ನಾಳೆ 4 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಆಯಾ ಕ್ಷೇತ್ರಗಳಲ್ಲಿ ಸರ್ಕಾರಿ ಕಚೇರಿ, ಶಾಲಾ‌ ಕಾಲೇಜುಗಳಿಗೆ ರಜೆ

ನಾಳೆ (ಡಿಸೆಂಬರ್ 27) 4 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವತ್ರಿಕ ಚುನಾವಣೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ ನಡೆಯಲಿದೆ. ಹೀಗಾಗಿ ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು, ಶಾಲಾ‌ ಕಾಲೇಜುಳಿಗೆ ಸಾರ್ವತ್ರಿಜ ರಜೆ ನೀಡಲಾಗಿದೆ. ಎಲ್ಲೆಲ್ಲಿ?

ನಾಳೆ 4 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಆಯಾ ಕ್ಷೇತ್ರಗಳಲ್ಲಿ ಸರ್ಕಾರಿ ಕಚೇರಿ, ಶಾಲಾ‌ ಕಾಲೇಜುಗಳಿಗೆ ರಜೆ
ಪ್ರಾತಿನಿಧಿಕ ಚಿತ್ರ
Edited By:

Updated on: Dec 26, 2023 | 6:13 PM

ಬೆಂಗಳೂರು, (ಡಿಸೆಂಬರ್ 26): ನಾಳೆ (ಡಿಸೆಂಬರ್ 27) 4 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಮತ್ತು 19 ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ (Local body Election) ಹಿನ್ನೆಲೆಯಲ್ಲಿ ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು, ಶಾಲಾ‌ ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತ್, ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ಮತ್ತು ಕಲಬುರಗಿ ಜಿಲ್ಲೆಯ ವಾಡಿ ಪುರಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಇದರ ಜೊತೆಗೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 36 ವಾರ್ಡ್ ಗಳಿಗೆ ಉಪಚುನಾವಣೆ ನಡೆಯಲಿದೆ.

ಮತದಾನಕ್ಕೆ ಅನುಕೂಲವಾಗುವಂತೆ ಚುನಾವಣೆ ‌ನಡೆಯುವ ಆಯಾ ಕ್ಷೇತ್ರಗಳ ವ್ಯಾಪ್ತಿಯ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ‌ ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಚುನಾವಣಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಉದ್ದಿಮೆಗಳು, ವ್ಯಾವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇತರ ಸಂಸ್ಥೆಗಳಲ್ಲಿನ ಖಾಯಂ ಅಥವಾ ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ನೀಡಲಾಗಿದೆ.