AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಶಾಕ್!

ಮರಣ ಹೊಂದಿದ 4.55 ಲಕ್ಷ ಜನರ ಹೆಸರನ್ನು ಕಡಿತಗೊಳಿಸುವ ಮೂಲಕ ಸರ್ಕಾರಕ್ಕೆ 6 ರಿಂದ 7 ಕೋಟಿ ರೂ. ಉಳಿತಾಯವಾಗಿದೆ. ಕೇವಲ ರದ್ದತಿಯ ಕ್ರಮವನ್ನು ಮಾತ್ರ ಕೈಗೊಳ್ಳದೆ, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಮೂಲಕ ಅಕ್ರಮವಾಗಿ ಕಾರ್ಡ್ ಹೊಂದುವವರ ವಿರುದ್ಧದ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಶಾಕ್!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 18, 2023 | 4:25 PM

Share

ಬೆಂಗಳೂರು, ಆಗಸ್ಟ್ 18: ಬಡತನ ರೇಖೆಗಿಂತ ಕೆಳಗಿನ ಪಡಿತರ ಕಾರ್ಡ್ (BPL Card) ಹೊಂದಿ ಉಚಿತ ಅನ್ನಭಾಗ್ಯ ಯೋಜನೆಯ ಅಕ್ಕಿ ಪಡೆಯಲು ಮುಂದಾಗಿದ್ದ ಜನರನ್ನು ಸರ್ಕಾರ ತೆಡೆಹಿಡಿದಿದೆ. ಅರ್ಹತೆ ಇಲ್ಲದಿದ್ದರೂ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿ ಸರ್ಕಾರಿ ಯೋಜನೆಗಳ ಫಲಾನುಭವಿಯಾಗಲು ಹೊರಟಿದ್ದ ನಾಗರಿಕರ ಮೇಲೆ ಆರೋಗ್ಯ ಇಲಾಖೆಯು ಹದ್ದಿನ ಕಣ್ಣಿಟ್ಟಿದೆ. ಸರ್ಕಾರದ ಹಲವು ಯೋಜನೆಗಳ ಪ್ರಯೋಜನ ಪಡೆಯುವ ಉದ್ದೇಶದಿಂದ ಆರ್ಥಿಕವಾಗಿ ಹಿಂದುಳಿದ ವರ್ಗ ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಬಿಪಿಎಲ್ ಕಾರ್ಡ್ ಹೊಂದುವವರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ.

ವೈಟ್ ಬೋರ್ಡ್ ಕಾರು, ನಿಗದಿತ ವಾರ್ಷಿಕ ಆದಾಯ, ಸರ್ಕಾರಿ ಉದ್ಯೋಗ, ನಿಗದಿತ ಜಮೀನು, ಹೀಗೆ ಒಟ್ಟು ಆರು ಮಾನದಂಡಗಳನ್ನು ಬಿಪಿಎಲ್ ಕಾರ್ಡ್​​ನ ಅಳತೆ ಮಾನದಂಡಗಳಾಗಿರಿಸಿವೆ. ಈ ಮೊದಲು ಬಿಪಿಎಲ್ ಕಾರ್ಡ್​ ಪಡೆದಿದ್ದು, ಈಘ ಅಂಥ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಿದ್ದರೆ, ಆ ಬಿಪಿಎಲ್ ಕಾರ್ಡ್​​​ಗಳನ್ನು ರದ್ದುಗೊಳಿಸಲಾಗುತ್ತದೆ. ಆಹಾರ ಇಲಾಖೆಯು ಈಗಾಗಲೇ ಸರ್ವೇ ನಡೆಸಿ 35 ಸಾವಿರಕ್ಕೂ ಹೆಚ್ಚು ಕಾರ್ಡ್​​​ಗಳನ್ನು ರದ್ದುಗೊಳಿಸಿ ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಶಾಕ್ ನೀಡಿದೆ.

ಮರಣ ಹೊಂದಿದ 4.55 ಲಕ್ಷ ಜನರ ಹೆಸರನ್ನು ಕಡಿತಗೊಳಿಸುವ ಮೂಲಕ ಸರ್ಕಾರಕ್ಕೆ 6 ರಿಂದ 7 ಕೋಟಿ ರೂ. ಉಳಿತಾಯವಾಗಿದೆ. ಕೇವಲ ರದ್ದತಿಯ ಕ್ರಮವನ್ನು ಮಾತ್ರ ಕೈಗೊಳ್ಳದೆ, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಮೂಲಕ ಅಕ್ರಮವಾಗಿ ಕಾರ್ಡ್ ಹೊಂದುವವರ ವಿರುದ್ಧದ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಈ ಕುರಿತು ಈಗಾಗಲೇ ಒಂದು ಹಂತದ ಸರ್ವೆ ನಡೆದಿದ್ದು 8 ಕೋಟಿ ರೂ.ಗಿಂತಲೂ ಅಧಿಕ ಮೊತ್ತ ಸಂಗ್ರಹವಾಗಿದೆ. ನಿಯಮ ಉಲ್ಲಂಘಿಸಿದವರಲ್ಲಿ ಬಹುತೇಕರು ಸರ್ಕಾರಿ ಉದ್ಯೋಗಿಗಳು ಮತ್ತು ವೈಟ್ ಬೋರ್ಡ್ ವಾಹನ ಉಳ್ಳವರಾಗಿದ್ದರು. ರಾಜ್ಯದಲ್ಲಿ ನಿಯಮ ಉಲ್ಲಂಘನೆ ಹೆಚ್ಚಾಗಿರುವುದರಿಂದ ಆದಾಯ ಇಲಾಖೆ, ಸಾರಿಗೆ ಇಲಾಖೆ, ಕಂದಾಯ ಇಲಾಖೆಗೂ ಮಾಹಿತಿ ಸಂಗ್ರಹಿಸಿ ಎಂದು ಆಹಾರ ಇಲಾಖೆ ಮನವಿ ಮಾಡಿದೆ. ಸದ್ಯ ರಾಜ್ಯದಲ್ಲಿ 1.28 ಕೋಟಿ ಮಂದಿ ಬಿಪಿಲ್ ಕಾರ್ಡ್ ಬಳಕೆದಾರರಾಗಿದ್ದಾರೆ.

ಇದನ್ನೂ ಓದಿ: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ: ಕೆ.ಹೆಚ್​.ಮುನಿಯಪ್ಪ

ಬಿಪಿಎಲ್ ಕಾರ್ಡ್ ಹೊಂದಲು ಇರುವ ಮಾನದಂಡಗಳೇನು?

  • ವಾರ್ಷಿಕ ಆದಾಯ 1.2 ಲಕ್ಷ ಮೀರಿರಬಾರದು.
  • 3 ಹೆಕ್ಟರ್​​​ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು.
  • ವೈಟ್ ಬೋರ್ಡ್ ಹೊಂದಿರುವ ನಾಲ್ಕು ಚಕ್ರ ವಾಹನ ಹೊಂದಿರಬಾರದು.
  • ಯಾವುದೇ ಸರ್ಕಾರಿ ನೌಕರಿ ಹೊಂದಿರಬಾರದು.
  • ವ್ಯಕ್ತಿ ನಗರದ ನಿವಾಸಿಯಾಗಿದ್ದರೆ, ನಗರ ಭಾಗದಲ್ಲಿ ಮನೆಯ ವಿಸ್ತೀರ್ಣ 1000 ಸ್ಕ್ವೇರ್ ಫೀಟದ ಮೀರಬಾರದು.
  • ವ್ಯಕ್ತಿಯು ಯಾವುದೇ ವಿಧದಲ್ಲಿ ಆದಾಯ ತೆರಿಗೆ, ಐಟಿ ರಿಟರ್ನ್ಸ್ ಪಾವತಿಸಬಾರದು.

ಹೊಸ ಅರ್ಜಿ ಸಲ್ಲಿಸಲು ಇಲ್ಲ ಅನುಮತಿ

ಸದ್ಯಕ್ಕೆ ಹೊಸ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಯಾವುದೇ ಅವಕಾಶವಿಲ್ಲ. ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇನೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಎಪಿಎಲ್ ಹಾಗೂ ಬಿಪಿಎಲ್ ಎರಡು ರೀತಿಯ ರೆಷನ್ ಕಾರ್ಡ್ ಅರ್ಜಿಗಳಿಗೂ ತಡೆಹಿಡಿಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Fri, 18 August 23

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?