ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ; ರಾಜ್ಯ ಸರ್ಕಾರದಿಂದ ತಕ್ಷಣ 25 ಕೋಟಿ ರೂ. ಬಿಡುಗಡೆ
ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆಗೆ ಸರ್ಕಾರ ಆದೇಶ ಮಾಡಿತ್ತು. ಬೆಳಗ್ಗೆ ಉಪಾಹಾರ, ಮಧ್ಯಾಹ್ನ, ರಾತ್ರಿ ಉಚಿತ ಊಟ ವಿತರಣೆ ಮಾಡುವಂತೆ ಸೂಚಿಸಿತ್ತು.
ಬೆಂಗಳೂರು: ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ ವಿತರಣೆಗೆ ಸಂಬಂಧಿಸಿ ರಾಜ್ಯ ಸರ್ಕಾರ ತಕ್ಷಣ 25 ಕೋಟಿ ರೂ. ಬಿಡುಗಡೆ ಮಾಡಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆಗೆ ಸರ್ಕಾರ ಆದೇಶ ಮಾಡಿತ್ತು. ಬೆಳಗ್ಗೆ ಉಪಾಹಾರ, ಮಧ್ಯಾಹ್ನ, ರಾತ್ರಿ ಉಚಿತ ಊಟ ವಿತರಣೆ ಮಾಡುವಂತೆ ಸೂಚಿಸಿತ್ತು.
ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ವಿತರಣೆಗೆ ಸೂಚನೆ ನೀಡಲಾಗಿದೆ. ಲಾಕ್‌ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಂದರೆ, ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ ನೀಡುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಪತ್ರದ ಮೂಲಕ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಈ ಬಗ್ಗೆ ಆದೇಶಿಸಿದ್ದಾರೆ. ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟ ಒದಗಿಸಲು ನಿರ್ದೇಶನ ನೀಡಿದ್ದಾರೆ.
ಲಾಕ್‌ಡೌನ್‌ನಿಂದ ಬಡವರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ, ಆಹಾರ ಭದ್ರತೆ ಒದಗಿಸಲು ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು. ದಿನಗೂಲಿ ಕಳೆದುಕೊಂಡವರಿಗೆ ಆಹಾರ ಭದ್ರತೆ ಒದಗಿಸಿ. ಗ್ರಾಮಾಂತರ ಪ್ರದೇಶಗಳಿಗೂ ಆಹಾರ ತಲುಪಿಸಿ. ದಾಸೋಹ ಹೆಲ್ಪ್‌ಲೈನ್ ಮರು ಆರಂಭಿಸಲು ಕೋರ್ಟ್ ಸೂಚನೆ ನೀಡಿತ್ತು.
ಬೆಂಗಳೂರಿನಲ್ಲಿರುವ 202 ಇಂದಿರಾ ಕ್ಯಾಂಟೀನ್ ಗಳ ಮೂಲಕ ಮೂರು ಹೊತ್ತೂ ಉಚಿತವಾಗಿ ಸಿದ್ದಪಡಿಸಿದ ಆಹಾರ ನೀಡಲಾಗುವುದು. ಅಲ್ಲದೇ ಎನ್‌ಜಿಒಗಳ ಮೂಲಕವೂ ಅಗತ್ಯವಿರುವ ಪ್ರದೇಶಗಳಿಗೆ ಆಹಾರ ಒದಗಿಸಲಾಗುವುದು. ಪಡಿತರ ಚೀಟಿದಾರರಿಗೆ 10 ಕೆಜಿ ಆಹಾರ ಧಾನ್ಯ ನೀಡಲಾಗುವುದೆಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. ಲಾಕ್‌ಡೌನ್‌ನಿಂದ ದಿನಗೂಲಿ ನೌಕರರು, ಬಡವರು ಜೀವನಾಧಾರ ಕಳೆದುಕೊಂಡಿದ್ದಾರೆ. ಅಂತಹವರಿಗೆ ಆಹಾರ ಭದ್ರತೆ ಒದಗಿಸಬೇಕು. ಗ್ರಾಮಾಂತರ ಪ್ರದೇಶದ ಬಡವರಿಗೂ ಆಹಾರ ತಲುಪಿಸಬೇಕು. ದಾಸೋಹ ಹೆಲ್ಪ್‌ಲೈನ್ ಮರು ಆರಂಭಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಇದನ್ನೂ ಓದಿ: ಆಹಾರ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ; ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ
‘ಕಳೆದ 2 ದಿನದಿಂದ ಕೊವಿಡ್ ಪ್ರಕರಣಗಳ ಸಂಖ್ಯೆ ಹಾಗೂ ಸಾವಿನ ಪ್ರಮಾಣದಲ್ಲಿ ಇಳಿಕೆ’
Published On - 7:09 pm, Tue, 11 May 21