ಬೆಂಗಳೂರು: ಮದ್ಯ ಖರೀದಿ ಹಾಗೂ ಸೇವನೆ ವಯಸ್ಸಿನ ಮಿತಿಯನ್ನು 21 ರಿಂದ 18ಕ್ಕೆ ಇಳಿಸಲು ಚಿಂತನೆ

ಕರ್ನಾಟಕ ಸರ್ಕಾರವು ಮದ್ಯ ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಲು ಚಿಂತನೆ ನಡೆಸಿದೆ

ಬೆಂಗಳೂರು: ಮದ್ಯ ಖರೀದಿ ಹಾಗೂ ಸೇವನೆ ವಯಸ್ಸಿನ ಮಿತಿಯನ್ನು 21 ರಿಂದ 18ಕ್ಕೆ ಇಳಿಸಲು ಚಿಂತನೆ
ಪ್ರಾತಿನಿಧಿಕ ಚಿತ್ರ Image Credit source: Hindustan Times
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 17, 2023 | 7:43 AM

ಬೆಂಗಳೂರು: ಕರ್ನಾಟಕ ಸರ್ಕಾರವು (Karnataka Government) ಮದ್ಯ (Liquor) ಖರೀದಿ ಮತ್ತು ಸೇವನೆಯ ವಯಸ್ಸಿನ ಮಿತಿಯನ್ನು ಇಳಿಸಲು ಚಿಂತನೆ ನಡೆಸಿದೆ. ಕರ್ನಾಟಕ ಅಬಕಾರಿ (Excise Department) ಕಾಯ್ದೆ 1965ರ ಪ್ರಕಾರ ಮದ್ಯ ಖರೀದಿಸುವ ವಯಸ್ಸು 21 ವರ್ಷ ಇದೆ. ಈಗ ಈ ಮಿತಿಯನ್ನು 18 ವರ್ಷಕ್ಕೆ ಇಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್ ವರದಿ ಮಾಡಿದೆ. ಈ ಕುರಿತು ಅಬಕಾರಿ ಇಲಾಖೆ ಜನವರಿ 9 ರಂದು ಕರಡು ಪ್ರಕಟಿಸಿದ್ದು, 30 ದಿನಗಳಲ್ಲಿ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿವೃತ್ತ ಅಧಿಕಾರಿ ವಿ ಯಶವಂತ್ ಅವರ ನೇತೃತ್ವದಲ್ಲಿ ರಚಿಸಲಾದ ಸಮಿತಿಯ ಶಿಫಾರಸ್ಸಿನ ಮೇರೆಗೆ ಈ ಪ್ರಸ್ತಾವನೆಯನ್ನು ರಚಿಸಲಾಗಿದೆ. ಕರ್ನಾಟಕ ಅಬಕಾರಿ ಕಾಯ್ದೆ-1965 ರ ನಿಬಂಧನೆಗಳ ಪ್ರಕಾರ, ಮದ್ಯದ ಖರೀದಿ ಮತ್ತು ಸೇವನೆಗೆ ಕನಿಷ್ಠ 18 ವರ್ಷ. ಆದರೆ ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ಪ್ರಕಾರ, ಕನಿಷ್ಠ ಕಾನೂನು ವಯಸ್ಸು 21 ಆಗಿದೆ. ಹೀಗಾಗಿ ಈ ಗೊಂದಲಗಳಿಗೆ ತೆರೆ ಎಳೆಯಲು ಕರ್ನಾಟಕ ಸರ್ಕಾರ ಮದ್ಯ ಸೇವನೆ ಮತ್ತು ಖರೀದಿ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಸಲು ಮುಂದಾಗಿದೆ.

ವಯೋಮಿತಿಯನ್ನು ಕಡಿಮೆಗೊಳಿಸುವಂತೆ ಮದ್ಯ ವ್ಯಾಪಾರಸ್ಥರು ಒತ್ತಾಯಿಸುತ್ತಿದ್ದು, ಇದರಿಂದ ಸರ್ಕಾರಕ್ಕೆ ಆದಾಯ ಹೆಚ್ಚುತ್ತದೆ. ಮದ್ಯ ಮಾರಾಟದಿಂದ 2019-20ರಲ್ಲಿ 21,583 ಕೋಟಿ ರೂ., 2021-22ರಲ್ಲಿ ಮದ್ಯ ಮಾರಾಟದಿಂದ ರಾಜ್ಯಕ್ಕೆ 26,377 ಕೋಟಿ ರೂ. ಆದಾಯವಾಗಿದೆ. ಗೋವಾ, ಹಿಮಾಚಲ ಪ್ರದೇಶ, ಸಿಕ್ಕಿಂ ಮತ್ತು ಪುದುಚೇರಿಯಂತಹ ಕೆಲವು ರಾಜ್ಯಗಳು ವಯಸ್ಸಿನ ಮಿತಿಯನ್ನು 18 ವರ್ಷಕ್ಕೆ ಇಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:31 am, Tue, 17 January 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ