ಲಾಕ್​ಡೌನ್ ವೇಳೆ ಉದ್ಯೋಗ ಕಡಿತ, ಬಾಡಿಗೆದಾರರ ತೆರವು ಸಲ್ಲದು: ಕರ್ನಾಟಕ ಸರ್ಕಾರ ಮನವಿ

ಕರ್ಫ್ಯೂ ಅವಧಿಯಲ್ಲಿ ಉದ್ಯೋಗದಾತರು ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗೆ ಮಾಡಬಾರದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

ಲಾಕ್​ಡೌನ್ ವೇಳೆ ಉದ್ಯೋಗ ಕಡಿತ, ಬಾಡಿಗೆದಾರರ ತೆರವು ಸಲ್ಲದು: ಕರ್ನಾಟಕ ಸರ್ಕಾರ ಮನವಿ
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ (ಸಂಗ್ರಹ ಚಿತ್ರ)
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 28, 2021 | 9:39 PM

ಬೆಂಗಳೂರು: ಲಾಕ್​ಡೌನ್​ ವೇಳೆ ಉದ್ಯೋಗ ಕಡಿತ ಮಾಡಬಾರದು ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್​ ಮನವಿ ಮಾಡಿದ್ದಾರೆ. ಖಾಸಗಿ ಕಂಪನಿಗಳು, ಕಾರ್ಖಾನೆಗಳು ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಬಾರದು. ಉದ್ಯೋಗದಾತರು ಸಿಬ್ಬಂದಿಗೆ ವೇತನ ಕಡಿತಗೊಳಿಸಬಾರದು. ಬಾಡಿಗೆ, ಭೋಗ್ಯಕ್ಕೆ ಇರುವವರನ್ನು ಬಲವಂತದ ತೆರವು ಮಾಡಬಾರದು ಎಂದು ಸೂಚಿಸಲಾಗಿದೆ.

ಕರ್ಫ್ಯೂ ಅವಧಿಯಲ್ಲಿ ಉದ್ಯೋಗದಾತರು ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂಗಡಿ ಮಾಲೀಕರು ಬಾಡಿಗೆಗೆ ನೀಡಿರುವ ಅಂಗಡಿ ಮತ್ತು ಅಂಥದ್ದೇ ಸ್ಥಳಗಳನ್ನು ಬಾಡಿಗೆದಾರರಿಂದ ತೆರವುಗೊಳಿಸಲು ಮುಂದಾಗಿರುವುದೂ ಸರ್ಕಾರದ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.

Karnataka-Govt

ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರ ಮನವಿ ಪತ್ರ

ಡಿಸಿಗಳ ಜೊತೆಗೆ ಸಿಎಂ ವಿಡಿಯೊ ಕಾನ್ಫರೆನ್ಸ್​ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ (ಏಪ್ರಿಲ್ 29) ವಿಡಿಯೊ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿ ಕೊರೊನಾ ನಿರ್ವಹಣೆಯ ಮಾಹಿತಿ ಪಡೆಯಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚ್ಯುವಲ್ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಎಲ್ಲಾ ಜಿಲ್ಲೆಗಳ ಡಿಸಿಗಳು, ಸಿಇಒಗಳು, ಎಸ್​ಪಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ಸರ್ಜನ್​ಗಳು ಪಾಲ್ಗೊಳ್ಳಲಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳ ಡೀನ್​ಗಳ ಜತೆಗೂ ಮುಖ್ಯಮಂತ್ರಿ ಚರ್ಚೆ ನಡೆಸಿ, ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಪರಾಮರ್ಶೆ ನಡೆಸಲಿದ್ದಾರೆ.

ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ನೀಡಿಕೆಯ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಿಂದಿರುಗಿರುವವರ ಆರೋಗ್ಯದ ಕುರಿತು ಕ್ರಮ ಕೈಗೊಂಡ ಮಾಹಿತಿಯನ್ನೂ ಪಡೆಯಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

434 ವಾಹನಗಳು ಮುಟ್ಟುಗೋಲು 14 ದಿನಗಳ ಲಾಕ್​ಡೌನ್​ನ ಮೊದಲ ದಿನವಾದ ಬುಧವಾರ ಬೆಂಗಳೂರು ನಗರದಲ್ಲಿ ಒಟ್ಟು 434 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧೆಡೆ 395 ಬೈಕ್, 22 ಮೂರು ಚಕ್ರದ ವಾಹನ ಹಾಗೂ 17 ಕಾರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿ 19 ಪ್ರಕರಣಗಳನ್ನು ದಾಖಲಿಸಲಾಗಿದೆ.

(Karnataka govt requests employers to retain all employees during lockdown)

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 39,047 ಜನರಿಗೆ ಕೊರೊನಾ ಸೋಂಕು, 137 ಸಾವು

ಇದನ್ನೂ ಓದಿ: Explainer: ಮಕ್ಕಳನ್ನೂ ಬಾಧಿಸುತ್ತಿದೆ ಕೊರೊನಾ; ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ ಈ ಸ್ಟೋರಿ‌ ಮಿಸ್ ಮಾಡದೇ ಓದಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ