ಚಾಮರಾಜನಗರ ಆಸ್ಪತ್ರೆ ದುರಂತದ ಬಗ್ಗೆ ಹೊಸದಾಗಿ ತನಿಖೆಗೆ ದಿನೇಶ್ ಗುಂಡೂರಾವ್ ಸೂಚನೆ; ಸುಧಾಕರ್​​ಗೆ ಸಂಕಷ್ಟ

|

Updated on: May 30, 2023 | 8:40 PM

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 36 ರೋಗಿಗಳು ಮೃತಪಟ್ಟಿದ್ದಕ್ಕೆ ಸಂಬಂಧಿಸಿದ ಆರೋಪ ಮತ್ತು ಇತರ ಹಗರಣಗಳ ಬಗ್ಗೆ ತನಿಖೆ ನಡೆಸುವಂತೆ ಇಲಾಖೆಯ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಸೂಚಿಸಿದರು.

ಚಾಮರಾಜನಗರ ಆಸ್ಪತ್ರೆ ದುರಂತದ ಬಗ್ಗೆ ಹೊಸದಾಗಿ ತನಿಖೆಗೆ ದಿನೇಶ್ ಗುಂಡೂರಾವ್ ಸೂಚನೆ; ಸುಧಾಕರ್​​ಗೆ ಸಂಕಷ್ಟ
ಕೆ ಸುಧಾಕರ್
Follow us on

ಬೆಂಗಳೂರು: ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ (Health Sector) ಸಂಬಂಧಿಸಿ ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿಬಂದಿರುವ ವಿವಿಧ ಹಗರಣಗಳ ಆರೋಪಗಳ ಬಗ್ಗೆ ಹೊಸದಾಗಿ ತನಿಖೆ ಪ್ರಾರಂಭಿಸಲು ಹೊಸ ಕಾಂಗ್ರೆಸ್ (Congress Government) ಸರ್ಕಾರ ಮುಂದಾಗಿದೆ. ಈ ಮೂಲಕ, ಬಸವರಾಜ ಬೊಮ್ಮಾಯಿ ಅವರ ನಾಲ್ಕು ವರ್ಷಗಳ ಆಡಳಿತದಲ್ಲಿ ಪ್ರತಿಪಕ್ಷವನ್ನು ಗುರಿಯಾಗಿಸಿಕೊಂಡ ಬಿಜೆಪಿ ರಾಜಕಾರಣಿಗಳನ್ನು ಶಿಕ್ಷಿಸಲು ಹೊಸ ಸರ್ಕಾರವು ನಿರ್ಧರಿಸಿದೆ ಎಂಬ ಸ್ಪಷ್ಟ ಸಂದೇಶ ರವಾನೆಯಾದಂತಾಗಿದೆ.

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 36 ರೋಗಿಗಳು ಮೃತಪಟ್ಟಿದ್ದಕ್ಕೆ ಸಂಬಂಧಿಸಿದ ಆರೋಪ ಮತ್ತು ಇತರ ಹಗರಣಗಳ ಬಗ್ಗೆ ತನಿಖೆ ನಡೆಸುವಂತೆ ಇಲಾಖೆಯ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಸೂಚಿಸಿದರು. ದುರಂತ ಸಂಭವಿಸಿದ್ದ ಸಂದರ್ಭದಲ್ಲಿ ಡಾ. ಕೆ ಸುಧಾಕರ್ ಆರೋಗ್ಯ ಸಚಿವರಾಗಿದ್ದರು.

ಘಟನೆ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಕೋವಿಡ್ ನಿರ್ವಹಣಾ ಸಮಿತಿಯು ಹೈಕೋರ್ಟ್‌ಗೆ ಈಗಾಗಲೇ ವರದಿ ಸಲ್ಲಿಸಿದ್ದು, ಮೇ 2-3, 2021 ರ ರಾತ್ರಿ 36 ಒಳರೋಗಿಗಳ ಸಾವಿಗೆ ಆಮ್ಲಜನಕದ ಲಭ್ಯತೆ ಕೊರತೆಯೇ ಕಾರಣ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ‘ಅಕ್ಕಿ ಗ್ಯಾರಂಟಿ’: ಕೇಂದ್ರ ಸರ್ಕಾರ ಒಪ್ಪಿದರೂ ಅಕ್ಕಿಭಾಗ್ಯ ಜಾರಿಗೆ ವಿಳಂಬ ಸಾಧ್ಯತೆ

ಈ ವಿಚಾರವಾಗಿ ವಿಧಾನಸೌಧದಲ್ಲಿ ತಮ್ಮ ಇಲಾಖೆಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಗುಂಡೂರಾವ್, ಸಾವಿಗೆ ಯಾರು ಹೊಣೆ ಮತ್ತು ತಪ್ಪಿತಸ್ಥರು ಯಾರು ಎಂಬುದರ ಪತ್ತೆಗೆ ಯಾವುದೇ ತನಿಖೆ ನಡೆದಿಲ್ಲ. ಹೀಗಾಗಿ ತಕ್ಷಣ ತನಿಖೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಘಟನೆ ಸಂದರ್ಭ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್, ಡಾ ಕೆ ಸುಧಾಕರ್ ಅವರನ್ನು ಗುರಿಯಾಗಿಸಿತ್ತು. ಆಸ್ಪತ್ರೆಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಾವು ಸಹಜವಲ್ಲ, ಕೊಲೆ ಎಂದು ಹೇಳಿದ್ದರು. ತಪ್ಪಿತಸ್ಥರನ್ನು ಶಿಕ್ಷಿಸುವಂತೆ ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ