AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಸಾರಿಗೆ ನಿಗಮಗಳಿಗೆ ಬಿಗ್ ಶಾಕ್: ಅನುದಾನ ನೀಡುವುದಿಲ್ಲ ಎಂದು ಆದೇಶಿಸಿದ ರಾಜ್ಯ ಸರ್ಕಾರ

ನಿಗಮಗಳ ವಿಶೇಷ ಅನುದಾನ ಮನವಿಯನ್ನು ರಾಜ್ಯ ಸಾರಿಗೆ ಇಲಾಖೆ ಸಾರಾಸಗಟಾಗಿ ತಿರಸ್ಕರಿಸಿದೆ. ಇದರೊಂದಿಗೆ ಮಹಿಳಾ ಪ್ರಯಾಣಿಕೆ ಉಚಿತ ಪ್ರಯಾಣ ಕಲ್ಪಿಸುತ್ತಿರುವ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.

ನಾಲ್ಕು ಸಾರಿಗೆ ನಿಗಮಗಳಿಗೆ ಬಿಗ್ ಶಾಕ್: ಅನುದಾನ ನೀಡುವುದಿಲ್ಲ ಎಂದು ಆದೇಶಿಸಿದ ರಾಜ್ಯ ಸರ್ಕಾರ
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on: Jun 15, 2023 | 12:02 PM

Share

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು(Free Bus Travel For Women Scheme) ರಾಜ್ಯ ಸರ್ಕಾರ ಈಗಾಗಲೇ ಜಾರಿ ಮಾಡಿದ್ದು, ಪ್ರತಿನಿತ್ಯ ಸಾವಿರಾರು ಮಹಿಳೆಯರು(Women) ಫ್ರೀಯಾಗಿ ಓಡಾಡುತ್ತಿದ್ದಾರೆ. ಇದರಿಂದ ಸಾರಿಗೆ ನಿಗಮಗಳಿಗೆ(State Transport Corporation) ನಿತ್ಯ ಕೋಟಿಗಟ್ಟಲೇ ಹಣ ಹೊರೆಯಾಗುತ್ತಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ನಾಲ್ಕು ಸಾರಿಗೆ ನಿಗಮಗಳಿಗೆ ಮತ್ತೊಂದು ಶಾಕ್ ಕೊಟ್ಟಿದೆ. ಇನ್ಮುಂದೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳಿಗೆ ಅನುದಾನ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: 3ನೇ ದಿನ ಸರ್ಕಾರಿ ಬಸ್​ಗಳಲ್ಲಿ 51.52 ಲಕ್ಷ ಮಹಿಳೆಯರು ಉಚಿತ ಪ್ರಯಾಣ, ಇಲ್ಲಿದೆ ಇವರ ಟಿಕೆಟ್ ವೆಚ್ಚದ ಅಂಕಿ ಅಂಶ

ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನೌಕರರಿಗೆ 15% ವೇತನ ಪರಿಷ್ಕರಣೆ ‌ಮಾಡಿತ್ತು. ಆ ಹೆಚ್ಚುವರಿ ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುತ್ತಿತ್ತು. ಆದರೆ ನೂತನ ಕಾಂಗ್ರೆಸ್ ಸರ್ಕಾರ ಅನುದಾನ ನೀಡಲು ಆಗುವುದಿಲ್ಲ ಎಂದು ಆದೇಶಿಸಿದೆ. ಇನ್ಮುಂದೆ ವೇತನ ಪಾವತಿಗಾಗಿ ಹಾಗೂ ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನವನ್ನು ಒದಗಿಸಲು ಅವಕಾಶವಿಲ್ಲವೆಂದು ಆದೇಶದಲ್ಲಿ ತಿಳಿಸಿದೆ.

ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚ ನಿಭಾಯಿಸಲು ವಿಶೇಷ ಅನುದಾನಕ್ಕಾಗಿ ನಿಗಮಗಳು ಬೇಡಿಕೆ ಇಟ್ಟಿದ್ದವು. ಆದ್ರೆ, ನಿಗಮಗಳ ಮನವಿಯನ್ನು ರಾಜ್ಯ ಸಾರಿಗೆ ಇಲಾಖೆ ಸಾರಾಸಗಟಾಗಿ ತಿರಸ್ಕರಿಸಿದೆ. ಅಲ್ಲದೇ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಯಿಂದ ಉಂಟಾಗುವ ವೆಚ್ಚವನ್ನು ನಿಗಮಗಳು ಆಂತರಿಕ ಸಂಪನ್ಮೂಲಗಳಿಂದ ಭರಿಸುವಂತೆ ಸೂಚಿಸಿದೆ.

ರಾಜ್ಯ ಸರ್ಕಾರದ ಈ ಆದೇಶದಿಂದ ಸಾರಿಗೆ ನಿಗಮಗಳಿಗೆ ಬಿಗ್ ಶಾಕ್ ಆಗಿದ್ದು, ಸಿಬ್ಬಂದಿ ವೇತನ ಹಾಗೂ ಇತರೆ ವೆಚ್ಚಗಳ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆಗಳಿವೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಇನ್ನು ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಈ ಹಿಂದೆ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಹಣ ನೀಡುತ್ತಿರಲಿಲ್ಲ. ನಿಗಮಗಳ ಆದಾಯದಲ್ಲೇ ವೇತನ, ಇಂಧನಕ್ಕೆ ಹೊಂದಿಸಿಕೊಳ್ಳುತ್ತಿದ್ದರು. ಸಾರಿಗೆ ನಿಗಮಗಳ ಆದಾಯದಲ್ಲೇ ವೇತನ ಮತ್ತು ಇಂಧನಕ್ಕೆ ಹಣ ಹೊಂದಿಸಿಕೊಳ್ಳುತ್ತಿದ್ದರು. ಎರಡು ವರ್ಷ ಕೊರೊನಾ ಸಂದರ್ಭದಲ್ಲಿ ಸರ್ಕಾರ ಸಾರಿಗೆ ನಿಗಮಗಳ ಸಹಾಯಕ್ಕೆ ಬಂದಿತ್ತು. ಈಗ ಕೊರೊನಾ ಇಲ್ಲದ ಕಾರಣ ಆ ದೃಷ್ಟಿಯಿಂದ ಈ ಆದೇಶವನ್ನು ಆರ್ಥಿಕ ಇಲಾಖೆ ಹೊರಡಿಸಿರಬೇಕು. ಸದ್ಯ ನಮ್ಮ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಿದ್ರೆ ನಾವೇ ಎಲ್ಲವನ್ನೂ ಭರಿಸಬೇಕಾಗುತ್ತದೆ. ಇಲ್ಲಾಂದ್ರೆ ಸಹಾಯ ಕೇಳುವಂತ ಪರಿಸ್ಥಿತಿ ಬಂದ್ರೆ ಸರ್ಕಾರದ ಬಳಿ ಕೇಳಲೇಬೇಕು ಎಂದು ಹೇಳಿದರು.

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ