AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಉದ್ಯೋಗವಕಾಶ: ರೇಷ್ಮೆ, ಕೃಷಿ ಮಾರುಕಟ್ಟೆ ಸೇರಿದಂತೆ ವಿವಿಧ ಇಲಾಖೆಗಳ 415 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕದಲ್ಲಿ 415 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರೇಷ್ಮೆ ಇಲಾಖೆ, ಕೃಷಿ ಮಾರುಕಟ್ಟೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 16 ಕೊನೆಯ ದಿನಾಂಕ. ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಸರ್ಕಾರಿ ಉದ್ಯೋಗವಕಾಶ: ರೇಷ್ಮೆ, ಕೃಷಿ ಮಾರುಕಟ್ಟೆ ಸೇರಿದಂತೆ ವಿವಿಧ ಇಲಾಖೆಗಳ 415 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಸರ್ಕಾರಿ ಉದ್ಯೋಗ
ಅಕ್ಷತಾ ವರ್ಕಾಡಿ
|

Updated on: Nov 24, 2026 | 2:01 PM

Share

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ರಾಜ್ಯದ ರೇಷ್ಮೆ ಇಲಾಖೆ, ಕೃಷಿ ಮಾರುಕಟ್ಟೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 415 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ಸಾರ್ವಜನಿಕ ಅಭಿಯೋಜಕರು ಮತ್ತು ರೇಷ್ಮೆ ನಿರೀಕ್ಷಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಶೈಕ್ಷಣಿಕ ಅರ್ಹತೆಯ ವಿವರ:

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ನಿಗದಿತ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಡಿಪ್ಲೊಮಾ, ಎಲ್‌ಎಲ್‌ಬಿ (LLB), ಬಿಎಸ್ಸಿ (B.Sc), ಯಾವುದೇ ಪದವಿ, ಅಥವಾ ಬಿಇ/ಬಿ.ಟೆಕ್ (BE/B.Tech) ಪದವಿಯನ್ನು ಪೂರ್ಣಗೊಳಿಸಿರಬೇಕು. ಆಯಾ ಹುದ್ದೆಗಳಿಗೆ ನಿಗದಿಪಡಿಸಲಾದ ನಿರ್ದಿಷ್ಟ ವಿದ್ಯಾರ್ಹತೆಯ ಕುರಿತು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಗಮನಿಸುವುದು ಸೂಕ್ತ.

ವಯೋಮಿತಿ ಮಾನದಂಡಗಳು:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಮತ್ತು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು. ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗಲಿದ್ದು, ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾಗಿ ವಯೋಮಿತಿಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ:

ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾಗಿ ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ. ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ-2ಎ, 2ಬಿ, 3ಎ, ಹಾಗೂ 3ಬಿ ಅಭ್ಯರ್ಥಿಗಳಿಗೆ 750ರೂ. ಶುಲ್ಕ ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳಿಗೆ 500ರೂ. ಶುಲ್ಕವಿದ್ದು, ವಿಶೇಷ ಚೇತನ (PwD) ಅಭ್ಯರ್ಥಿಗಳಿಗೆ 250ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಮೊದಲ ಉದ್ಯೋಗ ಪಡೆಯುವುದು ಹೇಗೆ? ಫ್ರೆಶರ್‌ಗಳು ತಿಳಿದುಕೊಳ್ಳಬೇಕಾದ ಪ್ರಮುಖ ವಿಚಾರಗಳಿವು

ಪ್ರಮುಖ ದಿನಾಂಕಗಳ ಪಟ್ಟಿ:

ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ನವೆಂಬರ್ 18 ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 16 ಕೊನೆಯ ದಿನಾಂಕವಾಗಿದ್ದು, ಅರ್ಜಿ ಶುಲ್ಕವನ್ನು ಪಾವತಿಸಲು ಡಿಸೆಂಬರ್ 17 ರವರೆಗೆ ಅವಕಾಶ ನೀಡಲಾಗಿದೆ. ಅಂತಿಮವಾಗಿ, ಅಭ್ಯರ್ಥಿಗಳಿಗೆ ಕಡ್ಡಾಯವಾಗಿರುವ ಕನ್ನಡ ಭಾಷಾ ಪರೀಕ್ಷೆಯನ್ನು ಜನವರಿ 08, 2027 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು, ಅಗತ್ಯವಿರುವ ಶೈಕ್ಷಣಿಕ ದಾಖಲೆಗಳು ಮತ್ತು ಭಾವಚಿತ್ರವನ್ನು ಸರಿಯಾಗಿ ಅಪ್‌ಲೋಡ್ ಮಾಡಬೇಕು. ಶುಲ್ಕ ಪಾವತಿಸಿದ ನಂತರ ಮುಂದಿನ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು