ಕೊವಿಡ್ ದೃಢಪಟ್ಟ 1 ಗಂಟೆಯೊಳಗೆ ಐಸೋಲೇಶನ್ ಕಿಟ್ ಮನೆ ಬಾಗಿಲಿಗೆ; ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

Home Isolation Kit: ಸರ್ಕಾರ 10 ದಿನಕ್ಕೆ ಆಗುವಷ್ಟು ಔಷಧಿಯುಳ್ಳ ಕಿಟ್‌ ನೀಡಲಿದ್ದು, ಮೇ 15ರಿಂದಲೇ ಮೆಡಿಕಲ್​ ಕಿಟ್​ಗಳ ಹಂಚಿಕೆ ನಡೆಸಲು ನಿರ್ಧರಿಸಲಾಗಿದೆ. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು ಸೇರಿ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಮೆಡಿಕಲ್​ ಕಿಟ್​ಗಳು ಲಭ್ಯವಿರಲಿವೆ.

ಕೊವಿಡ್ ದೃಢಪಟ್ಟ 1 ಗಂಟೆಯೊಳಗೆ ಐಸೋಲೇಶನ್ ಕಿಟ್ ಮನೆ ಬಾಗಿಲಿಗೆ; ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಪ್ರಾತಿನಿಧಿಕ ಚಿತ್ರ
Follow us
|

Updated on:May 13, 2021 | 8:33 PM

ಬೆಂಗಳೂರು: ಕೊವಿಡ್ ಸೋಂಕು ದೃಢಪಟ್ಟ 1 ಗಂಟೆಯೊಳಗೆ ಹೋಂ ಐಸೋಲೇಷನ್ ಕಿಟ್​ನ್ನು ಹೋಂ ಐಸೋಲೇಷನ್​ ಆದವರಿಗೆ ತಲುಪಿಸಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ 5 ಲಕ್ಷ ಮೆಡಿಕಲ್​ ಕಿಟ್ ಖರೀದಿಗೆ ಸರ್ಕಾರ ಆದೇಶಿಸಿದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಕಿಟ್‌ ಖರೀದಿಸಲು ನಿರ್ಧರಿಸಲಾಗಿದೆ. ಕಿಟ್‌ನಲ್ಲಿ ರೋಗ ಮತ್ತು ಸೋಂಕು ನಿರೋಧಕ ಔಷಧಗಳು, ವೈರಸ್‌ ನಿರೋಧಕ, ವಿಟಮಿನ್‌ ಮಾತ್ರೆ ಸೇರಿ ಅಗತ್ಯ ಔಷಧ ವಸ್ತುಗಳು ಇರಲಿವೆ.

ಸರ್ಕಾರ 10 ದಿನಕ್ಕೆ ಆಗುವಷ್ಟು ಔಷಧಿಯುಳ್ಳ ಕಿಟ್‌ ನೀಡಲಿದ್ದು, ಮೇ 15ರಿಂದಲೇ ಮೆಡಿಕಲ್​ ಕಿಟ್​ಗಳ ಹಂಚಿಕೆ ನಡೆಸಲು ನಿರ್ಧರಿಸಲಾಗಿದೆ. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು ಸೇರಿ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಮೆಡಿಕಲ್​ ಕಿಟ್​ಗಳು ಲಭ್ಯವಿರಲಿವೆ.

ಇಂದು ನಡೆದ ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಣಿಸಿಕೊಳ್ಳಬಹುದಾದ ಕೊವಿಡ್ 3ನೇ ಅಲೆ ತಡೆಯಲು ಡಾ.ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ತಮ್ಮ ಸಚಿವ ಸಂಪುಟದ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ಅರವಿಂದ ಲಿಂಬಾವಳಿ,ಡಾ.ಸುಧಾಕರ್ ಅವರ ಜತೆ ರಾಜ್ಯದಲ್ಲಿ ಕೊವಿಡ್ ತಡೆ ಮತ್ತು ನಿರ್ವಹಣೆ ಕುರಿತ ಸುದ್ದಿಗೋಷ್ಠಿಯಲ್ಲಿ ಹಲವು ಮಾಹಿತಿಗಳನ್ನು ತೆರೆದಿಟ್ಟರು.

18-44ವರ್ಷದೊಳಗಿನವರಿಗೆ ಲಸಿಕೆ ವಿತರಣೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದೇವೆ. ಅಗತ್ಯ ಪ್ರಮಾಣದ ಲಸಿಕೆ ಖರೀದಿಸಲು ಜಾಗತಿಕ ಟೆಂಡರ್ ಕರೆದಿದ್ದೇವೆ ರೆಮ್​ಡಿಸಿವಿರ್ ಪೂರೈಸದ ಕಂಪನಿಗಳಿಗೆ ನೋಟಿಸ್ ನೀಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಬಳಕೆಯಾಗದೆ ಉಳಿದ ರೆಮ್​ಡಿಸಿವಿರ್ ಪೂರೈಕೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಅವರು ತಿಳಿಸಿದರು. ಕೊರೊನಾ ಹೆಚ್ಚಾಗಿದ್ದರಿಂದ ಸೋಂಕಿತರ ಜೀವ ಮುಖ್ಯ. ಸದ್ಯ ಸೋಂಕಿತರ ಜೀವ ಉಳಿಸಲು ಆದ್ಯತೆ ನೀಡುತ್ತೇವೆ. ಜನರ ಸಂಕಷ್ಟ ಅರಿತು ಮುಂದಿನ ದಿನಗಳಲ್ಲಿ ಪ್ಯಾಕೇಜ್​ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ತಿಳಿಸಿದರು.

ಕೊವಿಡ್ ವಿರುದ್ಧದ ಹೋರಾಟದಲ್ಲಿ ರಾಜ್ಯ ಮುಂದೆ ಕೊರೊನಾ ವಿರುದ್ಧ ಹೋರಾಡುತ್ತಿರುವ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಕೊವಿಡ್ 1ನೇ ಅಲೆ ಮತ್ತು 2ನೇ ಅಲೆ ನಡುವೆ ತಯಾರಿಗೆ 5ರಿಂದ6 ತಿಂಗಳು ಸಮಯವಿತ್ತು. ಆಗ ಸರಿಯಾದ ಸಿದ್ಧತೆ ಆಗಿರಲಿಲ್ಲ. ಆದರೆ ಈಗ ಕರ್ನಾಟಕ ದೇಶದಲ್ಲೇ ಕೊವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದೆ. ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಶೇ.50ರಷ್ಟು ಐಸಿಯು ಬೆಡ್​ಗಳಿವೆ ಇವೆ. ಈ ಮುನ್ನ ಯಾವುದೇ ತಾಲೂಕಾ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಇರಲಿಲ್ಲ ಎಂದು ವಿವರಿಸಿದರು.

ಇದನ್ನೂ ಓದಿ: Covid-19 Positivity Rate: ಕೊವಿಡ್ ಪಾಸಿಟಿವಿಟಿ ರೇಟ್​ನಲ್ಲಿ ಉತ್ತರ ಕನ್ನಡ ನಂ.1: ಇದು ಗಾಬರಿ ಹುಟ್ಟಿಸುವ ವಿಚಾರ

Karnataka SSLC Exam 2021: ಜೂ.21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ

(Karnataka Govt orders provide Isolation kit to the doorstep within 1 hour of being confirmed by Covid 19 )

Published On - 8:32 pm, Thu, 13 May 21

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ