ಮಂತ್ರಾಲಯದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಅರವಿಂದ ಲಿಂಬಾವಳಿ

ಮಠದ ವ್ಯಾಪ್ತಿಯಲ್ಲಿ ನಾನಾ ಹಂತಗಳಲ್ಲಿ ಕಾಮಗಾರಿಗಳು ನಡೆಯುತ್ತಿದೆ. ಆದರೆ, ಹಲವು ಸಮಸ್ಯೆಗಳು ಮತ್ತು ಅಡಚಣೆಗಳಿಂದಾಗಿ ಕೆಲಸ ನಿಧಾನವಾಗುತ್ತಿದೆ ಎಂದು ಸಚಿವರಿಗೆ ಮಾಹಿತಿ ನೀಡಲಾಯಿತು.

ಮಂತ್ರಾಲಯದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಅರವಿಂದ ಲಿಂಬಾವಳಿ
ಸಚಿವ ಅರವಿಂದ ಲಿಂಬಾವಳಿ ಮಂತ್ರಾಲಯಕ್ಕೆ ಭೇಟಿ ನೀಡಿದರು
Follow us
TV9 Web
| Updated By: ganapathi bhat

Updated on:Apr 06, 2022 | 7:11 PM

ಮಂತ್ರಾಲಯ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲು ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಕರ್ನಾಟಕ ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಇಂದು (ಮಾರ್ಚ್ 13) ತಿಳಿಸಿದರು. ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ , ದರ್ಶನ ಪಡೆದ ಸಂದರ್ಭದಲ್ಲಿ ಮಠದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈ ಸಮಯದಲ್ಲಿ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಭುಧೇಂದ್ರ ತೀರ್ಥ ಸ್ವಾಮೀಜಿ ಸಚಿವ ಅರವಿಂದ ಲಿಂಬಾವಳಿಗೆ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಸಚಿವ ಅರವಿಂದ ಲಿಂಬಾವಳಿ ಮಂತ್ರಾಲಯ ಗುರು ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿ ಸಮಿತಿ ಸದಸ್ಯರಾಗಿ 2009ರಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶ್ರೀಮಠದ ಕೆಲಸಗಳಲ್ಲಿ ಸಕ್ರಿಯವಾಗಿದ್ದಾರೆ. ಹಾಗಾಗಿ ಲಿಂಬಾವಳಿ ಇಂದು ಮಂತ್ರಾಲಯದ ಅಭಿವೃದ್ಧಿ ಕಾರ್ಯಗಳ ಪರಿವೀಕ್ಷಣೆ ನಡೆಸಿದರು.

ARAVINDA LIMBAVALI VISITS MANTRALAYAM

ಸಚಿವ ಅರವಿಂದ ಲಿಂಬಾವಳಿ ಮಂತ್ರಾಲಯಕ್ಕೆ ಭೇಟಿ ನೀಡಿದರು

ಮಠದ ವ್ಯಾಪ್ತಿಯಲ್ಲಿ ನಾನಾ ಹಂತಗಳಲ್ಲಿ ಕಾಮಗಾರಿಗಳು ನಡೆಯುತ್ತಿದೆ. ಆದರೆ, ಹಲವು ಸಮಸ್ಯೆಗಳು ಮತ್ತು ಅಡಚಣೆಗಳಿಂದಾಗಿ ಕೆಲಸ ನಿಧಾನವಾಗುತ್ತಿದೆ ಎಂದು ಸಚಿವರಿಗೆ ಮಾಹಿತಿ ನೀಡಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು ತಾವು ಈ ಬಗ್ಗೆ ಕೂಡಲೇ ಕ್ರಮ ವಹಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಚಿವರು ನಾಡಿದ್ದು ಮಂತ್ರಾಲಯದಲ್ಲಿ ಉದ್ಘಾಟನೆ ಆಗಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ದೇವರ ದರ್ಶನ ಪಡೆದು ಅಲ್ಲಿನ ಕಾಮಗಾರಿಗಳ ಪರಿಶೀಲನೆ ಸಹ ನಡೆಸಿ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದರು.

ಇದನ್ನೂ ಓದಿ: ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಹುದ್ದೆಗೆ ಅರವಿಂದ ಲಿಂಬಾವಳಿ ರಾಜೀನಾಮೆ

ರಾಯಚೂರು: ಮಂತ್ರಾಲಯದ ಗೋಶಾಲೆಗೆ ಮೇವು ದಾನ ನೀಡಿದ ರೈತರು

Published On - 6:31 pm, Sat, 13 March 21

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ