AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಳಂಬ ಮಾಡದೇ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಕರ್ನಾಟಕ ಆಗ್ರಹ

ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಕಣಕುಂಬಿಯಲ್ಲಿ ಕಳಸಾ-ಬಂಡೂರಿ ಯೋಜನೆ ಬಗ್ಗೆ ಮತ್ತೆ ಚರ್ಚೆಯಾಗಿದ್ದು, ತಕ್ಷಣವೇ ಯೋಜನೆಗೆ ಅನುಮೋದನೆ ನೀಡುವಂತೆ ಕರ್ನಾಟಕ ಸರ್ಕಾರ ಕೇಂದ್ರವನ್ನು ಆಗ್ರಹಿಸಿದೆ. ಗೋವಾ ಸರ್ಕಾರದ ಅನಗತ್ಯ ಆಕ್ಷೇಪಣೆಗಳ ಬಗ್ಗೆಯೂ ಕರ್ನಾಟಕ ಅಸಮಾಧಾನ ವ್ಯಕ್ತಪಡಿಸಿದೆ.

ವಿಳಂಬ ಮಾಡದೇ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಕರ್ನಾಟಕ ಆಗ್ರಹ
ಕಳಸಾ ಬಂಡೂರಿ ಯೋಜನೆ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Oct 11, 2024 | 11:09 AM

Share

ಬೆಂಗಳೂರು, ಅಕ್ಟೋಬರ್ 11: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಗೋವಾ ಸರ್ಕಾರ ಒಡ್ಡುತ್ತಿರುವ ಅಡೆತಡೆಗಳ ಬಗ್ಗೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜತೆಗೆ, ವಿಳಂಬ ಮಾಡದೆ ಯೋಜನೆಗೆ ಅನುಮೋದನೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಯೋಜನೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿಲ್ಲ ಎಂಬುದನ್ನೂ ಸ್ಪಷ್ಟಪಡಿಸಿದೆ.

ಅಕ್ಟೋಬರ್ 9 ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯು) 80 ನೇ ಸ್ಥಾಯಿ ಸಮಿತಿ ಸಭೆಯಲ್ಲಿ ಕಣಕುಂಬಿಯಲ್ಲಿ ಕಳಸಾ-ಬಂಡೂರಿ ಯೋಜನೆಯಡಿ ನೀರನ್ನು ತಿರುಗಿಸುವ ಬಗ್ಗೆ ಚರ್ಚಿಸಲಾಗಿದೆ.

ಕಾಳಿ ಮತ್ತು ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ನಡುವಿನ ಹುಲಿ ಕಾರಿಡಾರ್‌ನಿಂದ 10.68 ಹೆಕ್ಟೇರ್ ಅರಣ್ಯ ಭೂಮಿಯನ್ನು ಡೈವರ್ಶನ್ ವೇರ್, ಪಂಪ್‌ಹೌಸ್, ವಿದ್ಯುತ್ ಸಬ್‌ಸ್ಟೇಷನ್, ಪೈಪ್‌ಲೈನ್ ಮತ್ತು ನಿರ್ಮಾಣ ಚುಟುವಟಿಕೆಗಾಗಿ ಬಳಸಲು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆ ಸಭೆಯಲ್ಲಿ ಚರ್ಚೆಯ ಪ್ರಮುಖ ಅಜೆಂಡಾವಾಗಿತ್ತು. ಖಾನಾಪುರ ತಾಲೂಕಿನಲ್ಲಿ ಕಳಸಾ ನಾಲಾ ತಿರುವು ಯೋಜನೆ ನಿರ್ಮಾಣಕ್ಕಾಗಿ ಕಣಕುಂಬಿ ಮತ್ತು ಇತರ ಅಕ್ಕಪಕ್ಕದ ಗ್ರಾಮಗಳಲ್ಲಿ ವಿದ್ಯುತ್ ಲೈನ್ ಅಳವಡಿಸುವುದನ್ನೂ ಇದು ಒಳಗೊಂಡಿದೆ.

ಉತ್ತರ ಕರ್ನಾಟಕದ ಲಕ್ಷಾಂತರ ಮಂದಿಗೆ ಕುಡಿಯುವ ನೀರು

ಕರ್ನಾಟಕದ ಮನವಿಯನ್ನು ಆಲಿಸಿದ ಎನ್‌ಬಿಡಬ್ಲ್ಯು ಸ್ಥಾಯಿ ಸಮಿತಿ, ಯೋಜನೆಯ ಸ್ಥಿತಿಗತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯದ ಪ್ರತಿನಿಧಿಗಳಿಗೆ ಸೂಚಿಸಿದೆ. ಜತೆಗೆ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದೆ. ಯೋಜನೆಯ ಅನುಷ್ಠಾನದಿಂದ ಉತ್ತರ ಕರ್ನಾಟಕದ ಲಕ್ಷಾಂತರ ಜನರಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್‌ಟಿಸಿಎ) ತಜ್ಞರ ಸಮಿತಿಯು ಯೋಜನೆಗೆ ಅನುಮೋದನೆ ನೀಡಿ ಈಗಾಗಲೇ ಒಂಬತ್ತು ತಿಂಗಳುಗಳು ಕಳೆದಿವೆ. ಈ ಎಲ್ಲ ಬೆಳವಣಿಗೆಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ ಕೂಡಲೇ ಯೋಜನೆ ಆರಂಭಿಸಲು ಅರಣ್ಯ ಮತ್ತು ವನ್ಯಜೀವಿಗಳ ಇಲಾಖೆಯಿಂದ ಅನುಮತಿ ನೀಡಬೇಕು ಎಂದು ಮಂಜುನಾಥ್ ಪ್ರಸಾದ್ ಆಗ್ರಹಿಸಿದ್ದಾರೆ.

ಯೋಜನೆಯಡಿಯಲ್ಲಿ ಸುಮಾರು 10.68 ಹೆಕ್ಟೇರ್‌ ಜಾಗ ಹುಲಿ ಕಾರಿಡಾರ್‌ನಲ್ಲಿ ಬರುವುದರಿಂದ ಅರಣ್ಯ ಸಚಿವಾಲಯವು ಎನ್‌ಬಿಡಬ್ಲ್ಯು ಅನುಮೋದನೆಯನ್ನು ಪಡೆಯಲು ಕರ್ನಾಟಕ ಸರ್ಕಾರವನ್ನುಕ್ಕೆ ಸೂಚಿಸಿದೆ ಎಂದು ಅವರು ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಮಹದಾಯಿ ಜಲ ವಿವಾದ ನ್ಯಾಯಮಂಡಳಿ (ಎಂಡಬ್ಲ್ಯುಡಿಟಿ) 2018ರಲ್ಲಿಯೇ ಈ ಯೋಜನೆಯ ಮೂವರು ಭಾಗೀದಾರರಾದ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾಕ್ಕೆ ನದಿ ನೀರಿನ ಪಾಲನ್ನು ಮಂಜೂರು ಮಾಡಿ ಆದೇಶ ನೀಡಿದ್ದನ್ನು ಅವರು ಸಮಿತಿಗೆ ನೆನಪಿಸಿದ್ದಾರೆ. 2020 ರ ಕೇಂದ್ರ ಜಲ ಆಯೋಗವು ಕಳಸಾ-ಬಂಡೂರಿ ಯೋಜನೆಯ ಪರಿಷ್ಕೃತ ಯೋಜನಾ ವರದಿಯನ್ನು ಅನುಮೋದಿಸಬಹುದು ಎಂಬುದಾಗಿ ಸುಪ್ರೀಂ ಕೋರ್ಟ್ ಕೂಡ ಹೇಳಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಳಸಾ ಬಂಡೂರಿ ನಾಲಾ ಯೋಜನೆ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಯೋಜನೆಗೆ ಒಪ್ಪಿಗೆ ನೀಡಲು ಯಾವುದೇ ಸಮಸ್ಯೆ ಇಲ್ಲ ಎಂದು ಕೇಂದ್ರದ ಅಧಿಕಾರಿಗಳು ತಿಳಿಸಿದ್ದರು. ಆದರೆ, ಅದರ ನಡುವೆಯೇ ಗೋವಾದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳು ಕರ್ನಾಟಕ ನೀರಾವರಿ ಎಂಡಿಗೆ ಶೋಕಾಸ್ ನೋಟಿಸ್ ನೀಡಿದ್ದರು. ಅದರಲ್ಲಿ, 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ, ಗೋವಾ ಸರ್ಕಾರದ ಅನುಮತಿಯಿಲ್ಲದೆ ಕರ್ನಾಟಕ ಸರ್ಕಾರವು ಯೋಜನೆಯನ್ನು ಕೈಗೆತ್ತಿಕೊಳ್ಳಬಾರದು ಎಂದು ಉಲ್ಲೇಖಿಸಲಾಗಿತ್ತು ಎಂಬುದನ್ನು ಮಂಜುನಾಥ್ ಪ್ರಸಾದ್ ನೆನಪಿಸಿದ್ದಾರೆ.

ನಂತರ, ಕರ್ನಾಟಕವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅಂತಹ ನೋಟಿಸ್‌ಗಳನ್ನು ನೀಡಲು ಗೋವಾಗೆ ಯಾವುದೇ ಅಧಿಕಾರವಿಲ್ಲ ಮತ್ತು ಅದನ್ನು ಅಮಾನತುಗೊಳಿಸಬೇಕು ಎಂದು ಪ್ರತಿಪಾದಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು