AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali Covid Guidelines: ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ; ಕರ್ನಾಟಕ ಸರ್ಕಾರದ ಮಾರ್ಗಸೂಚಿ ಬಿಡುಗಡೆ

Kannada Rajyotsava Guidelines: ನವೆಂಬರ್ ಒಂದರಿಂದ ಹತ್ತನೇ ತಾರೀಕಿನವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

Deepavali Covid Guidelines: ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ; ಕರ್ನಾಟಕ ಸರ್ಕಾರದ ಮಾರ್ಗಸೂಚಿ ಬಿಡುಗಡೆ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Oct 30, 2021 | 2:40 PM

Share

ಬೆಂಗಳೂರು: ದೀಪಾವಳಿ ದಿನಾಂಕ ಸಮೀಪಿಸುತ್ತಿರುವಂತೆ ಹಬ್ಬದ ಆಚರಣೆ ಸಂಬಂಧ ಕರ್ನಾಟಕ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ. ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ದೀಪಾವಳಿಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ.

ಹಸಿರು ಪಟಾಕಿ ಮಾತ್ರ ಮಾರಾಟ ಮತ್ತು ಹಚ್ಚಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ, ನವೆಂಬರ್ ಒಂದರಿಂದ ಹತ್ತನೇ ತಾರೀಕಿನವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಕನ್ನಡ ರಾಜ್ಯೋತ್ಸವ ಆಚರಣೆ: 500 ಜನರಿಗೆ ಮಾತ್ರ ಅವಕಾಶ ಕನ್ನಡ ರಾಜ್ಯೋತ್ಸವ, ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕನ್ನಡ ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗುವುದು. ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಎಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆಗೆ 500 ಜನರಿಗೆ ಮಾತ್ರ ಅವಕಾಶ ಇರುತ್ತದೆ. ಇದು ಬೆಂಗಳೂರಿಗೆ ಮಾತ್ರ ಸೀಮಿತವಲ್ಲ. ಸಾಮಾಜಿಕ ಅಂತರವಿಲ್ಲದೇ ನಡೆಸುವ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು; ಏನೇನಿದೆ ನಿಯಮಗಳು?

ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಕೊವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ

Published On - 2:32 pm, Sat, 30 October 21

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?