AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಮಾರಾಟಕ್ಕೆ ಮಾರ್ಗಸೂಚಿ ರೂಪಿಸಿದ ಸರ್ಕಾರ; ಇಲ್ಲಿವೆ ನಿಯಮಗಳು

ಮದ್ಯ ಮಾರಾಟ ವೇಳೆ ಕೊವಿಡ್ ನಿಯಮ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಲೈಸೆನ್ಸ್‌ ಅಮಾನತು, ರದ್ದು ಮಾಡುವ ಎಚ್ಚರಿಕೆಯನ್ನು ಮಾರ್ಗದರ್ಶಿ ಸೂತ್ರದಲ್ಲಿ ವಿಧಿಸಲಾಗಿದೆ.

ಮದ್ಯ ಮಾರಾಟಕ್ಕೆ ಮಾರ್ಗಸೂಚಿ ರೂಪಿಸಿದ ಸರ್ಕಾರ; ಇಲ್ಲಿವೆ ನಿಯಮಗಳು
ಸಂಗ್ರಹ ಚಿತ್ರ
Follow us
guruganesh bhat
|

Updated on: Apr 27, 2021 | 9:13 PM

ಬೆಂಗಳೂರು: ರಾಜ್ಯದಲ್ಲಿ ಇಂದು ರಾತ್ರಿಯಿಂದ ಕಠಿಣ ಕರ್ಫ್ಯೂ ಜಾರಿಯಾಗುವ ಕಾರಣ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಗೈಡ್‌ಲೈನ್ಸ್‌ ಬಿಡುಗಡೆಗೊಳಿಸಿದೆ. ಮದ್ಯದಂಗಡಿಯಲ್ಲಿ ಕೇವಲ ಪಾರ್ಸೆಲ್​ಗೆ ಮಾತ್ರ ಅವಕಾಶವಿದ್ದು, ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಅವಕಾಶ ನೀಡಲಾಗಿದೆ. ಸೀಲ್ಡ್‌ ಬಾಟಲ್‌ಗಳಲ್ಲಿ =ಮಾತ್ರ ಮದ್ಯ ಪಾರ್ಸೆಲ್ ನೀಡಬೇಕು. ಎಂಆರ್‌ಪಿ ದರದಲ್ಲಿ ಮಾತ್ರ ಮದ್ಯ ಮಾರಾಟ ಮಾಡಬೇಕು. ಗರಿಷ್ಟ 2 ಲೀಟರ್ ಬಿಯರ್ ಮಾತ್ರ ಪಾರ್ಸೆಲ್‌ ನೀಡಬೇಕು. ಅದರಲ್ಲೂ ಬಾಟಲ್‌ ಬಿಯರ್‌ಗಳನ್ನು ಮಾತ್ರ ಮಾರಾಟ ಮಾಡಬಹುದು. ಆದರೆ ದೊಡ್ಡ ಕಂಟೇನರ್‌ಗಳನ್ನು ಮಾರಾಟ ಮಾಡುವಂತಿಲ್ಲ ಎಂಬ ನಿಯಮವನ್ನು ಸರ್ಕಾರ ರೂಪಿಸಿದೆ.

ಮಾಲ್‌, ಸೂಪರ್ ಮಾರ್ಕೆಟ್‌ಗಳಲ್ಲಿ ಮದ್ಯ ಮಾರುವಂತಿಲ್ಲ. ಮದ್ಯ ಮಾರಾಟ ವೇಳೆ ಕೊವಿಡ್ ನಿಯಮ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಲೈಸೆನ್ಸ್‌ ಅಮಾನತು, ರದ್ದು ಮಾಡುವ ಎಚ್ಚರಿಕೆಯನ್ನು ಮಾರ್ಗದರ್ಶಿ ಸೂತ್ರದಲ್ಲಿ ವಿಧಿಸಲಾಗಿದೆ. ಮೇ 12ರವರೆಗೆ ಈ ಮಾರ್ಗಸೂಚಿಯ ಅನ್ವಯ ಮದ್ಯ ಮಾರಾಟ ಮಾಡಬಹುದಾಗಿದೆ. ಮದ್ಯ ಮಾರಾಟ ವೇಳೆ ಕೊವಿಡ್ ನಿಯಮ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಲೈಸೆನ್ಸ್‌ ಅಮಾನತು, ರದ್ದು ಮಾಡುವ ಎಚ್ಚರಿಕೆಯನ್ನು ಮಾರ್ಗದರ್ಶಿ ಸೂತ್ರದಲ್ಲಿ ವಿಧಿಸಲಾಗಿದೆ.

ಕೊರೊನಾ ಮೊದಲನೆ ಅಲೆ ಕಾಣಿಸಿಕೊಂಡಾಗ ಏಕಾಏಕಿ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದರು. ಅಲ್ಲದೆ, ಮದ್ಯಪ್ರಿಯರು ಆಲ್ಕೋಹಾಲ್​ಗಾಗಿ ತುಂಬಾನೇ ತೊಂದರೆ ಅನುಭವಿಸಿದ್ದರು. ಸ್ಯಾನಿಟೈಸರ್​ನಲ್ಲಿ ಆಲ್ಕೋಹಾಲ್ ಅಂಶ​ ಇರುತ್ತದೆ ಎಂದು ಅನೇಕರು ಅದನ್ನೇ ಕುಡಿಯೋಕೆ ಹೋಗಿದ್ದರು. ಆದರೆ, ಈ ಬಾರಿ ಹೀಗೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ 15 ದಿನಗಳ ಕೊವಿಡ್​ ಕರ್ಫ್ಯೂನಲ್ಲಿ ಬಾರ್​ನಲ್ಲಿ ಪಾರ್ಸೆಲ್​ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ.

ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ಇದರ ಜತೆಗೆ ಮದ್ಯಪ್ರಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಾರ್​ನಲ್ಲಿ ಮದ್ಯ ಪಾರ್ಸೆಲ್​ ತೆಗೆದುಕೊಂಡು ಹೋಗಲು ಅವಕಾಶ ಇದೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

(Karnataka govt releases guidelines to sale the liquor in 14 days Covid curfew 2021)

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ