Gruha Jyothi Scheme: ಕರ್ನಾಟಕ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಘೋಷಣೆ ಮಾಡಲಾಗಿದ್ದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.

Gruha Jyothi Scheme: ಕರ್ನಾಟಕ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
ಗೃಹ ಜ್ಯೋತಿ

Updated on: Jun 14, 2023 | 2:13 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ(Gruha Jyothi Scheme) ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಜೂನ್ 18 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ರಾಜ್ಯದಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದರು. ಆದ್ರೆ,  ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಸೇವಾಸಿಂಧು ಆ್ಯಪ್​ ಮೂಲಕ ಅರ್ಜಿ ಸಲ್ಲಿಸಲು ವಿಳಂಬವಾಗಲಿದೆ. ಇದರಿಂದ ಸರ್ಕಾರ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿದೆ. ಹೀಗಾಗಿ ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಳೆ ಇಲ್ಲ. ಬದಲಾಗಿ ಜೂನ್ 18ರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಇದನ್ನೂ ಓದಿ: ಫ್ರೀ ವಿದ್ಯುತ್​ಗಾಗಿ 2.14 ಕೋಟಿ ಅರ್ಜಿದಾರರು ಕೇವಲ 20 ದಿನಗಳಲ್ಲಿ ಅರ್ಜಿ ಸಲ್ಲಿಸೋಕೆ ಸಾಧ್ಯನಾ? ಟೆಕ್ನಿಕಲ್ ಎಕ್ಸ್​ಪರ್ಟ್ಸ್​ ಹೇಳುವುದೇನು

ಕರ್ನಾಟಕ ವಿಧಾನಸಭಾ ಚುನವಾಣೆ ವೇಳೆ ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳಲ್ಲಿ 200 ಯೂನಿಟ್‌ ಉಚಿತವಾಗಿ ನೀಡುವ ಗ್ಯಾರಂಟಿಯೂ ಕೂಡ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಭಾರಿ ಬಹುಮತ ಗಳಿಸಿದ ಕಾಂಗ್ರೆಸ್‌ ಸರ್ಕಾರ ರಚಿಸಿದ ಮೊದಲನೇ ಸಚಿವ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿ ಜಾರಿಗೊಳಿಸುವುದಾಗಿ ಅನುಮೋದನೆ ನೀಡಲಾಗಿತ್ತು. ಇನ್ನು ಗೃಹಜ್ಯೋತಿ ಯೋಜನೆಗೆ ಕೆಲವು ಷರತ್ತುಗಳನ್ನು ವಿಧಿಸಿದ್ದ ಸರ್ಕಾರವು ಜೂನ್ ‌15ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು.

ರಾಜ್ಯದಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುವ ಗೃಹ ಜ್ಯೋತಿ ಯೋಜನೆಗೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದ್ದರು. ಅದರಂತೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ ಆಗಬೇಕಿತ್ತು. ಆದ್ರೆ, ಕೆಲ ತಾಂತ್ರಿಕ ದೋಷದಿಂದಾಗಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಲಾಗಿದೆ.

Published On - 2:03 pm, Wed, 14 June 23