AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಭಕ್ತರಿಗೆ ನೀಡುವ ಪ್ರಸಾದ ಸುರಕ್ಷಿತವಾಗಿದೆ. ಆಹಾರವೂ ಗುಣಮಟ್ಟದಿಂದ ಕೂಡಿದೆ. ಆದರೂ ಈ ಬಗ್ಗೆ ಅನುಮಾನಗಳು ಉಳಿಯಬಾರದು. ಅದಕ್ಕಾಗಿ ಎಲ್ಲ ದೇಗುಲಗಳ ಪ್ರಸಾದ ಪರೀಕ್ಷೆಗೆ ಒಳಪಡಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ
ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ
Ganapathi Sharma
|

Updated on: Sep 21, 2024 | 10:44 AM

Share

ಬೆಂಗಳೂರು, ಸೆಪ್ಟೆಂಬರ್ 21: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.

ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ದೇವಾಲಯಗಳು ಭಕ್ತರಿಗೆ ಪ್ರಸಾದವನ್ನು ನೀಡುತ್ತವೆ.

ಪ್ರಸಾದಗಳ ಪರೀಕ್ಷೆ ಯಾಕೆ? ಸಚಿವರು ಹೇಳಿದ್ದೇನು?

ರಾಜ್ಯದ ದೇವಾಲಯಗಳು ಭಕ್ತರಿಗೆ ಸುರಕ್ಷಿತ ಮತ್ತು ಆರೋಗ್ಯಕರ ಪ್ರಸಾದ ಮತ್ತು ಆಹಾರವನ್ನು ನೀಡುತ್ತವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಮುಜರಾಯಿ ವ್ಯಾಪ್ತಿಯ ದೇಗುಲಗಳ ಪ್ರಸಾದದ ವಿಚಾರದಲ್ಲಿ ಜನರಿಗೆ ಯಾವುದೇ ಅನುಮಾನ ಇರಬಾರದು. ಹೀಗಾಗಿ ಪ್ರಸಾದಗಳ ಪರೀಕ್ಷೆ ನಡೆಸುವಂತೆ ಸುತ್ತೋಲೆ ಹೊರಡಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ದೇವಸ್ಥಾನಗಳಲ್ಲಿ ನಂದಿನಿ ತುಪ್ಪವೇ ಬಳಸಿ: ಸುತ್ತೋಲೆ

ದೇವಾಲಯಗಳಲ್ಲಿ ದೀಪಗಳನ್ನು ಬೆಳಗಲು ಮತ್ತು ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ನಿರ್ದೇಶನ ನೀಡಲಾಗಿದೆ. ಇದಕ್ಕೂ ಮುನ್ನ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಕಾಂಗ್ರೆಸ್ ಸರ್ಕಾರ ದೇವಸ್ಥಾನಗಳಲ್ಲಿ ನೀಡುವ ಪ್ರಸಾದವನ್ನು ಪರೀಕ್ಷಿಸಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ಕರ್ನಾಟಕದ ದೇಗುಲಗಳಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ: ಧಾರ್ಮಿಕ ದತ್ತಿ ಇಲಾಖೆ ಆದೇಶ

ಪ್ರಸ್ತುತ ತಿರುಪತಿ ದೇವಸ್ಥಾನಕ್ಕೆ ಲಡ್ಡು ಪ್ರಸಾದ ತಯಾರಿಲು ನಂದಿನಿ ತುಪ್ಪವನ್ನು ಕರ್ನಾಟಕ ಪೂರೈಸುತ್ತಿದೆ. ಕಳೆದ ವರ್ಷ, ತಿರುಪತಿ ತಿರುಮಲ ದೇವಸ್ಥಾನವು ಕೆಎಂಎಫ್‌ನ ನಂದಿನಿ ತುಪ್ಪ ಮತ್ತು ಇತರ ಉತ್ಪನ್ನಗಳ ಖರೀದಿಯನ್ನು ಬೆಲೆಯ ಕಾರಣವೊಡ್ಡಿ ನಿಲ್ಲಿಸಿತ್ತು. ಕೆಎಂಎಫ್ ಉಲ್ಲೇಖಿಸಿದ ಬೆಲೆಗಳನ್ನು ಟಿಟಿಡಿ ಅನುಮೋದಿಸದೆ ಇತರ ಕಂಪನಿಗಳಿಂದ ತುಪ್ಪವನ್ನು ಖರೀದಿಸಲು ಪ್ರಾರಂಭಿಸಿತ್ತು ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ತಿಳಿಸಿದ್ದರು. ಇದೀಗ ಮತ್ತೆ ನಂದಿನಿ ತುಪ್ಪ ಮತ್ತಿತರ ಉತ್ಪನ್ನಗಳನ್ನು ಖರೀದಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ