AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಪ್ರತಿಭಟನೆ: ಇಂದು ಯಾವೆಲ್ಲ ಸೇವೆಗಳು ಲಭ್ಯ, ಏನೆಲ್ಲ ಇರಲ್ಲ? ಇಲ್ಲಿದೆ ಮಾಹಿತಿ

ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ಮತ್ತು ವೈದ್ಯರಿಗೆ ಸೂಕ್ತ ರಕ್ಷಣೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು 24 ಗಂಟೆಗಳ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ಬೆಳಗ್ಗೆ 6ರಿಂದ ಆರಂಭವಾಗಿರುವ ಮುಷ್ಕರ ಭಾನುವಾರ ಬೆಳಗ್ಗೆ 6ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಆಸ್ಪತ್ರೆಗಳಲ್ಲಿ ಯಾವೆಲ್ಲ ಸೇವೆಗಳು ಲಭ್ಯವಿರಲ್ಲ, ಏನೇನು ಸೇವೆಗಳು ಇರಲಿವೆ ಎಂಬ ಮಾಹಿತಿ ಇಲ್ಲಿದೆ.

ವೈದ್ಯರ ಪ್ರತಿಭಟನೆ: ಇಂದು ಯಾವೆಲ್ಲ ಸೇವೆಗಳು ಲಭ್ಯ, ಏನೆಲ್ಲ ಇರಲ್ಲ? ಇಲ್ಲಿದೆ ಮಾಹಿತಿ
ಕೋಲ್ಕತ್ತದಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಹೈದರಾಬಾದ್​​ನ ಒಸ್ಮಾನಿಯಾ ವೈದ್ಯಕೀಯ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.Image Credit source: PTI
Vinay Kashappanavar
| Updated By: Ganapathi Sharma|

Updated on: Aug 17, 2024 | 7:33 AM

Share

ಬೆಂಗಳೂರು, ಆಗಸ್ಟ್ 17: ಕೋಲ್ಕತ್ತದಲ್ಲಿ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ಕರ್ನಾಟಕದಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಇಂದು ಆಸ್ಪತ್ರೆಗಳಲ್ಲಿ ಎಮರ್ಜನ್ಸಿ ಹೊರತುಪಡಿಸಿ ಹೊರರೋಗಿ ಸೇವೆ ವಿಭಾಗ (ಒಪಿಡಿ) ಲಭ್ಯವಿರುವುದಿಲ್ಲ. ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಆಸ್ಪತ್ರೆ ಓಪಿಡಿ ಬಂದ್ ಆಗಿರಲಿದೆ. ವೈದ್ಯರ ಪ್ರತಿಭಟನೆಯ ಕಾರಣ ರಾಜ್ಯದ ಆಸ್ಪತ್ರೆಗಳಲ್ಲಿ ಏನೇನು ಲಭ್ಯವಿರಲಿದೆ, ಯಾವ ಸೇವೆ ದೊರೆಯುವುದಿಲ್ಲ ಎಂಬ ಮಾಹಿತಿ ಇಲ್ಲಿದೆ.

ಇಂದು ಯಾವೆಲ್ಲಾ ಸೇವೆಗಳು ಇರುತ್ತವೆ?

  • ಎಮರ್ಜೆನ್ಸಿ ಸೇವೆ
  • ⁠ಮೆಡಿಕಲ್ ಶಾಪ್ಸ್
  • ಇನ್ ಪೇಷೆಂಟ್ ಸೇವೆ
  • ಹೆರಿಗೆ, ಎಮರ್ಜೆನ್ಸಿ ಸರ್ಜರಿ

ಯಾವೆಲ್ಲ ಸೇವೆಗಳು ಲಭ್ಯವಿಲ್ಲ?

  • ಓಪಿಡಿ
  • ಡಯಾಲಿಸಿಸ್
  • ಕ್ಲಿನಿಕ್ ಸೇವೆ
  • ಮಕ್ಕಳ ಓಪಿಡಿ
  • ಡೆಂಟಲ್ ಸರ್ವಿಸ್

ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆಗಳು ದೊರೆಯಲಿವೆ. ಆದರೆ, ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ನೀಡಲಿದ್ದಾರೆ. ಮತ್ತೊಂದೆಡೆ, ಖಾಸಗಿ ವೈದ್ಯರು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕಚೇರಿ ಎದುರು ಹೋರಾಟ ನಡೆಸಲು ಸಜ್ಜಾಗಿದ್ದಾರೆ.

ಈ ಮಧ್ಯೆ, ಕೊಲ್ಕತ್ತಾದ ಮೃತ ವೈದ್ಯೆಯ ಸಾವಿಗೆ ನ್ಯಾಯ ಒದಗಿಸಬೇಕು. ಹಿಂಸಾಚಾರದ ವಿರುದ್ಧ ವೈದ್ಯರಿಗೆ ರಕ್ಷಣೆ ಒದಗಿಸಬೇಕು. ಆಸ್ಪತ್ರೆಗಳನ್ನು ಸೇಫ್ ಝೋನ್ ಎಂದು ಘೋಷಿಸಬೇಕು ಎಂದು ಐಎಂಎ ಆಗ್ರಹಿಸಿದೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್!

ಐಎಂಎ ವ್ಯಾಪ್ತಿಯ ವೈದ್ಯರು, ಫನಾ ಬೆಂಬಲಿತ ಖಾಸಗಿ ಆಸ್ಪತ್ರೆಗಳ ಒಕ್ಕೂಟ, ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಷನ್, ಮಕ್ಕಳ ವೈದ್ಯರ ಅಸೋಸಿಯೇಷನ್, ಅರ್ಥೋಪಿಟಿಕ್ ಅಸೋಸಿಯೇಷನ್, ಮೆಡಿಕಲ್ ಕಾಲೇಜ್ ವೈದ್ಯರ ಅಸೋಸಿಯೇಷನ್ ಹಾಗೂ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ