ವಾಹನ ಮಾಲೀಕರಿಗೆ ಗುಡ್​ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

HSRP Number Plate Deadline: ಇನ್ನೂ ತಮ್ಮ ತಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ (HSRP) ಅಳವಡಿಕೆ ಮಾಡದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಈಗಾಗಲೇ ರಾಜ್ಯ ಸರ್ಕಾರ, HSRP ಕೊನೆ ದಿನಾಂಕವನ್ನು ವಿಸ್ತರಿಸುತ್ತಾ ಬಂದಿದೆ. ಇದೀಗ ಮತ್ತೆ ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಗಡುವು ವಿಸ್ತರಣೆ ಮಾಡಿದೆ.

ವಾಹನ ಮಾಲೀಕರಿಗೆ ಗುಡ್​ ನ್ಯೂಸ್:  HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
HSRP ನಂಬರ್ ಪ್ಲೇಟ್
Follow us
Kiran Surya
| Updated By: ರಮೇಶ್ ಬಿ. ಜವಳಗೇರಾ

Updated on:Nov 04, 2024 | 6:37 PM

ಬೆಂಗಳೂರು, (ನವೆಂಬರ್ 04): ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ 4 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ. ಹೌದು..ಈ ತಿಂಗಳು ಕೊನೆ ಅಂದರೆ ನವೆಂಬರ್ 30ರವರೆಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಬಂದಿದೆ. ಬರೋಬ್ಬರಿ ನಾಲ್ಕು ಬಾರಿ ಗಡುವು ವಿಸ್ತರಿಸಿದೆ. ಆದರೂ ಸಹ 1.90 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ ಮಾತ್ರ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಇನ್ನೂ ಬಾಕಿ ವಾಹನಗಳ ಮಾಲೀಕರು ಅಳವಡಿಕೆ ಮಾಡಿಕೊಂಡಿಲ್ಲ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆ ಇದೀಗ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ.

ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. ಹೀಗಾಗಿ 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ.

ಏನಿದು ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್‌ ಪ್ಲೇಟ್?

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.

ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ

  • https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
  • ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
  • ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
  • HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  • ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
  • ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
  • ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
  • ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Mon, 4 November 24

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು