ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಶುಲ್ಕ ನಿಗಡಿಪಡಿಸಿದ ಸರ್ಕಾರ; ಎಷ್ಟು ದರ ಎಂಬ ಮಾಹಿತಿ ಇಲ್ಲಿದೆ

ಸದ್ಯ ಬ್ಲ್ಯಾಕ್ ಫಂಗಸ್ ಪತ್ತೆಹಚ್ಚಲು ನಡೆಸುವ ಸಿಟಿ ಸ್ಕ್ಯಾನ್ ಮತ್ತು ಎಮ್​ಆರ್​ಐ ಸ್ಕ್ಯಾನ್​ಗಳಿಗೆ ಖಾಸಗಿ ಆಸ್ಪತ್ರೆಗಳು 25ರಿಂದ 28 ಸಾವಿರ ಶುಲ್ಕ ಪಡೆಯುತ್ತಿದ್ದು, ಇನ್ಮುಂದೆ 12 ಸಾವಿರ ಶುಲ್ಕ ಮಾತ್ರ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಶುಲ್ಕ ನಿಗಡಿಪಡಿಸಿದ ಸರ್ಕಾರ; ಎಷ್ಟು ದರ ಎಂಬ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on:Jun 28, 2021 | 6:22 PM

ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಹಚ್ಚಲು ನಡೆಸುವ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಏಕರೂಪದ ದರವನ್ನು ಸರ್ಕಾರ ಪ್ರಕಟಿಸಿದೆ. ಸದ್ಯ ಬ್ಲ್ಯಾಕ್ ಫಂಗಸ್ ಪತ್ತೆಹಚ್ಚಲು ನಡೆಸುವ ಸಿಟಿ ಸ್ಕ್ಯಾನ್ ಮತ್ತು ಎಮ್​ಆರ್​ಐ ಸ್ಕ್ಯಾನ್​ಗಳಿಗೆ ಖಾಸಗಿ ಆಸ್ಪತ್ರೆಗಳು 25ರಿಂದ 28 ಸಾವಿರ ಶುಲ್ಕ ಪಡೆಯುತ್ತಿದ್ದು, ಇನ್ಮುಂದೆ 12 ಸಾವಿರ ಶುಲ್ಕ ಮಾತ್ರ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಆದರೆ ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಈ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತದೆ.

ಪ್ರತ್ಯೇಕ ಸ್ಕ್ಯಾನ್ ಗಳಿಗೂ ದರ‌ ನಿಗದಿಪಡಿಸಲಾಗಿದೆ. ಬಿಪಿಎಲ್ ಕಾರ್ಡ್ ದಾರರಿಗೆ ಬ್ರೈನ್ ಎಂಆರ್‌ಐ ಸ್ಕ್ಯಾನ್ 3000 ರೂ, ಪಿಎನ್ಎಸ್ ಸ್ಕ್ಯಾನ್ 3000 ರೂ, ಆರ್ಬಿಟ್ಸ್ ಎಂಆರ್‌ಐ 3000 ರೂ, ಮೂರೂ ಸ್ಕ್ಯಾನ್ ಗಳಿಗೆ ಒಟ್ಟು 7500 ರೂ, ಕಾಂಟ್ರಾಸ್ಟ್ ಸ್ಕ್ಯಾನ್ ನ ಎಂಆರ್‌ಐ 1500 ರೂ. ನಿಗದಿಪಡಿಸಲಾಗಿದೆ.

ಎಪಿಎಲ್ ನವರಿಗೆ ಕಾರ್ಡ್ ದಾರರಿಗೆ ಬ್ರೈನ್ ಎಂಆರ್‌ಐ ಸ್ಕ್ಯಾನ್ 4000 ರೂ, ಪಿಎನ್ಎಸ್ ಸ್ಕ್ಯಾನ್ 4000 ರೂಆರ್ಬಿಟ್ಸ್ ಎಂಆರ್‌ಐ 4000 ರೂ, ಮೂರೂ ಸ್ಕ್ಯಾನ್ ಗಳಿಗೆ ಒಟ್ಟು 10,000 ರೂ, ಕಾಂಟ್ರಾಸ್ಟ್ ಸ್ಕ್ಯಾನ್ ಎಂಆರ್‌ಐ 1500 ರೂ. ನಿಗದಿಪಡಿಸಲಾಗಿದೆ.

ರಾಜ್ಯದಲ್ಲಿ ಈವರೆಗೆ 3,232 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿತ್ತು, ಈ ಪೈಕಿ 1,600 ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. 262 ಬ್ಲ್ಯಾಕ್ ಫಂಗಸ್ ರೋಗಿಗಳು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೊರೊನಾ 2ನೇ ಅಲೆಗೆ ತುತ್ತಾದ ಶೇ.95.6ರಷ್ಟು ರೋಗಿಗಳು ಗುಣಮುಖ: ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ಕೊರೊನಾ 2ನೇ ಅಲೆಗೆ ತುತ್ತಾದ ಶೇ.95.6ರಷ್ಟು ರೋಗಿಗಳು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ 3,36,73,392 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ. ಪ್ರತಿನಿತ್ಯ ಒಂದೂವರೆ ಲಕ್ಷ ಜನರಿಗೆ ಟೆಸ್ಟ್ ಮಾಡುತ್ತಿದ್ದೇವೆ. ಕಳೆದ 2 ದಿನಗಳಿಂದ 11 ಜಿಲ್ಲೆಗಳಲ್ಲಿ ಕೊವಿಡ್​ನಿಂದ ಸಾವಾಗಿಲ್ಲ. ಡಾ.ರೆಡ್ಡೀಸ್ ಲ್ಯಾಬ್‌ನಿಂದ 2ಜಿ ಔಷಧ ಬಿಡುಗಡೆಯಾಗಿದೆ. ಈ ಔಷಧವನ್ನು ಖರೀದಿ ಮಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. 3ನೇ ಅಲೆ ವೇಳೆಗೆ ಅಗತ್ಯ ಪ್ರಮಾಣದ ಔಷಧ ಖರೀದಿ ಸಂಗ್ರಹಿಸಲು ತಯಾರಿ ನಡೆಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

1001 ವೈದ್ಯರನ್ನು ಹೊರಗುತ್ತಿಗೆಯಲ್ಲಿ ತೆಗೆದುಕೊಂಡಿದ್ದೇವೆ. ಜಿಲ್ಲಾ, ತಾಲೂಕು ಐಸಿಯುನಲ್ಲಿ ಇವರನ್ನು ನೇಮಿಸುತ್ತೇವೆ. 666 ವೈದ್ಯರನ್ನ ಐಸಿಯುನಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. 248 ವೈದ್ಯರನ್ನು NHMರಡಿಯಲ್ಲಿ ನೇಮಕ ಮಾಡಲಾಗಿದೆ. 90 ವೈದ್ಯರನ್ನ ಸಮುದಾಯ ಆರೋಗ್ಯ ವೈದ್ಯರಾಗಿ ನೇಮಕ ಮಾಡಲಾಗಿದೆ. ಒಟ್ಟಾರೆಯಾಗಿ 2,108 ವೈದ್ಯರನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ 1,740 ವೈದ್ಯರ ನೇರ ನೇಮಕಾತಿ ಮಾಡಲಾಗಿದೆ . ಈ ಮೂಲಕ ಒಟ್ಟು 4 ಸಾವಿರ ವೈದ್ಯರನ್ನು ನೇಮಿಸಿಕೊಳ್ಳಲಾಗಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಇದನ್ನೂ ಓದಿ: ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ..

(Karnataka Govt orders CT and MRI scan fees for Black Fungus checkup in private hospitals)

Published On - 6:02 pm, Mon, 28 June 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ