ಗುಡ್​ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

HSRP Number Plate Deadline: ಇನ್ನೂ ತಮ್ಮ ತಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ (HSRP) ಅಳವಡಿಕೆ ಮಾಡದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಈಗಾಗಲೇ ರಾಜ್ಯ ಸರ್ಕಾರ, HSRP ಕೊನೆ ದಿನಾಂಕವನ್ನು ವಿಸ್ತರಿಸುತ್ತಾ ಬಂದಿದೆ. ಇದೀಗ ಮತ್ತೆ ಗಡುವು ವಿಸ್ತರಣೆ ಮಾಡಿದೆ.

ಗುಡ್​ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
HSRP ನಂಬರ್ ಪ್ಲೇಟ್
Follow us
Kiran Surya
| Updated By: ರಮೇಶ್ ಬಿ. ಜವಳಗೇರಾ

Updated on:Dec 01, 2024 | 4:11 PM

ಬೆಂಗಳೂರು, (ಡಿಸೆಂಬರ್ 01): ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಕರ್ನಾಟಕ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೌದು.. ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೆಚ್ಎಸ್ಆರ್​ಪಿ​ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆ ದಿನಾಂಕವಾಗಿತ್ತು. ಇದೀಗ ಸಾರಿಗೆ ಇಲಾಖೆ ಈ ವರ್ಷದ ಕೊನೆಯ (ಡಿಸೆಂಬರ್ 31) ದಿನದ ವರೆಗೆ ಗಡುವು ನೀಡಿದೆ.

ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಕರ್ನಾಟಕದಲ್ಲಿರುವ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳು, ಕೇವಲ 55 ಲಕ್ಷ ವಾಹನಗಳು ಮಾತ್ರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿವೆ. ಹೀಗಾಗಿ 01-04-2019 ರ ಹಿಂದಿನ ಎಲ್ಲಾ ವಾಹನಗಳು ಡಿಸೆಂಬರ್ 31ರೊಳಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ. ಈ ಮೂಲಕ ಐದನೇ ಬಾರಿಗೆ ಗಡವು ವಿಸ್ತರಿಸಿದೆ.

HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?

  • https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು. ಇಲ್ಲಿ Book HSRP ಕ್ಲಿಕ್ ಮಾಡಿ.
  • ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿ.
  • ನಿಮ್ಮ ವಾಹನದ ವಿವರವನ್ನು ಅಲ್ಲಿ ನಮೂದಿಸಿ.
  • ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿ
  • HSRP ನಂಬರ್ ಪ್ಲೇಟ್‌ಗೆ ಅಲ್ಲಿ ನಮೂದಿಸಿದ ಹಣವನ್ನು ಆನ್‌ಲೈನ್‌ನಲ್ಲಿ ಪಾವತಿ ಮಾಡಿ
  • ಮೊಬೈಲ್ ನಂಬರ್‌ಗೆ ಬರುವ ಒಟಿಪಿಯನ್ನು ನಮೂದಿಸಿ
  • HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ಪಡೆದುಕೊಳ್ಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:58 pm, Sun, 1 December 24

ಗುಡುಗುಡು-ಪಟಪಟ ಎಂದ ಹನುಮಂತ: ಪಾಪ ಮೋಕ್ಷಿತಾ ಕಂಗಾಲು
ಗುಡುಗುಡು-ಪಟಪಟ ಎಂದ ಹನುಮಂತ: ಪಾಪ ಮೋಕ್ಷಿತಾ ಕಂಗಾಲು
ಯತ್ನಾಳ್ ಉಚ್ಚಾಟನೆಗೆ ಬಿಗಿಪಟ್ಟು: ಯಡಿಯೂರಪ್ಪ ನಿವಾಸದಲ್ಲಿ ಮಹತ್ವದ ಸಭೆ
ಯತ್ನಾಳ್ ಉಚ್ಚಾಟನೆಗೆ ಬಿಗಿಪಟ್ಟು: ಯಡಿಯೂರಪ್ಪ ನಿವಾಸದಲ್ಲಿ ಮಹತ್ವದ ಸಭೆ
ಚಂಡಮಾರುತ ಎಫೆಕ್ಟ್: ಫ್ಲೈಓವರ್​ ಮೇಲೆ ಕಾರುಗಳ ಪಾರ್ಕಿಂಗ್
ಚಂಡಮಾರುತ ಎಫೆಕ್ಟ್: ಫ್ಲೈಓವರ್​ ಮೇಲೆ ಕಾರುಗಳ ಪಾರ್ಕಿಂಗ್
ಫೆಂಗಲ್ ಚಂಡಮಾರುತ ಎಫೆಕ್ಟ್​​: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಫೆಂಗಲ್ ಚಂಡಮಾರುತ ಎಫೆಕ್ಟ್​​: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಎರಡು ಫ್ಲೋರ್​ಗಳ ನಡುವೆ ನಿಂತ ಲಿಫ್ಟ್​, ಜನರ ಪರದಾಟ
ಎರಡು ಫ್ಲೋರ್​ಗಳ ನಡುವೆ ನಿಂತ ಲಿಫ್ಟ್​, ಜನರ ಪರದಾಟ
ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಮಹತ್ವವೇನು? ವಿಡಿಯೋ ನೋಡಿ
ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಮಹತ್ವವೇನು? ವಿಡಿಯೋ ನೋಡಿ
ವಾರದ ರಾಶಿ ಭವಿಷ್ಯ: ಡಿಸೆಂಬರ್ 2 ರಿಂದ 8ರವರೆಗಿನ 12 ರಾಶಿಗಳ ಭವಿಷ್ಯ
ವಾರದ ರಾಶಿ ಭವಿಷ್ಯ: ಡಿಸೆಂಬರ್ 2 ರಿಂದ 8ರವರೆಗಿನ 12 ರಾಶಿಗಳ ಭವಿಷ್ಯ
Daily Horoscope: ಈ ರಾಶಿಯ ರಾಜಕೀಯದವರು ಇಂದು ಸಿಹಿ ಸುದ್ದಿ ಕೇಳುವರು
Daily Horoscope: ಈ ರಾಶಿಯ ರಾಜಕೀಯದವರು ಇಂದು ಸಿಹಿ ಸುದ್ದಿ ಕೇಳುವರು
ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದ ಡಿಸಿಎಂ ಡಿಕೆ ಶಿವಕುಮಾರ್
ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದ ಡಿಸಿಎಂ ಡಿಕೆ ಶಿವಕುಮಾರ್
ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ದ್ರವ ಪದಾರ್ಥ ಎರಚಿದ ವ್ಯಕ್ತಿ
ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ದ್ರವ ಪದಾರ್ಥ ಎರಚಿದ ವ್ಯಕ್ತಿ