AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

69 ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು 50 ಜನರ ಸಮಿತಿ ರಚನೆ

ಕನ್ನಡ ರಾಜ್ಯೋತ್ಸವ 20204: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರ ಆಯ್ಜೆ ಸಲಹಾ ಸಮಿತಿಯನ್ನು ರಚಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೇತೃತ್ವದ ಸಲಹಾ ಸಮಿತಿ‌ 36 ಸದಸ್ಯರು ಮತ್ತು 13 ಪದನಿಮಿತ್ತ ಸದಸ್ಯರನ್ನು ಒಳಗೊಂಡಿದೆ.

69 ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು 50 ಜನರ ಸಮಿತಿ ರಚನೆ
ಕನ್ನಡ ರಾಜ್ಯೋತ್ಸವ
ರಮೇಶ್ ಬಿ. ಜವಳಗೇರಾ
|

Updated on:Oct 05, 2024 | 1:40 PM

Share

ಬೆಂಗಳೂರು, (ಅಕ್ಟೋಬರ್ 05) : ವಿಧಾನಸೌಧದ ಮಹಾದ್ವಾರದ ಮೆಟ್ಟಿಲುಗಳ ಮೇಲೆ ನವೆಂಬರ್ 1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪ ಸಮಾರಂಭ ನಡೆಯಲಿದ್ದು, ಇದೇ ವೇಳೆ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಶಸ್ತಿ ಸಾಧಕರನ್ನು ಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು, ವಿವಿಧ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ಸದಸ್ಯರನ್ನೊಳಗೊಂಡ ಸಲಹಾ ಸಮಿತಿಯನ್ನು ರಚಿಸಿ ಆದೇಶಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೇತೃತ್ವದ ಸಲಹಾ ಸಮಿತಿ‌ 36 ಸದಸ್ಯರು ಮತ್ತು 13 ಪದನಿಮಿತ್ತ ಸದಸ್ಯರನ್ನು ಒಳಗೊಂಡಿದೆ. ವಿವಿಧ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವವರನ್ನು ಈ ಸಲಹಾ ಸಮಿತಿ‌ಗೆ ಸದಸ್ಯರನ್ನಾಗಿ ನೇಮಿಸಲಾಗಿದೆ.  ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್‌ ಮೂಲಕ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಅವಕಾಶ ನೀಡಿದೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ನೇತೃತ್ವದ ಈ ಸಲಹಾ ಸಮಿತಿ‌ ಮುಂದಿನ ವಾರದಿಂದಲೇ ಪರಿಶೀಲನೆ ನಡೆಸಲಿದೆ.

ಸಲಹಾ ಸಮಿತಿ ಇಂತಿದೆ

69ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಲೆ, ಸಾಹಿತ್ಯ, ಜಾನಪದ, ಕೃಷಿ, ಪರಿಸರ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ 69 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ.

ಈ ಬಾರಿ ಕೂಡ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್‌ https://sevasindhu.Karnataka.gov.in ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸೆ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು,  ಈ ಬಾರಿಯೂ ರಾಜ್ಯೋತ್ಸವ ಪ್ರಶಸ್ತಿ ಆಕಾಂಕ್ಷಿಗಳ ಪಟ್ಟಿ ಸಾವಿರದ ಗಡಿ ದಾಟಿದೆ. ಇದುವರೆಗೆ ಸುಮಾರು 1700ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:28 pm, Sat, 5 October 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!