ದಿನಗೂಲಿ ನೌಕರರಿಗೆ ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ

ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರ ಅಡಿಯಲ್ಲಿ ಸೇವೆಯನ್ನು ಮುಂದುವರೆಸಲು ಅರ್ಹರಾಗಿರುವ ದಿನಗೂಲಿ ನೌಕರರಿಗೆ ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯಲ್ಲಿ ಕನಿಷ್ಠ ವೇತನವನ್ನು ಪಾವತಿಸಬೇಕೆಂದು ಸರ್ಕಾರವು ಆದೇಶಿಸಿದೆ.

ದಿನಗೂಲಿ ನೌಕರರಿಗೆ ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ
ದಿನಗೂಲಿ ನೌಕರರಿಗೆ ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ
Edited By:

Updated on: Sep 21, 2024 | 7:47 PM

ಬೆಂಗಳೂರು, ಸೆಪ್ಟೆಂಬರ್​ 21: ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ 2024 ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ದಿನಗೂಲಿ ನೌಕರರಿಗೆ (wage workers) ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ದಿನಗೂಲಿ ನೌಕರರಿಗೆ ಸರ್ಕಾರದಿಂದ ದಸರಾ ಗಿಫ್ಟ್ ಸಿಕ್ಕಿದೆ.

ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರ ಅಡಿಯಲ್ಲಿ ಸೇವೆಯನ್ನು ಮುಂದುವರೆಸಲು ಅರ್ಹರಾಗಿರುವ ದಿನಗೂಲಿ ನೌಕರರಿಗೆ ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯಲ್ಲಿ ಕನಿಷ್ಠ ವೇತನವನ್ನು ಪಾವತಿಸಬೇಕೆಂದು ಸರ್ಕಾರವು ಆದೇಶಿಸಿದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಿದ್ದರಾಮಯ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡಾ 75 ರಷ್ಟು, ಅವರ ಕರ್ತವ್ಯದ ಸ್ಥಳಕ್ಕೆ ಕಾಲಕಾಲಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆಯ ಸಾಮಾನ್ಯ ದರದ ಶೇಕಡಾ 75 ರಷ್ಟು ರಾಜ್ಯ ಸರ್ಕಾರಿ ನೌಕರರು ಅರ್ಹ ದಿನಗೂಲಿ ನೌಕರರಿಗೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡುವಂತೆ ಆದೇಶಿಸಲಾಗಿದೆ. ಇವರುಗಳು ಅರ್ಹರಿರುವ ಇತರೆ ಸೌಲಭ್ಯಗಳ ಕುರಿತು ಆದೇಶಿಸಲಾಗಿದೆ.

ಇದನ್ನೂ ಓದಿ: ರಾಜ್ಯ ನೌಕರರಿಗೆ ಎಷ್ಟು ಸಿಗಲಿದೆ ವೇತನ? 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಬಗ್ಗೆ ಅಧ್ಯಕ್ಷ ಬಿಚ್ಚಿಟ್ಟ ಮಾಹಿತಿ

7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಗಳನ್ನು ಸರ್ಕಾರವು ಮಂಜೂರು ಮಾಡುತ್ತದೆ. ಕಾಯ್ದೆ ನಿಬಂಧನೆಗಳು ಮತ್ತು ಸರ್ಕಾರಿ ಆದೇಶಗಳ ಪ್ರಕಾರ ಅರ್ಹ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ಪ್ರಯೋಜನಗಳನ್ನು ಪರಿಷ್ಕರಿಸಲು ಮತ್ತು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:59 pm, Sat, 21 September 24

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us