AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Govt Jobs: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿ; 21 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯವು 21 ಸ್ಟೆನೋಗ್ರಾಫರ್ ಗ್ರೇಡ್-3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. PUC/ಡಿಪ್ಲೊಮಾ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 44,425 ರಿಂದ 83,700 ರೂ. ವೇತನ ಸಿಗಲಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು ಸೆಪ್ಟೆಂಬರ್ 15 ಕೊನೆಯ ದಿನಾಂಕ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ, ಈ ಉತ್ತಮ ಸರ್ಕಾರಿ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು.

Karnataka Govt Jobs: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿ; 21 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿImage Credit source: Getty Images
ಅಕ್ಷತಾ ವರ್ಕಾಡಿ
|

Updated on:Aug 21, 2026 | 2:28 PM

Share

ಕರ್ನಾಟಕ ಸರ್ಕಾರಿ ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ 21 ಸ್ಟೆನೋಗ್ರಾಫರ್ ಗ್ರೇಡ್-3 (Stenographer Grade-III) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 21 ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 44,425 ರಿಂದ 83,700ರೂ. ಶ್ರೇಣಿಯಲ್ಲಿ ವೇತನ ದೊರೆಯಲಿದೆ. ಉದ್ಯೋಗದ ಸ್ಥಳ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ, ಪಿಯುಸಿ (PUC) ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಜೊತೆಗೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರಬೇಕು. ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ ಮತ್ತು ಅರ್ಜಿ ಶುಲ್ಕ:

ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಪ್ರವರ್ಗ 2A, 2B, 3A, ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC, ST ಮತ್ತು Cat-I ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇರಲಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200ರೂ. ಮತ್ತು OBC ಅಭ್ಯರ್ಥಿಗಳಿಗೆ 100ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳನ್ನು ಶೀಘ್ರಲಿಪಿ, ಬೆರಳಚ್ಚು ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 17ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ಕೊನೆಯ ದಿನದವರೆಗೂ ಕಾಯದೆ ಅರ್ಹ ಉದ್ಯೋಗಾಕಾಂಕ್ಷಿಗಳು ತಕ್ಷಣವೇ ಅರ್ಜಿ ಸಲ್ಲಿಸುವುದು ಸೂಕ್ತ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​​ಸೈಟ್​​​​ ಗೆ bengalururural.dcourts.gov.in ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:27 pm, Fri, 21 August 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ