AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jan Aushadhi Kendra: ಜನೌಷಧಿ ಕೇಂದ್ರ ಸ್ಥಾಪನೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ

Karnataka Janaushadhi Kendra: ಉತ್ತರ ಪ್ರದೇಶದಲ್ಲಿ ಭಾರತದಲ್ಲೇ ಅತಿಹೆಚ್ಚು ಜನೌಷಧಿ ಕೇಂದ್ರಗಳಿವೆ. 1112 ಜನೌಷಧಿ ಕೇಂದ್ರಗಳನ್ನು ಹೊಂದಿರುವ ಉತ್ತರ ಪ್ರದೇಶದ ನಂತರದ ಸ್ಥಾನ ಕರ್ನಾಟಕಕ್ಕೆ ಸಿಕ್ಕಿದೆ.

Jan Aushadhi Kendra: ಜನೌಷಧಿ ಕೇಂದ್ರ ಸ್ಥಾಪನೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ
ಜನೌಷಧಿ ಕೇಂದ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 09, 2021 | 2:09 PM

Share

ಬೆಂಗಳೂರು: ಖಾಸಗಿ ಮೆಡಿಕಲ್ ಶಾಪ್​ಗಳಿಗಿಂತ ಶೇ. 70ರಷ್ಟು ಕಡಿಮೆ ದರದಲ್ಲಿ ಔಷಧವನ್ನು ವಿತರಿಸುವ ಮೂಲಕ ಎಲ್ಲ ವರ್ಗದವರಿಗೂ ಅಗ್ಗದ ಬೆಲೆಯಲ್ಲಿ ಮಾತ್ರೆ, ಔಷಧಗಳನ್ನು ನೀಡಲು ಕೇಂದ್ರ ಸರ್ಕಾರ ದೇಶಾದ್ಯಂತ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಡಿ ಜನೌಷಧಿ ಕೇಂದ್ರಗಳನ್ನು (Janaushadhi Kendra) ತೆರೆದಿದೆ. ಕೇಂದ್ರ ಸಚಿವರಾಗಿದ್ದ ಅನಂತ್​ ಕುಮಾರ್ ಅವರ ಅವಧಿಯಲ್ಲಿ ಜನೌಷಧಿ ಕೇಂದ್ರಕ್ಕೆ ಚಾಲನೆ ಸಿಕ್ಕಿತ್ತು. ಇದೀಗ ಇಡೀ ದೇಶದಲ್ಲೇ ಅತಿಹೆಚ್ಚು ಜನೌಷಧಿ ಕೇಂದ್ರಗಳಿರುವ (Jan Aushadhi Kendra) ರಾಜ್ಯಗಳ ಪೈಕಿ ಕರ್ನಾಟಕ 2ನೇ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದೆ.

ಉತ್ತರ ಪ್ರದೇಶದಲ್ಲಿ ಭಾರತದಲ್ಲೇ ಅತಿಹೆಚ್ಚು ಜನೌಷಧಿ ಕೇಂದ್ರಗಳಿವೆ. 1112 ಜನೌಷಧಿ ಕೇಂದ್ರಗಳನ್ನು ಹೊಂದಿರುವ ಉತ್ತರ ಪ್ರದೇಶದ ನಂತರದ ಸ್ಥಾನ ಕರ್ನಾಟಕಕ್ಕೆ ಸಿಕ್ಕಿದೆ. ಕರ್ನಾಟಕದ ನಗರ ಪ್ರದೇಶಗಳು ಮಾತ್ರವಲ್ಲದೆ ಎಲ್ಲ ತಾಲೂಕು, ನಗರ ಕೇಂದ್ರಗಳಲ್ಲೂ ಒಟ್ಟಾರೆ 905 ಜನೌಷಧಿ ಮಳಿಗೆಗಳನ್ನು ತೆರೆಯಲಾಗಿದೆ. ಈ ಮೂಲಕ ಕರ್ನಾಟಕದ ಮತ್ತೊಂದು ದಾಖಲೆ ಬರೆದಿದೆ.

ಜನೌಷಧಿ ಮಳಿಗೆಗಳು 2016-17ರಲ್ಲಿ ಆರಂಭವಾದಾಗ 400 ಔಷಧಗಳು, 88 ಸರ್ಜಿಕಲ್​ಗಳಿದ್ದವು. ಈಗ 1,451 ಔಷಧಗಳು ಹಾಗೂ 204 ಸರ್ಜಿಕಲ್​ಗಳಿವೆ. ಉತ್ತರ ಪ್ರದೇಶ- 1112, ಕರ್ನಾಟಕ- 905, ತಮಿಳುನಾಡು- 820, ಕೇರಳ- 812, ಮಹಾರಾಷ್ಟ್ರ- 590 ಜನೌಷಧಿ ಕೇಂದ್ರಗಳನ್ನು ಹೊಂದುವ ಮೂಲಕ ಟಾಪ್ 5ನೇ ಸ್ಥಾನದಲ್ಲಿವೆ. ಅತಿಹೆಚ್ಚು ಜನೌಷಧಿ ಕೇಂದ್ರಗಳಿರುವ ಟಾಪ್ 5 ರಾಜ್ಯಗಳ ಪೈಕಿ 3 ರಾಜ್ಯಗಳು ದಕ್ಷಿಣ ಭಾರತದ್ದು ಎಂಬುದು ಮತ್ತೊಂದು ವಿಶೇಷ.

ಈ ಮಾಹಿತಿಯನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ. ದೇಶದಲ್ಲಿ 7938 ಜನೌಷಧ ಮಳಿಗೆಗಳನ್ನು ತೆರೆಯಲಾಗಿದ್ದು, ಈ ಮೂಲಕ ಕೋಟ್ಯಂತರ ಜನರು ಅತಿ ಕಡಿಮೆ ಬೆಲೆಗೆ ಔಷಧಗಳನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: Tejasvi Surya: ಬೆಂಗಳೂರಲ್ಲಿ ಮಧ್ಯರಾತ್ರಿಯಲ್ಲಿ ಕೋವಿಡ್‌ ಬೆಡ್‌ ಬ್ಲಾಕ್‌ ಮಾಡ್ತಿರೋ ಕರಾಳ ದಂಧೆ ಬಯಲು ಮಾಡಿದ ತೇಜಸ್ವಿ ಸೂರ್ಯ

‘ಮಾಸ್ಕ್ ಎಲ್ಲಿ ಸ್ವಾಮಿ?’ ಮುಖಗವಸು ಇಲ್ಲದೆ ಸೈಕಲ್​ನಲ್ಲಿ ಬೆಂಗಳೂರು ಸುತ್ತಿದ ತೇಜಸ್ವಿ ಸೂರ್ಯಗೆ ಜನರ ಪ್ರಶ್ನೆ

(Karnataka Has Second Highest 905 Janaushadhi Kendra in India Providing Medicines in 70 Percent Cheaper Price)

Published On - 2:05 pm, Mon, 9 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ