಪಡಿಸಿ ಸಚಿವರು ಮತ್ತು ಶಾಸಕರ ವೇತನ ಕಡಿತಕ್ಕೆ ನಿರ್ಧರಿಸಲಾಗಿದೆ. ವೇತನ ಕಡಿತದಿಂದ ಸರ್ಕಾರಕ್ಕೆ ಕೋಟ್ಯಾಂತರ ಹಣ ಉಳಿಯಲಿದ್ದು, ಇದನ್ನು ಕೊವಿಡ್ ನಿರ್ವಹಣೆಗೆ ಬಳಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸಭೆಯಲ್ಲಿ ಉಪಸ್ಥಿತರಿದ್ದ ಸಚಿವರು ಮತ್ತು ಸಾಸಕರಲ್ಲಿ ಅನೇಕರು ಈ ಕುರಿತು ಸಮ್ಮತಿ ನೀಡಿದ್ದಾರೆ.
ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಾಂಕ್ರಾಮಿಕ ರೋಗದಿಂದ ಬಳಲಿ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಇದರಿಂದ ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿರಬೇಕು. ಎಲ್ಲರೂ ಕೊವಿಡ್ ನಿಯಮ ಪಾಲಿಸಲೇ ಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಕೊವಿಡ್ ನಿಯಮ ಉಲ್ಲಂಘಿಸಿ ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಯುವಕರಿಗೆ ತಮಗೆ ತಾವೇ ಕಪೋಳಮೋಕ್ಷ ಮಾಡಿಕೊಳ್ಳುವ ಶಿಕ್ಷೆ!