ಮೇಕೆದಾಟು ಯೋಜನೆಯನ್ನು ಪ್ರಾರಂಭಿಸಲಾಗುವುದು; ಪತ್ರದ ವಿಚಾರಕ್ಕೆ ರಾಜ್ಯ ಸರ್ಕಾರ ಸ್ಪಷ್ಟೀಕರಣ

ಕರ್ನಾಟಕ ಕಾವೇರಿ ನದಿ ಪಾತ್ರದಲ್ಲಿ ನೀರು ಬಳಸಿಕೊಳ್ಳಲು ಆಡಳಿತಾತ್ಮಕ, ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತದೆ. ಮೇಕೆದಾಟು ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಸ್ಪಷ್ಟೀಕರಣ ನೀಡಿದೆ.

ಮೇಕೆದಾಟು ಯೋಜನೆಯನ್ನು ಪ್ರಾರಂಭಿಸಲಾಗುವುದು; ಪತ್ರದ ವಿಚಾರಕ್ಕೆ ರಾಜ್ಯ ಸರ್ಕಾರ ಸ್ಪಷ್ಟೀಕರಣ
ಬಿ ಎಸ್ ಯಡಿಯೂರಪ್ಪ ಮತ್ತು ಎಂ ಕೆ ಸ್ಟಾಲಿನ್
Follow us
TV9 Web
| Updated By: ganapathi bhat

Updated on:Jul 05, 2021 | 10:52 PM

ಬೆಂಗಳೂರು: ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ಗೆ ಪತ್ರ ಬರೆದಿರುವ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟೀಕರಣ ನೀಡಿದೆ. ಯಡಿಯೂರಪ್ಪ ಬರೆದ ಪತ್ರಕ್ಕೆ ಸ್ಟಾಲಿನ್ ಮರು ಉತ್ತರ ಹಿನ್ನೆಲೆ ಮೇಕೆದಾಟು ಯೋಜನೆ ಕುರಿತು ರಾಜ್ಯ ಸರ್ಕಾರ ಸ್ಪಷ್ಟೀಕರಣ ಕೊಟ್ಟಿದೆ. ತಮಿಳುನಾಡಿನಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದಕ್ಕೆ ಪತ್ರ ಬರೆಯಲಾಗಿದೆ. 2 ರಾಜ್ಯಗಳ ನಡುವಿನ ಸೌಹಾರ್ದತೆಯ ಸಲುವಾಗಿ ಪತ್ರ ಬರೆದಿದ್ದೇವೆ. ಯೋಜನೆ ಶೀಘ್ರ ಅನುಷ್ಠಾನದಿಂದಾಗುವ ಅನುಕೂಲ ಉಲ್ಲೇಖ ಮಾಡಲಾಗಿದೆ. ಎರಡು ರಾಜ್ಯಗಳಿಗೆ ಅನುಕೂಲವಾಗುವ ಅಂಶಗಳು ಉಲ್ಲೇಖಿಸಲಾಗಿದೆ.

ಆದ್ರೆ ತಮಿಳುನಾಡು ಸರ್ಕಾರ ಈ ಅಂಶ ಅರ್ಥಮಾಡಿಕೊಂಡಿಲ್ಲ. ಯೋಜನೆಯಿಂದ ತಮ್ಮ ರಾಜ್ಯಕ್ಕೆ ತೊಂದರೆ ಎಂದು ವ್ಯಾಖ್ಯಾನ ಮಾಡಿದೆ. ತಮಿಳುನಾಡಿಗೆ ಯೋಜನೆಯಿಂದ ಯಾವುದೇ ತೊಂದರೆ ಇಲ್ಲ. ವಾಸ್ತವಿಕವಾಗಿ ನೀರಿನ ಹರಿವಿನಲ್ಲಿ ಅನುಕೂಲವಾಗುತ್ತದೆ. ಇದನ್ನು ಸರಿಯಾಗಿ ಅರ್ಥೈಸಿಕೊಳ್ಳದೇ ತಮಿಳುನಾಡು ವಿರೋಧಿಸುತ್ತಿದೆ. ರಾಜಕೀಯ ಕಾರಣಗಳಿಗೆ ತಮಿಳುನಾಡು ಸರ್ಕಾರ ವಿರೋಧ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಈ ಕುರಿತು 2018ರಲ್ಲಿ ತಮಿಳುನಾಡು ದಾವೆ ಸಲ್ಲಿಸಿದೆ. ಆದರೆ, ಯೋಜನೆ ಅನುಷ್ಠಾನಕ್ಕೆ ಯಾವುದೇ ಅಡೆತಡೆ ಇಲ್ಲ. ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲು ಅಗತ್ಯವಿರುವ ತೀರುವಳಿ ಪಡೆಯಲು ಕ್ರಮ ಕೈಗೊಳ್ಳಲಾಗಿದೆ. ಶೀಘ್ರ ತೀರುವಳಿಗಳನ್ನು ಪಡೆದು ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ಕರ್ನಾಟಕ ಕಾವೇರಿ ನದಿ ಪಾತ್ರದಲ್ಲಿ ನೀರು ಬಳಸಿಕೊಳ್ಳಲು ಆಡಳಿತಾತ್ಮಕ, ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತದೆ. ಮೇಕೆದಾಟು ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಸ್ಪಷ್ಟೀಕರಣ ನೀಡಿದೆ.

ಮೇಕೆದಾಟು ಯೋಜನೆ ಸಂಬಂಧ ಬಸವರಾಜ ಬೊಮ್ಮಾಯಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಮೇಕೆದಾಟು ಯೋಜನೆಗೆ ಈಗಾಗಲೇ ಡಿಪಿಆರ್​ ಆಗಿದೆ. ಮೇಕೆದಾಟು ಕುಡಿಯುವ ನೀರಿನ ಯೋಜನೆ 4 ದಶಕದ್ದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಮೇಕೆದಾಟು ಯೋಜನೆಗೆ 4 ಪ್ರಾಜೆಕ್ಟ್​ ಮಾಡಲಾಗಿತ್ತು. ನ್ಯಾಷನಲ್​ ಹೈಡ್ರೋ ಎಲೆಕ್ಟ್ರಿಕ್​ ಕಾರ್ಪೊರೇಷನ್​ನಿಂದ ಇದಕ್ಕೆ ಮಾರ್ಗದರ್ಶನ ನೀಡಲಾಗಿತ್ತು. ಅದಾದ ಮೇಲೆ ಹಲವಾರು ಬಾರಿ ಮಾರ್ಪಾಡುಮಾಡಲಾಗಿದೆ. 2012ರಲ್ಲಿ ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಲಾಗಿತ್ತು. ಕುಡಿಯುವ ನೀರಿನ ಬಳಕೆಗೆ ನಿರ್ಧಾರ ಮಾಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ತಮಿಳುನಾಡು ಈ ವಿಚಾರದಲ್ಲಿ ಹೊಸದಾಗಿ ಆಕ್ಷೇಪ ಮಾಡ್ತಿಲ್ಲ. ಅಲ್ಲಿ ಸರ್ಕಾರ ಬದಲಾಗಿದೆ. ಎರಡೂ ರಾಜ್ಯಗಳಿಗೆ ಅನುಕೂಲ ಆಗತ್ತೆ ಅಂತ ನಾವು ಅರ್ಥ ಮಾಡಿಸುವ ಪ್ರಯತ್ನ ಮಾಡಿದ್ದೆವು. ಆದರೆ ಅವರ ಉತ್ತರದ ವೈಖರಿ ಸರಿಯಾಗಿಲ್ಲ. ನಮ್ಮ ಲೀಗಲ್ ಬ್ಯಾಟಲ್ ನಾವು ಮುಂದುವರಿಸ್ತೇವೆ. ಈ ಯೋಜನೆ ನಾವು ಮಾಡಿಯೇ ಮಾಡ್ತೇವೆ. ಪರಿಸರ ಸಂಬಂಧಿ ಅನುಮತಿ ಕೂಡ ತೆಗೆದುಕೊಳ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಮಾಡಲು ನಿರ್ಧರಿಸಿ ಆಗಿದೆ; ಯಾರನ್ನೋ ಕೇಳಿ ಮಸಾಲೆ ಅರೆಯೋಕಾಗಲ್ಲ: ಆರ್. ಅಶೋಕ್

Mekedatu Project: ಮೇಕೆದಾಟು ವಿವಾದ: ತಮಿಳುನಾಡು ಸಿಎಂ ಸ್ಟಾಲಿನ್​ಗೆ ಅನಗತ್ಯ ಪತ್ರ ಬರೆದು ವಿವಾದಕ್ಕೆ‌ ತುಪ್ಪ ಸುರಿದ ಸಿಎಂ ಯಡಿಯೂರಪ್ಪ

Published On - 10:48 pm, Mon, 5 July 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ