AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬಿಸಿ ಪಟ್ಟಿಯಿಂದ ತಳವಾರ, ಪರಿವಾರ ಸಮುದಾಯ ಔಟ್: ಸರ್ಕಾರದಿಂದ ಅಧಿಕೃತ ಅದೇಶ

ತಳವಾರ ಮತ್ತು ಪರಿವಾರ ಸಮುದಾಯಗಳನ್ನು ಒಬಿಸಿ ಪಟ್ಟಿಯಿಂದ ರಾಜ್ಯ ಸರ್ಕಾರ ತೆಗೆದುಹಾಕಿದೆ. ಈ ಬಗ್ಗೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಒಬಿಸಿ ಪಟ್ಟಿಯಿಂದ ತಳವಾರ, ಪರಿವಾರ ಸಮುದಾಯ ಔಟ್: ಸರ್ಕಾರದಿಂದ ಅಧಿಕೃತ ಅದೇಶ
ವಿಧಾನ ಸೌಧ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 29, 2022 | 6:01 PM

Share

ಬೆಂಗಳೂರು: ತಳವಾರ ಹಾಗೂ ಪರಿವಾರ ಸಮುದಾಯಗಳನ್ನು(Talavara and Parivara communities) ಒಬಿಸಿ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಪರಿಶಿಷ್ಟ ಪಂಗಡ (ST) ಮೀಸಲಾತಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಒಬಿಸಿಯಿಂದ ತಳವಾರ ಮತ್ತು ಪರಿವಾರ ಸಮುದಾಯವನ್ನು ಕೈಬಿಡಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಇಂದು(ಅಕ್ಟೋಬರ್ 29) ಅಧಿಕೃತ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರ 2020ರ ಮಾ.19ರಂದು ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರ ಹೊರಡಿಸಿತ್ತು. ಆದ್ರೆ, ಕೆಲ ಗೊಂದಲಗಳು ಸೃಷ್ಟಿಯಾಗಿದ್ದವು. ಕೇಂದ್ರ ಸರಕಾರವು ಕಳೆದ ಮಾರ್ಚ್‌ನಲ್ಲಿ ಪ್ರಕಟಿಸಿದ ಗೆಜೆಟಿಯರ್‌ನಲ್ಲಿ ನಾಯಕದ, ನಾಯಕ್‌ ಪರ್ಯಾಯ ಪದಗಳಾದ ಪರಿವಾರ ಹಾಗೂ ತಳವಾರ ಜಾತಿಗಳನ್ನು ಒಳಗೊಂಡಂತೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಪರಿಶಿಷ್ಟ ವರ್ಗದ ಜಾತಿ ಪ್ರಮಾಣ ಪತ್ರ ನೀಡಬಹುದು ಎಂದು ಹೇಳಿತ್ತು.

ಇನ್ನು ರಾಜ್ಯ ಸರ್ಕಾರ ಕಳೆದ ಜೂನ್‌ನಲ್ಲಿ ಹೊರಡಿಸಿದ ಸುತ್ತೋಲೆ ಹಾಗೂ ಆಗಸ್ಟ್‌ನಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ಪರಿಶಿಷ್ಟ ಪಂಗಡದ ಪರಿವಾರ ಹಾಗೂ ತಳವಾರ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿತ್ತು. ಆದರೂ ಈ ವರ್ಗಗಳಿಗೆ ಸೇರಿದ ವ್ಯಕ್ತಿಗಳು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಸ್ಪಷ್ಟನೆ ನೀಡಿತ್ತು,

ನಿಯಾಮನುಸಾರ ನೈಜವಾದ ಪರಿಶಿಷ್ಟ ಪಂಗಡದ ಜಾತಿಗೆ ಸೇರಿದ ಪರಿವಾರ ಹಾಗೂ ತಳವಾರ ಜಾತಿ ವ್ಯಕ್ತಿಗಳಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ನಿಗದಿತ ಅವಧಿಯೊಳಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಸಮಾಜ ಕಲ್ಯಾಣ ಇಲಾಖೆ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ಸುದ್ದಿಗಗಿ ಇಲ್ಲಿ ಕ್ಲಿಕ್ ಮಾಡಿ