ರಾಜ್ಯಾದ್ಯಂತ ಟಫ್ ರೂಲ್ಸ್ ಜಾರಿಯಾಗಿದ್ದರೂ ಪರೀಕ್ಷೆ ನಡೆಸಲು ವಿಟಿಯುಗೆ ಸರ್ಕಾರದಿಂದಲೇ ಗ್ರೀನ್ ಸಿಗ್ನಲ್

ಏಪ್ರಿಲ್ 19ರಿಂದ ವಿಟಿಯು ಪರೀಕ್ಷೆಗಳು ಆರಂಭವಾಗಿದ್ದು ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯಾದ್ಯಂತ ಟಫ್ ರೂಲ್ಸ್ ಜಾರಿಯಾಗಿದ್ದರೂ ಪರೀಕ್ಷೆ ನಡೆಸಲು ವಿಟಿಯುಗೆ ಸರ್ಕಾರದಿಂದಲೇ ಗ್ರೀನ್ ಸಿಗ್ನಲ್
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)
Follow us
ಆಯೇಷಾ ಬಾನು
|

Updated on: Apr 21, 2021 | 9:37 AM

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಕೊವಿಡ್ ಟಫ್ ರೂಲ್ಸ್ ಜಾರಿಯಾಗಲಿದೆ. ಸದ್ಯ ರಾಜ್ಯ ಸರ್ಕಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಆದ್ರೆ ವಿಟಿಯು ಪರೀಕ್ಷೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ಪರೀಕ್ಷೆಗಳು ಏಪ್ರಿಲ್ 19ರಿಂದ ಆರಂಭವಾಗಿದ್ದು ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದಾರೆ.

ಕೊರೊನಾ 2ನೇ ಅಲೆ ಇಡೀ ದೇಶವನ್ನೆ ಕಾಡುತ್ತಿದೆ. ಕೊರೊನಾ ಹೊಡೆತಕ್ಕೆ ಕರ್ನಾಟಕ ಅಕ್ಷರಶಃ ತತ್ತರಿಸಿದೆ. ಮಾಹಾಮಾರಿ ಓಟಕ್ಕೆ ಬ್ರೇಕ್ ಹಾಕೋದಕ್ಕೆ ಸರ್ಕಾರ ಕಠಿಣಾತಿ ಕಠಿಣ ರೂಲ್ಸ್ ಜಾರಿಗೆ ತಂದಿದೆ. ಇಂದಿನಿಂದ ಮೇ 4ರವರೆಗೂ ನೈಟ್‌ ಕರ್ಫ್ಯೂ ಜೊತೆ ಜೊತೆಗೆ ವೀಕೆಂಡ್‌ ಕರ್ಫ್ಯೂವನ್ನ ಹೇರಿ ಆದೇಶ ಹೊರಡಿಸಿದೆ. ಹಾಗೂ ಶಾಲಾ-ಕಾಲೇಜು ಸೇರಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಬಂದ್ ಮಾಡುವಂತೆ ಮಾರ್ಗಸೂಚಿಯಲ್ಲಿ ಸರ್ಕಾರ ಉಲ್ಲೇಖಿಸಿದೆ. ಹೀಗಾಗಿ ಬಹುತೇಕ ಕಾಲೇಜು ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಆದ್ರೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಪರೀಕ್ಷೆ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಏಪ್ರಿಲ್ 19ರಿಂದ ವಿಟಿಯು ಪರೀಕ್ಷೆಗಳು ಆರಂಭವಾಗಿದ್ದು ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದಾರೆ. ಈಗಾಗಲೇ ಅನೇಕ ವಿಶ್ವವಿದ್ಯಾಲಯಗಳು ಪರೀಕ್ಷೆ ಮುಂದೂಡಿವೆ. ಆದ್ರೆ ವಿಟಿಯು ಪರೀಕ್ಷೆ ನಡೆಸಲು ಅನುಮತಿ ಕೊಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ನಾಳೆಯಿಂದ ವಿಟಿಯು ಪರೀಕ್ಷೆ: ಸಮಸ್ಯೆ ಬಗ್ಗೆ ವಿಟಿಯುಗೆ ಟ್ಯಾಗ್ ಮಾಡಿದ್ದ ವಿದ್ಯಾರ್ಥಿಗಳು ಸಸ್ಪೆಂಡ್