ದಿನಗೂಲಿ ನೌಕರರಿಗೆ ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ
ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರ ಅಡಿಯಲ್ಲಿ ಸೇವೆಯನ್ನು ಮುಂದುವರೆಸಲು ಅರ್ಹರಾಗಿರುವ ದಿನಗೂಲಿ ನೌಕರರಿಗೆ ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯಲ್ಲಿ ಕನಿಷ್ಠ ವೇತನವನ್ನು ಪಾವತಿಸಬೇಕೆಂದು ಸರ್ಕಾರವು ಆದೇಶಿಸಿದೆ.
ಬೆಂಗಳೂರು, ಸೆಪ್ಟೆಂಬರ್ 21: ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ 2024 ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ದಿನಗೂಲಿ ನೌಕರರಿಗೆ (wage workers) ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ದಿನಗೂಲಿ ನೌಕರರಿಗೆ ಸರ್ಕಾರದಿಂದ ದಸರಾ ಗಿಫ್ಟ್ ಸಿಕ್ಕಿದೆ.
ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರ ಅಡಿಯಲ್ಲಿ ಸೇವೆಯನ್ನು ಮುಂದುವರೆಸಲು ಅರ್ಹರಾಗಿರುವ ದಿನಗೂಲಿ ನೌಕರರಿಗೆ ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯಲ್ಲಿ ಕನಿಷ್ಠ ವೇತನವನ್ನು ಪಾವತಿಸಬೇಕೆಂದು ಸರ್ಕಾರವು ಆದೇಶಿಸಿದೆ.
ಇದನ್ನೂ ಓದಿ: ಕರ್ನಾಟಕ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಿದ್ದರಾಮಯ್ಯ ಸರ್ಕಾರ
ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡಾ 75 ರಷ್ಟು, ಅವರ ಕರ್ತವ್ಯದ ಸ್ಥಳಕ್ಕೆ ಕಾಲಕಾಲಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆಯ ಸಾಮಾನ್ಯ ದರದ ಶೇಕಡಾ 75 ರಷ್ಟು ರಾಜ್ಯ ಸರ್ಕಾರಿ ನೌಕರರು ಅರ್ಹ ದಿನಗೂಲಿ ನೌಕರರಿಗೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡುವಂತೆ ಆದೇಶಿಸಲಾಗಿದೆ. ಇವರುಗಳು ಅರ್ಹರಿರುವ ಇತರೆ ಸೌಲಭ್ಯಗಳ ಕುರಿತು ಆದೇಶಿಸಲಾಗಿದೆ.
ಇದನ್ನೂ ಓದಿ: ರಾಜ್ಯ ನೌಕರರಿಗೆ ಎಷ್ಟು ಸಿಗಲಿದೆ ವೇತನ? 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಬಗ್ಗೆ ಅಧ್ಯಕ್ಷ ಬಿಚ್ಚಿಟ್ಟ ಮಾಹಿತಿ
7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಗಳನ್ನು ಸರ್ಕಾರವು ಮಂಜೂರು ಮಾಡುತ್ತದೆ. ಕಾಯ್ದೆ ನಿಬಂಧನೆಗಳು ಮತ್ತು ಸರ್ಕಾರಿ ಆದೇಶಗಳ ಪ್ರಕಾರ ಅರ್ಹ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ಪ್ರಯೋಜನಗಳನ್ನು ಪರಿಷ್ಕರಿಸಲು ಮತ್ತು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:59 pm, Sat, 21 September 24