AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2500 ರೂ ಬರ ಪರಿಹಾರ ಬಿಡುಗಡೆಗೆ ಸರ್ಕಾರ ಆದೇಶ: ಈ ಹಣ ಪಡೆಯಲು ರೈತರು ಹೀಗೆ ಮಾಡಬೇಕು

ಕರ್ನಾಟಕ ಸರ್ಕಾರವು ರೈತರಿಗೆ 2500 ರೂ. ಬರ ಪರಿಹಾರ ಬಿಡುಗಡೆಗೊಳಿಸಲು ಆದೇಶಿಸಿದೆ. ವಿಶೇಷ ಅಧಿವೇಶನದಲ್ಲಿ ನೀಡಿದ್ದ ಭರವಸೆಯಂತೆ, ಬರಗಾಲದಿಂದ ತತ್ತರಿಸಿದ ರೈತರಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಹಾಗಾದರೆ ರೈತರು ಈ ಬರ ಪರಿಹಾರ ಪಡೆದುಕೊಳ್ಳುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2500 ರೂ ಬರ ಪರಿಹಾರ ಬಿಡುಗಡೆಗೆ ಸರ್ಕಾರ ಆದೇಶ: ಈ ಹಣ ಪಡೆಯಲು ರೈತರು ಹೀಗೆ ಮಾಡಬೇಕು
ವಿಧಾನಸೌಧ Image Credit source: Getty images
ಪ್ರಸನ್ನ ಗಾಂವ್ಕರ್​
| Edited By: |

Updated on: Oct 29, 2026 | 3:19 PM

Share

ಮುಖ್ಯಾಂಶಗಳು

  • ರೈತರಿಗೆ 2500 ರೂ. ಬರ ಪರಿಹಾರ ಬಿಡುಗಡೆಗೊಳಿಸಿ ಸರ್ಕಾರದ ಆದೇಶ
  • ರೈತರ ಖಾತೆಗೆ ಹಣ ಬಿಡುಗಡೆ ಮಾಡಲು ಆದೇಶಿಸಿರುವ ರಾಜ್ಯ ಸರ್ಕಾರ
  • ಬರ ಪರಿಹಾರ ನೀಡುವುದಾಗಿ ವಿಶೇಷ ಅಧಿವೇಶನದಲ್ಲಿ ಘೋಷಿಸಿದ್ದ ಸರ್ಕಾರ

ಬೆಂಗಳೂರು, ಅಕ್ಟೋಬರ್​​ 29: ಬರ ಪರಿಹಾರ ನೀಡುವುದಾಗಿ ವಿಶೇಷ ಅಧಿವೇಶನದಲ್ಲಿ ಇತ್ತೀಚೆಗೆ ಸರ್ಕಾರ ಘೋಷಿಸಿತ್ತು. ಆ ಮೂಲಕ ಮಳೆಯಿಲ್ಲದೆ ಬರದಿಂದ ಕಂಗೆಟ್ಟಿರುವ ಅನ್ನದಾತರ ನೆರವಿಗೆ ಸರ್ಕಾರ ಮುಂದಾಗಿತ್ತು. ಅದರಂತೆ ಬರ ಪೀಡಿತ ತಾಲೂಕುಗಳ ರೈತರಿಗೆ 2,500 ರೂ ಪರಿಹಾರ ಕೊಡಲು ನಿರ್ಧರಿಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ರೈತರು ಸೇರಿದಂತೆ ರಾಜಕೀಯ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಣಕ್ಕೆ ಏನೂ ಬರಲ್ಲ, 25000 ರೂ ಪರಿಹಾರ ನೀಡುವಂತೆ ಆಗ್ರಹಿಸಿದ್ದರು. ವಿರೋಧದ ಮಧ್ಯೆ ಇದೀಗ ಸರ್ಕಾರ ರೈತರಿಗೆ 2500 ರೂ. ಬರ ಪರಿಹಾರ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ರೈತರಿಗೆ ಪರಿಹಾರ

ಕರ್ನಾಟಕದ ಒಟ್ಟು 240 ತಾಲ್ಲೂಕುಗಳ ಪೈಕಿ 226 ತಾಲ್ಲೂಕು ಬರಪೀಡಿತ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ಎನ್​​ಡಿಆರ್​ಎಫ್​ ಅನುದಾನ ಬಿಡುಗಡೆಯಾಗುವವರೆಗೆ ಕಾಯದೆ, ರಾಜ್ಯ ಸರ್ಕಾರವು ತನ್ನದೇ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಪರಿಹಾರ ನೀಡಿದೆ. ಮೊದಲನೇ ಕಂತಾಗಿ ಪ್ರತಿ ರೈತನಿಗೆ 2,500 ರೂ ಪರಿಹಾರ ನೀಡಲು ಸರ್ಕಾರ ಮಂಜೂರಾತಿ ನೀಡಿದೆ.

ಬರ ಪರಿಹಾರದ ಹಣ ಪಡೆದುಕೊಳ್ಳಲು ರೈತರು ಏನು ಮಾಡಬೇಕು?

ರೈತರು ಯಾವುದೇ ಪ್ರತ್ಯೇಕ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಇನ್ನು 2500 ರೂ. ಬರ ಪರಿಹಾರ ಪಡೆಯಲು ರೈತರು ಯಾವುದೇ ಪ್ರತ್ಯೇಕ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಇ-ಆಡಳಿತದ ಫ್ರೂಟ್ಸ್ (ರೈತರ ನೋಂದಣಿ ಮತ್ತು ಏಕೀಕರತ ಫಲಾನುಭವಿ ಮಾಹಿತಿ ವ್ಯವಸ್ಥೆ) ತಂತ್ರಾಂಶ ಹಾಗೂ ಮುಂಗಾರು ಬೆಳೆ ಸಮೀಕ್ಷೆಯ ದತ್ತಾಂಶದ ಆಧಾರದ ಮೇಲೆ ನೇರವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

LIVE TV

ಯಾರಿಗೆಲ್ಲಾ ಸಿಗಲಿದೆ ಬರ ಪರಿಹಾರ?

ಆಧಾರ್ ಸಂಖ್ಯೆ ಲಿಂಕ್​​ ಆಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಅತೀ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರಿಂದ ಹಿಡಿದು ದೊಡ್ಡ ರೈತರವರೆಗೆ ಆರೋಹಣ ಕ್ರಮದಲ್ಲಿ ಹಣ ಪಾವತಿ ಮಾಡಲಗುತ್ತದೆ. ಮೊದಲು ಮಳೆಯಾಶ್ರಿತ ಬೆಳೆ, ನಂತರ ನೀರಾವರಿ ಮತ್ತು ಕೊನೆಯದಾಗಿ ಬಹುವಾರ್ಷಿಕ ಬೆಳೆಗಳಿಗೆ ಪರಿಹಾರ ನೀಡಲಾಗುತ್ತದೆ. ಒಬ್ಬ ರೈತನಿಗೆ ಗರಿಷ್ಠ 2 ಹೆಕ್ಟೇರ್‌ಗೆ ಮಾತ್ರ ಈ ಪರಿಹಾರ ಸೀಮಿತವಾಗಿದೆ.

ಇದನ್ನೂ ಓದಿ: ಬರ ಪರಿಹಾರಕ್ಕಾಗಿ 20,585.73 ಕೋಟಿ ರೂ. ಬಿಡುಗಡೆಗೆ ಆಗ್ರಹಿಸಿ ಮತ್ತೆ ಕೇಂದ್ರಕ್ಕೆ ಪತ್ರ ಬರೆದ ಡಿಸಿಎಂ ಪರಮೇಶ್ವರ್​​

ಕೃಷಿಯೇತರ ಉದ್ದೇಶಕ್ಕೆ ಭೂ-ಪರಿವರ್ತನೆ ಆದ ಜಮೀನುಗಳು, ನೀರಾವರಿ ಯೋಜನೆಗಳಿಗೆ ಭೂಸ್ವಾಧೀನವಾಗಿರುವ ಪ್ರದೇಶಗಳು ಮತ್ತು ಸರ್ಕಾರಿ ಜಮೀನುಗಳಿಗೆ ಪರಿಹಾರ ನೀಡುವುದಿಲ್ಲ. ಪರಿಹಾರ ಪಾವತಿಗೆ ಜಿಲ್ಲಾಧಿಕಾರಿಗಳು ಡಿಜಿಟಲ್ ಸಹಿ ಮೂಲಕ ಅನುಮೋದನೆ ನೀಡಬೇಕು. ವಿತರಿಸಲಾದ ಎಲ್ಲಾ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ‘ಪರಿಹಾರ’ ತಂತ್ರಾಂಶದ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ. NDRF ಅನುದಾನ ಬಂದ ನಂತರ SDRF ಮಾರ್ಗಸೂಚಿ ಅನ್ವಯ ಬಾಕಿ ಉಳಿದ ಹೆಚ್ಚುವರಿ ಪರಿಹಾರ ಮೊತ್ತವನ್ನು ಅರ್ಹ ರೈತರಿಗೆ ಬಿಡುಗಡೆ ಮಾಡಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More