AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಜ್ಯೋತಿ ಮರು ಪರಿಶೀಲನೆ: ಜಾತಿ ಪ್ರಮಾಣಪತ್ರ ಗೊಂದಲದ ಬಗ್ಗೆ ಸ್ಪಷ್ಟನೆ ನಿಡಿದ ಬೆಸ್ಕಾಂ

ಯೋಜನೆಯಿಂದ ಅರ್ನಹರನ್ನ ಕೈಬಿಡಲು, ಆರ್ಥಿಕ ಸೋರಿಕೆ ತಪ್ಪಿಸಲು ಸರ್ಕಾರ ಗೃಹಜ್ಯೋತಿ ಪರಿಷ್ಕರಣೆ ಶುರುಮಾಡಿದೆ. ಮನೆಮನೆಗೆ ಮೀಟರ್ ರೀಡರ್​ಗಳು ಭೇಟಿ ನೀಡಿ ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಜಾತಿ ಪ್ರಮಾಣ ಪತ್ರದ ಮಾಹಿತಿ ಪಡೆಯುತ್ತಿದ್ದಾರೆ. ಆದರೆ ಜಾತಿ ಮಾಹಿತಿ ನೀಡುವ ಬಗ್ಗೆ ಸಾಕಷ್ಟು ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಇದೀಗ ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಗೃಹಜ್ಯೋತಿ ಮರು ಪರಿಶೀಲನೆ: ಜಾತಿ ಪ್ರಮಾಣಪತ್ರ ಗೊಂದಲದ ಬಗ್ಗೆ ಸ್ಪಷ್ಟನೆ ನಿಡಿದ ಬೆಸ್ಕಾಂ
ಗೃಹಜ್ಯೋತಿ ಮರು ಪರಿಶೀಲನಾ ಕಾರ್ಯImage Credit source: tv9 kannada
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Jul 03, 2026 | 4:33 PM

Share

ಮುಖ್ಯಾಂಶಗಳು

  • ಗೃಹಜ್ಯೋತಿ ಮರು ಪರಿಶೀಲನಾ ಕಾರ್ಯ
  • ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ
  • ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸ್ಪಷ್ಟನೆ

ಬೆಂಗಳೂರು, ಜುಲೈ 03: ರಾಜ್ಯದ್ಯಂತ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ಮನೆ-ಮನೆ ಪರಿಶೀಲನೆ (Gruha Jyothi Revision) ಆರಂಭವಾಗಿದೆ. ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಮಾಹಿತಿ ಸಂಗ್ರಹದ ವೇಳೆ ಜಾತಿ ಪ್ರಮಾಣ ಕೇಳುವ ವಿಷಯ ಚರ್ಚೆ ಹುಟ್ಟುಹಾಕಿತ್ತು. ಉಚಿತ ವಿದ್ಯುತ್​ ನೀಡಲು ಜಾತಿ ಪ್ರಮಾಣ ಪತ್ರ ಏಕೆ ನೀಡಬೇಕು ಎಂದು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವಿರೋಧ ವ್ಯಕ್ತವಾದ ಹಿನ್ನೆಲೆ ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ ಎಂದು ಬೆಸ್ಕಾಂ (BESCOM) ಅಧಿಕೃತ ಆದೇಶ ಹೊರಡಿಸಿದೆ.

ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬೆಸ್ಕಾಂ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಗೃಹಜ್ಯೋತಿ ಮರು ಪರಿಶೀಲನಾ ಪ್ರಕ್ರಿಯೆ ವೇಳೆ ಜಾತಿ ಪ್ರಮಾಣಪತ್ರ ವಿಚಾರವಾಗಿ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಸದ್ಯ ಈ ವಿವಾದಕ್ಕೆ ತೆರೆ ಎಳೆದಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ, ಮರು ಪರಿಶೀಲನೆ ವೇಳೆ ಜಾತಿ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: Gruha Jyoti Scheme: ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD ಅರ್ಚನಾ!

ಅಷ್ಟೇ ಅಲ್ಲದೆ, ಅರ್ಜಿಯಲ್ಲಿ ಅಥವಾ ಪರಿಶೀಲನಾ ಫಾರ್ಮ್‌ನಲ್ಲಿ ಜಾತಿ ಮಾಹಿತಿ ನೀಡಲು ಇಷ್ಟವಿಲ್ಲದ ಗ್ರಾಹಕರಿಗಾಗಿ ‘ಮಾಹಿತಿ ನೀಡಲು ನಿರಾಕರಣೆ’ ಎಂಬ ಹೊಸ ಆಯ್ಕೆಯನ್ನು ನೀಡಲಾಗಿದೆ. ಈ ಆಯ್ಕೆಯನ್ನು ಗುರುತು ಮಾಡುವ ಮೂಲಕ ಗ್ರಾಹಕರು ತಮ್ಮ ಜಾತಿ ವಿವರವನ್ನು ನೀಡದೆಯೇ ಮರು ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ.

ಇದನ್ನೂ ಓದಿ: ಗೃಹಜ್ಯೋತಿ ಪರಿಷ್ಕರಣೆ ಎಫೆಕ್ಟ್​​: ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ

ಕಳೆದ ಬಾರಿ ಕೇವಲ ಆಧಾರ್ ಕಾರ್ಡ್​ ನಂಬರ್ ದಾಖಲಿಸಿ ಉಚಿತ ವಿದ್ಯುತ್ ಯೋಜನೆ ಲಾಭ ಪಡೆದುಕೊಳ್ಳಲಾಗಿತ್ತು. ಆದರೆ ಈ ಬಾರಿ ಆಧಾರ್ ಕಾರ್ಡ್ ಜೊತೆ ವೋಟರ್​ ಐಡಿ, ಪಾನ್ ಕಾರ್ಡ್​  ದಾಖಲೆಯನ್ನು ಕೊಡಬೇಕಾಗಿದೆ. ತೀವ್ರ ವಿರೋಧದ ಮಧ್ಯೆ ಇದೀಗ ಜಾತಿ ಮಾಹಿತಿ ನೀಡುವುದು ಕಡ್ಡಾಯಲ್ಲ ಎಂದು ಬೆಸ್ಕಾಂ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ