Lockdown Guidelines: ಕೊರೊನಾ ಸೋಂಕು ಇಳಿಕೆಯತ್ತ ಮುಖ ಮಾಡಿರುವಾಗಲೇ ಲಾಕ್​ಡೌನ್ ನಿಯಮ ಸಡಿಲಿಸಿದ ಕರ್ನಾಟಕ ಸರ್ಕಾರ

ವಕೀಲರ ಕಚೇರಿಗಳಲ್ಲಿ ಕಾರ್ಯನಿರ್ವಹಣೆಗೆ ಅವಕಾಶ ಲಭ್ಯವಾಗಿದೆ. ಹಾಗೂ ಎಲ್ಲಾ ವಸ್ತುಗಳ ಹೋಮ್ ಡೆಲಿವರಿಗೆ ಕೂಡ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಮೂಲಕ ಹೋಮ್ ಡೆಲಿವರಿ ಸಾಧ್ಯವಾಗಿದೆ.

Lockdown Guidelines: ಕೊರೊನಾ ಸೋಂಕು ಇಳಿಕೆಯತ್ತ ಮುಖ ಮಾಡಿರುವಾಗಲೇ ಲಾಕ್​ಡೌನ್ ನಿಯಮ ಸಡಿಲಿಸಿದ ಕರ್ನಾಟಕ ಸರ್ಕಾರ
ಲಾಕ್​ಡೌನ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Aug 21, 2021 | 9:47 AM

ಬೆಂಗಳೂರು: ಕೊರೊನಾ ಸೋಂಕು ಕೊಂಚ ಇಳಿಕೆಯತ್ತ ಮುಖಮಾಡಿರುವ ಹೊತ್ತಲ್ಲಿ ಲಾಕ್‌ಡೌನ್ ನಿಯಮ ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋರ್ಟ್ ಕಾರ್ಯನಿರ್ವಹಣೆ ದಿನಗಳಲ್ಲಿ ವಕೀಲರು, ಪ್ಯಾರಾ ಲೀಗಲ್‌ ಸಿಬ್ಬಂದಿ‌ ಸಂಚಾರಕ್ಕೆ ಅವಕಾಶ ನೀಡಿದೆ. ಐಡಿ ಕಾರ್ಡ್ ತೋರಿಸಿ ಓಡಾಡುವುದಕ್ಕೆ ಅವಕಾಶ ನೀಡಲಾಗಿದೆ.

ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕೋರ್ಟ್ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗಿದೆ. ಈ ಮೂಲಕ, ವಕೀಲರ ಕಚೇರಿಗಳಲ್ಲಿ ಕಾರ್ಯನಿರ್ವಹಣೆಗೆ ಅವಕಾಶ ಲಭ್ಯವಾಗಿದೆ. ಹಾಗೂ ಎಲ್ಲಾ ವಸ್ತುಗಳ ಹೋಮ್ ಡೆಲಿವರಿಗೆ ಕೂಡ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಮೂಲಕ ಹೋಮ್ ಡೆಲಿವರಿ ಸಾಧ್ಯವಾಗಿದೆ.

ಇದಕ್ಕೂ ಮೊದಲು ರಾಜ್ಯ ಸರ್ಕಾರ ಲಾಕ್​ಡೌನ್ ಮಾರ್ಗಸೂಚಿಯಲ್ಲಿ ಪ್ರಮುಖ ಬದಲಾವಣೆಯೊಂದನ್ನು ಮಾಡಿತ್ತು. ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಪರಿಷ್ಕರಣೆ ಮಾಡಲಾಗಿತ್ತು. ಅದರಂತೆ, ಮೃತರ ಅಸ್ಥಿ ವಿಸರ್ಜನೆಗೆ ತೆರಳಲು ಅವಕಾಶ ನೀಡಲಾಗಿತ್ತು. ಅಸ್ಥಿ ವಿಸರ್ಜನೆಗೆ ತೆರಳಲು 4 ಜನರಿಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿತ್ತು.

ಆಯಾ ಧಾರ್ಮಿಕ ವಿಧಾನದಲ್ಲಿ ಅಸ್ಥಿ ವಿಸರ್ಜನೆಗೆ ಅವಕಾಶವಿದೆ. ಅಸ್ಥಿ ವಿಸರ್ಜನೆಗೆ ತೆರಳಲು 4 ಜನರಿಗೆ ಅವಕಾಶ ನೀಡಲಾಗಿದೆ. ಈ ಕಾರ್ಯಕ್ಕೆ ಅಡ್ಡಿಪಡಿಸದಂತೆ ಬಿಬಿಎಂಪಿ ಆಯುಕ್ತರು, ಎಲ್ಲಾ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಎಸ್​ಪಿಗಳಿಗೆ ಸರ್ಕಾರ ಸೂಚನೆ ನೀಡಿತ್ತು.

ಮತ್ತೊಂದೆಡೆ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕದಲ್ಲಿ ಜೂನ್​ 7ರ ತನಕ ಹೇರಲಾಗಿರುವ ಲಾಕ್​ಡೌನ್​ ಇನ್ನಷ್ಟು ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ ಎಂಬ ಮಾಹಿತಿ ಕೇಳಿಬಂದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,000 ಹಾಗೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 500ಕ್ಕೆ ಇಳಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಅನ್‌ಲಾಕ್ ಮಾಡದಿರುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈಗಾಗಲೇ ಲಾಕ್​ಡೌನ್​ಗೆ ಜನರ ಸ್ಪಂದನೆ ಇರುವುದರಿಂದ ಜೂನ್​ ಮಧ್ಯದ ತನಕವೂ ಲಾಕ್​ಡೌನ್ ವಿಸ್ತರಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೂನ್ 5ರಂದು ಇನ್ನೊಂದು ಸುತ್ತಿನ ಸಭೆ ನಡೆಸಲಿದ್ದು, ಆ ಸಭೆಯಲ್ಲಿ ಅಧಿಕೃತ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಕೊರೊನಾ ಚೈನ್ ಲಿಂಕ್ ಕತ್ತರಿಸಲು ಅಧಿಕಾರಿಗಳು ಮತ್ತಷ್ಟು ದಿನದ ಕಾಲಾವಕಾಶ ಕೇಳಿದ್ದು, ಸದ್ಯಕ್ಕೆ ಯಥಾಸ್ಥಿತಿ ಮುಂದುವರೆಸುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಾಧ್ಯವಾದಷ್ಟು ಲಾಕ್​ಡೌನ್ ಈಗಲೇ ಮಾಡುವುದು ಉತ್ತಮ ಎಂದಿರುವ ತಜ್ಞರು. ಅನ್​ಲಾಕ್​ ಮಾಡಿ ಮತ್ತೆ ಸೋಂಕು ಹೆಚ್ಚಾದರೆ ತೊಂದರೆಯಾಗುತ್ತದೆ. ಹೀಗಾಗಿ, ಲಾಕ್​ಡೌನ್ ವಿಸ್ತರಿಸಿ ಲಸಿಕೆ ಪ್ರಮಾಣ ಹೆಚ್ಚಿಸಬೇಕು. ಶೇ.60 ರಷ್ಟು ಜನರಿಗೆ ಲಸಿಕೆ ತಲುಪಿಸಲು ತುರ್ತಾಗಿ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿತ್ತು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಲಾಕ್​ಡೌನ್​ ನಡುವೆ ಬಾಲ್ಯ ವಿವಾಹ; 28 ಬಾಲ್ಯ ವಿವಾಹಗಳನ್ನು ತಡೆದ ಅಧಿಕಾರಿಗಳು

ಬೆಂಗಳೂರಿನಲ್ಲಿ ಲಾಕ್​ಡೌನ್: ನಾನ್ ಯಾರ್ ಗೊತ್ತಾ..? ಮುಟ್ಟಬೇಡ ನನ್ನ ಅಂತಾ ಪೊಲೀಸರಿಗೆ ಅವಾಜ್ ಹಾಕಿದ ಯುವಕ

Published On - 6:21 pm, Wed, 26 May 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ