ಪ್ರವೀಣ್ ನೆಟ್ಟಾರು ಪತ್ನಿಗೆ ಗುತ್ತಿಗೆ ಆಧಾರಿತ ನೌಕರಿ ನೀಡಿ ರಾಜ್ಯ ಸರ್ಕಾರದಿಂದ ಆದೇಶ

ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರವೀಣ್ ನೆಟ್ಟಾರು ಪತ್ನಿಗೆ ಗುತ್ತಿಗೆ ಆಧಾರಿತ ನೌಕರಿ ನೀಡಿ ರಾಜ್ಯ ಸರ್ಕಾರದಿಂದ ಆದೇಶ
ಪ್ರವೀಣ್ ನೆಟ್ಟಾರು ಪತ್ನಿಗೆ ಗುತ್ತಿ ಆಧಾರಿತ ನೌಕರಿ ನೀಡಿ ಸರ್ಕಾರದಿಂದ ಆದೇಶ
Follow us
TV9 Web
| Updated By: Rakesh Nayak Manchi

Updated on:Sep 29, 2022 | 7:58 PM

ಬೆಂಗಳೂರು/ ಮಂಗಳೂರು: ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನ ಸಮಾವೇಶದಲ್ಲಿ (Janaspandana Program) ನೇಮಕಾತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಘೋಷಣೆ ಮಾಡಿದ್ದರು. ಅದರಂತೆ ಇದೀಗ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಿದ್ದಿದೆ.

ಈ ಬಗ್ಗೆ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡ ರಾಜ್ಯ ಬಿಜೆಪಿ, ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಬರೆದುಕೊಂಡಿದೆ. ರಾಜ್ಯ ಸರ್ಕಾರದ ಆದೇಶ ಪ್ರತಿಗಳನ್ನು ಹಂಚಿಕೊಂಡ ಬಿಜೆಪಿ, “ಮತಾಂಧರಿಂದ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಎಂ. ಅವರನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರೇ ಬಿಜೆಪಿ ಪಕ್ಷದ ಜೀವಾಳ. ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಬಿಜೆಪಿ” ಎಂದು ಬರೆದುಕೊಂಡಿದೆ. ಇದನ್ನು ತನ್ನ ಟ್ವಿಟರ್ ಖಾತೆಯಲ್ಲೂ ಹಂಚಿಕೊಂಡಿದೆ.

ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದು, ಇದು ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹತ್ತಿಸಿತ್ತು. ಇದರ ಬಿಸಿಗೆ ಬಿಜೆಪಿ ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ನಂತರದ ಬೆಳವಣಿಗೆಯಂತೆ ಕುಟುಂಬಕ್ಕೊಂದು ಉದ್ಯೋಗದ ಆಧಾರ ನೀಡಲು ಪ್ರವೀಣ್ ಪತ್ನಿಗೆ ಸರ್ಕಾರದ ಹುದ್ದೆಯನ್ನು ಕೊಡುವ ಭರವಸೆಯನ್ನು ಮುಖ್ಯಮಂತ್ರಿಯವರು ನೀಡಿದ್ದರು. ಅದರಂತೆ ಈಗ ಗುತ್ತಿಗೆ ಆಧಾರಿತ ಸರ್ಕಾರಿ ಹುದ್ದಿಯನ್ನು ನೀಡಿ ಆದೇಶ ಹೊರಡಿಸಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 pm, Thu, 29 September 22

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ