AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಇನ್ಮುಂದೆ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್ ಕಡ್ಡಾಯ

ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಲ್ಲಾ ಉತ್ಪನ್ನಗಳ ಲೇಬಲ್‌ಗಳಲ್ಲಿ ಇಂಗ್ಲಿಷ್ ಜೊತೆಗೆ ಕನ್ನಡ ಭಾಷೆಯನ್ನು ಸೇರಿಸಲು ಕ್ರಮಕೈಗೊಳ್ಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್​ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ ಎನ್ನುವುದನ್ನು ನೋಡಿ.

ಕರ್ನಾಟಕದಲ್ಲಿ ಇನ್ಮುಂದೆ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್ ಕಡ್ಡಾಯ
Kannada
Follow us
ರಮೇಶ್ ಬಿ. ಜವಳಗೇರಾ
|

Updated on:Feb 28, 2025 | 8:52 PM

ಬೆಂಗಳೂರು, (ಫೆಬ್ರವರಿ 28):  ದಕ್ಷಿಣ ಭಾರತದ ರಾಜ್ಯದ ಮೇಲೆ ಹಿಂದಿ ಹೇರಿಕೆ ನಡುವೆ ಸಿದ್ದರಾಮಯ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ.  ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್​ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಇಂದು (ಫೆಬ್ರವರಿ 28) ಅಧಿಕೃತ ಸುತ್ತೋಲೆ  ಹೊರಡಿಸಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಅಡಿಯಲ್ಲಿ ಸುತ್ತೋಲೆ ಹೊರಡಿಸಿದ್ದು, ಒಂದು ಭಾಷೆ ಬೆಳವಣಿಗೆ ಆಗಬೇಕಿದ್ರೆ ಆ ನೆಲದಲ್ಲಿ ಉತ್ಪಾದನೆ, ಮಾರುಕಟ್ಟೆ ಮತ್ತು ವ್ಯವಹಾರ ಗಳು ಸ್ಥಳೀಯ ಭಾಷೆಯಲ್ಲಿ ಇರಬೇಕು. ಹೀಗಾಗಿ ರಾಜ್ಯದಲ್ಲಿ ತಯಾರಾಗುವ ಸರ್ಕಾರಿ ಮತ್ತು ಖಾಸಗಿ ಉತ್ಪನ್ನ ಗಳ ಮೇಲೆ ಕನ್ನಡ ಕಡ್ಡಾಯವಾಗಿರಬೇಕು ಉತ್ಪನ್ನದ ಹೆಸರು ಮತ್ತು ಅವುಗಳ ನಿರ್ದೇಶನವು ಕನ್ನಡ ಭಾಷೆಯಲ್ಲಿ ಇರಬೇಕು. ಸರ್ಕಾರಿ ಮತ್ತು ಖಾಸಗಿ ಉತ್ಪಾದಕರ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಲಾಗಿದೆ.

69ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, “ಖಾಸಗಿ ಅಥವಾ ಸರ್ಕಾರಿ ವಲಯದಿಂದ ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳು ಸಾಮಾನ್ಯವಾಗಿ ಇಂಗ್ಲಿಷ್‌ನಲ್ಲಿ ಮಾತ್ರ ಲೇಬಲ್‌ಗಳನ್ನು ಹೊಂದಿರುತ್ತವೆ. ಭವಿಷ್ಯದಲ್ಲಿ, ನಾವು ಕನ್ನಡವನ್ನೂ ಸೇರಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಹೇಳಿದ್ದರು. ಅದರಂತೆ ಇದೀಗ ಉತ್ಪನ್ನಗಳ ಇತರೆ ಭಾಷೆಯ ಜೊತೆ ಕನ್ನಡ ಕಡ್ಡಾಯವಾಗಿ ಇರಬೇಕೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.

ಸುತ್ತೋಲೆಯಲ್ಲೇನಿದೆ?

ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಕೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸವಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿ೦ದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾ೦ಕ: 12.03.2024 ರಿಂದ ಜಾರಿಗೆ ತಂದಿರುತ್ತದೆ. ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು  ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಲೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಮಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Published On - 8:49 pm, Fri, 28 February 25

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ