ಬೆಂಗಳೂರು: ರಾಜ್ಯದಲ್ಲಿ ಇಂದು ರಾತ್ರಿಯಿಂದ ಕಠಿಣ ಕರ್ಫ್ಯೂ ಜಾರಿಯಾಗುವ ಕಾರಣ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆಗೊಳಿಸಿದೆ. ಮದ್ಯದಂಗಡಿಯಲ್ಲಿ ಕೇವಲ ಪಾರ್ಸೆಲ್ಗೆ ಮಾತ್ರ ಅವಕಾಶವಿದ್ದು, ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಅವಕಾಶ ನೀಡಲಾಗಿದೆ. ಸೀಲ್ಡ್ ಬಾಟಲ್‌ಗಳಲ್ಲಿ =ಮಾತ್ರ ಮದ್ಯ ಪಾರ್ಸೆಲ್ ನೀಡಬೇಕು. ಎಂಆರ್‌ಪಿ ದರದಲ್ಲಿ ಮಾತ್ರ ಮದ್ಯ ಮಾರಾಟ ಮಾಡಬೇಕು. ಗರಿಷ್ಟ 2 ಲೀಟರ್ ಬಿಯರ್ ಮಾತ್ರ ಪಾರ್ಸೆಲ್ ನೀಡಬೇಕು. ಅದರಲ್ಲೂ ಬಾಟಲ್ ಬಿಯರ್‌ಗಳನ್ನು ಮಾತ್ರ ಮಾರಾಟ ಮಾಡಬಹುದು. ಆದರೆ ದೊಡ್ಡ ಕಂಟೇನರ್‌ಗಳನ್ನು ಮಾರಾಟ ಮಾಡುವಂತಿಲ್ಲ ಎಂಬ ನಿಯಮವನ್ನು ಸರ್ಕಾರ ರೂಪಿಸಿದೆ.
ಮಾಲ್, ಸೂಪರ್ ಮಾರ್ಕೆಟ್‌ಗಳಲ್ಲಿ ಮದ್ಯ ಮಾರುವಂತಿಲ್ಲ. ಮದ್ಯ ಮಾರಾಟ ವೇಳೆ ಕೊವಿಡ್ ನಿಯಮ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ಅಮಾನತು, ರದ್ದು ಮಾಡುವ ಎಚ್ಚರಿಕೆಯನ್ನು ಮಾರ್ಗದರ್ಶಿ ಸೂತ್ರದಲ್ಲಿ ವಿಧಿಸಲಾಗಿದೆ. ಮೇ 12ರವರೆಗೆ ಈ ಮಾರ್ಗಸೂಚಿಯ ಅನ್ವಯ ಮದ್ಯ ಮಾರಾಟ ಮಾಡಬಹುದಾಗಿದೆ. ಮದ್ಯ ಮಾರಾಟ ವೇಳೆ ಕೊವಿಡ್ ನಿಯಮ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ಅಮಾನತು, ರದ್ದು ಮಾಡುವ ಎಚ್ಚರಿಕೆಯನ್ನು ಮಾರ್ಗದರ್ಶಿ ಸೂತ್ರದಲ್ಲಿ ವಿಧಿಸಲಾಗಿದೆ.
ಕೊರೊನಾ ಮೊದಲನೆ ಅಲೆ ಕಾಣಿಸಿಕೊಂಡಾಗ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದರು. ಅಲ್ಲದೆ, ಮದ್ಯಪ್ರಿಯರು ಆಲ್ಕೋಹಾಲ್ಗಾಗಿ ತುಂಬಾನೇ ತೊಂದರೆ ಅನುಭವಿಸಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುತ್ತದೆ ಎಂದು ಅನೇಕರು ಅದನ್ನೇ ಕುಡಿಯೋಕೆ ಹೋಗಿದ್ದರು. ಆದರೆ, ಈ ಬಾರಿ ಹೀಗೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ 15 ದಿನಗಳ ಕೊವಿಡ್ ಕರ್ಫ್ಯೂನಲ್ಲಿ ಬಾರ್ನಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ.
ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ಇದರ ಜತೆಗೆ ಮದ್ಯಪ್ರಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಾರ್ನಲ್ಲಿ ಮದ್ಯ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ಇದೆ.
(Karnataka govt releases guidelines to sale the liquor in 14 days Covid curfew 2021)