ಹಣಕಾಸು ಅವ್ಯವಹಾರ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಕರ್ನಾಟಕ ಸರ್ಕಾರ

|

Updated on: Sep 08, 2023 | 9:17 AM

ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಆಪ್ತ, ಜೆಡಿಎಸ್ ಶಾಸಕ ಸಾರಾ ಮಹೇಶ್ ಅವರು ರೋಹಿಣಿ ವಿರುದ್ಧ ಆರ್ಥಿಕ ಅವ್ಯವಹಾರದ ಸರಣಿ ಆರೋಪ ಮಾಡಿದ್ದರು.

ಹಣಕಾಸು ಅವ್ಯವಹಾರ ಆರೋಪ: ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಕರ್ನಾಟಕ ಸರ್ಕಾರ
ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದ ಕರ್ನಾಟಕ ಸರ್ಕಾರ
Follow us on

ಬೆಂಗಳೂರು, ಸೆ.8: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ (2018-19ರಲ್ಲಿ) ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಜೂನ್ 9 ರಂದು ತನಿಖೆಗೆ ಆದೇಶಿಸಲಾಗಿದೆ. ಸದ್ಯ ಇದರ ಪ್ರತಿ ವೈರಲ್ ಮೂಲಕ ಇಲಾಖಾ ತನಿಖೆಗೆ ಆದೇಶಿಸಿರುವುದು ಬೆಳಕಿಗೆ ಬಂದಿದೆ.

ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಹೊರಡಿಸಿರುವ ಆದೇಶದ ಪ್ರಕಾರ, ಕೇಂದ್ರ ನಿಯೋಜನೆಯಲ್ಲಿರುವ ಹಿರಿಯ ಕರ್ನಾಟಕ-ಕೇಡರ್ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶಿಸಿರುವುದು ಇದು ಮೂರನೇ ಬಾರಿ. ಜೆಡಿಎಸ್ ಶಾಸಕ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಆಪ್ತರಾಗಿದ್ದ ಎಸ್‌ಆರ್ ಮಹೇಶ್ ಅವರು ರೋಹಿಣಿ ವಿರುದ್ಧ ಆರ್ಥಿಕ ಅವ್ಯವಹಾರದ ಸರಣಿ ಆರೋಪ ಮಾಡಿದ್ದರು.

ಇದನ್ನೂ ಓದಿ: ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸರ್ಕಾರದ ಸರಕುಗಳ ಭಾಗವಾಗಿ 52 ರೂ.ಗೆ ಕಳಪೆ ಗುಣಮಟ್ಟದ ಚೀಲಗಳನ್ನು ಖರೀದಿಸಿದ್ದಾರೆ ಎಂದು ಎಸ್‌ಆರ್ ಮಹೇಶ್ ಅವರು ಆರೋಪಿಸಿದ್ದರು. ಅಲ್ಲದೆ, ಇದು ಮಾರುಕಟ್ಟೆಯಲ್ಲಿ 10-13 ರೂ.ಗೆ ಲಭ್ಯವಿದೆ ಎಂದು ಹೇಳಿದ್ದರು.

ಅವರು ತಮ್ಮ ಅಧಿಕೃತ ನಿವಾಸವನ್ನು ಅಕ್ರಮವಾಗಿ ನವೀಕರಿಸಿದ್ದಾರೆ ಮತ್ತು ಈಜುಕೊಳ ಮತ್ತು ಜಿಮ್ ಅನ್ನು ನಿರ್ಮಿಸಿದ್ದಾರೆ ಅಂತಾನೂ ಆರೋಪಿಸಿದ್ದರು. ಈ ಆರೋಪಗಳ ನಂತರ, ರೋಹಿಣಿ ಅವರನ್ನು ಆರಂಭದಲ್ಲಿ ಮುಜರಾಯಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಕಳೆದ ವರ್ಷ ಅವರ ವಿರುದ್ಧ ತನಿಖೆಗೆ ಆದೇಶಿಸಿದ ನಂತರ ಯಾವುದೇ ಹುದ್ದಿ ನಿಗದಿ ಮಾಡದೆ ಬಿಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ