Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ್ತೊಂದು ಶಾಕ್, 40 ಪರ್ಸೆಂಟ್​ ಕಮಿಷನ್ ಆರೋಪ ಪ್ರಕರಣ​ ನ್ಯಾಯಾಂಗ ತನಿಖೆಗೆ ಆದೇಶಿಸಿದ ಸರ್ಕಾರ

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರ ಹಾಗೂ 40 ಪರ್ಸೆಂಟ್​ ಆರೋಪ ಪ್ರಕರಣವನ್ನು ರಾಜ್ಯ ಕಾಂಗ್ರೆಸ್​​ ಸರ್ಕಾರ ಕೊನೆಗೂ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಬಿಜೆಪಿಗೆ ಮತ್ತೊಂದು ಶಾಕ್,  40 ಪರ್ಸೆಂಟ್​ ಕಮಿಷನ್ ಆರೋಪ ಪ್ರಕರಣ​ ನ್ಯಾಯಾಂಗ ತನಿಖೆಗೆ ಆದೇಶಿಸಿದ ಸರ್ಕಾರ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Follow us
ರಮೇಶ್ ಬಿ. ಜವಳಗೇರಾ
|

Updated on:Aug 18, 2023 | 10:28 AM

ಬೆಂಗಳೂರು, (ಆಗಸ್ಟ್ 18): ವಿಧಾನಸಭಾ ಚುನಾವಣೆ (Karnataka Assembly Elections 2023) ಮುನ್ನ ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಬಿಜೆಪಿ(BJP) ಸರಕಾರದ 40 ಪರ್ಸೆಂಟ್ ಕಮಿಷನ್ ಆರೋಪವನ್ನು(40 per cent allegation) ಇದೀಗ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ. ರಾಜ್ಯ ಗುತ್ತಿಗೆದಾರರ ಸಂಘದ ಕೆಂಪಣ್ಣ ಮಾಡಿದ್ದ ಕಮಿಷನ್ ಆರೋಪದ ತನಿಖೆಯನ್ನು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಎಚ್​ಎನ್​ ನಾಗಮೋಹನ್​ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ವಿವರವಾದ ತನಿಖೆ ನಡೆಸಿ, ಲೋಪದೋಷಗಳ ಮಾಹಿತಿ ಹಾಗೂ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು  ಒಂದು ತಿಂಗಳು ದಿನಗಳ ಒಳಗೆ ನೀಡಬೇಕು. ಹಾಗೇ ಈ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಕಡತ, ದಾಖಲೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಈ ತನಿಖಾ ಸಮಿತಿಗೆ ನೀಡಬೇಕೆಂದು ಆದೇಶದಲ್ಲಿ ಸೂಚಿಸಿದೆ.

ಇದನ್ನೂ ಓದಿ: ಕರ್ನಾಟಕದ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಹಿಡಿದ ಸರ್ಕಾರ

ಇನ್ನು ತನಿಖಾ ಸಮಿತಿಯು ಸ್ಥಳ ಪರಿಶೀಲನೆ ವೇಳೆ  ಖುದ್ದು ಹಾಜರಿದ್ದು, ತನಿಖೆಗೆ ಸಹಕಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ತನಿಖೆಗೆ ಸಂಬಂಧಿಸಿದಂತೆ ಸಹಾಯಕ್ಕೆ ಅಗತ್ಯವಿರುವ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು ಹಾಗೂ ಆಡಳಿತಾತ್ಮಕ ಸಲಹೆಗಾರರನ್ನು ತೆಗೆದುಕೊಳ್ಳಬಹುದು ಎಂದು ಸಮಿತಿಗೆ ಆದೇಶದಲ್ಲಿ ತಿಳಿಸಿದೆ.

ಬಿಟ್‌ ಕಾಯಿನ್‌ ಹಗರಣದ ಕುರಿತು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮೂಲಕ ಮರು ತನಿಖೆಗೆ ಆದೇಶ ಹೊರಬಿದ್ದ ಬೆನ್ನಲ್ಲೇ ಹಿಂದಿನ ಬಿಜೆಪಿ ಅಧಿಕಾರಾವಧಿಯ ಈ ಮತ್ತೊಂದು ಗಂಭೀರ ಪ್ರಕರಣವಾದ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಈ ಕಮಿಷನ್‌ ದಂಧೆ ಆರೋಪವನ್ನು ನ್ಯಾಯಾಂಗ ತನಿಖೆಗೊಪ್ಪಿಸುವ ಮೂಲಕ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ.

 ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:11 am, Fri, 18 August 23

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ