ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್​ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರದಿಂದ ಸಿದ್ಧತೆ: ಹೈಕೋರ್ಟ್​ನಿಂದ ತಡೆ

ಬಿಜೆಪಿ ಪ್ರಮುಖರ ವಿರುದ್ಧದ 62 ಕ್ರಿಮಿನಲ್ ಕೇಸ್​ಗಳನ್ನು ವಾಪಸ್​ ಪಡೆಯುವ ಸಂಬಂಧ 2020ರ ಆಗಸ್ಟ್​ 31ರಂದು ತೆಗೆದುಕೊಂಡ ತೀರ್ಮಾನವನ್ನು ಸದ್ಯ ಅನುಷ್ಠಾನಗೊಳಿಸುವಂತಿಲ್ಲ ಎಂದು ಇಂದಿನ ವಿಚಾರಣೆ ಬಳಿಕ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ಬಿಜೆಪಿ ನಾಯಕರ ವಿರುದ್ಧದ 62 ಕ್ರಿಮಿನಲ್​ ಕೇಸ್ ಹಿಂಪಡೆಯಲು ರಾಜ್ಯ ಸರ್ಕಾರದಿಂದ ಸಿದ್ಧತೆ: ಹೈಕೋರ್ಟ್​ನಿಂದ ತಡೆ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on:Dec 22, 2020 | 10:45 AM

ಬೆಂಗಳೂರು: ಬಿಜೆಪಿಯ ಶಾಸಕರು-ಸಚಿವರ ವಿರುದ್ಧ ದಾಖಲಾಗಿದ್ದ 62 ಕ್ರಿಮಿನಲ್​ ಮೊಕದ್ದಮೆಯನ್ನು ಹಿಂಪಡೆಯಲು ನಿರ್ಧರಿಸಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಡೆ ನೀಡಿದೆ. ಆದೇಶವನ್ನು ಜಾರಿ ಮಾಡದಂತೆ ಸೂಚಿಸಿದೆ.

ಕೆಲವು ರೈತ ಪ್ರತಿಭಟನೆಗಳು, ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಒಟ್ಟು 62 ಕ್ರಿಮಿನಲ್​ ಕೇಸ್​ಗಳನ್ನು ಕೈಬಿಡುವ ಸಂಬಂಧ ಆಗಸ್ಟ್​ 31ರಂದು ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಾನವ ಹಕ್ಕು ಸಂಸ್ಥೆಯಾದ ಪೀಪಲ್​ ಯೂನಿಯನ್​ ಆಫ್ ಸಿವಿಲ್​ ಲಿಬರ್ಟೀಸ್​ (PUCL)ನ ಕರ್ನಾಟಕ ವಿಭಾಗ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು 2021ರ ಜನವರಿ 29ಕ್ಕೆ ಮುಂದೂಡಿದೆ. ಈ ಮಧ್ಯೆ ಜನವರಿ 22ರೊಳಗೆ ಆಕ್ಷೇಪಣಾ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಬಿಜೆಪಿ ಪ್ರಮುಖರ ವಿರುದ್ಧದ 62 ಕ್ರಿಮಿನಲ್ ಕೇಸ್​ಗಳನ್ನು ವಾಪಸ್​ ಪಡೆಯುವ ಸಂಬಂಧ 2020ರ ಆಗಸ್ಟ್​ 31ರಂದು ತೆಗೆದುಕೊಂಡ ತೀರ್ಮಾನವನ್ನು ಸದ್ಯ ಅನುಷ್ಠಾನಗೊಳಿಸುವಂತಿಲ್ಲ ಎಂದು ಇಂದಿನ ವಿಚಾರಣೆ ಬಳಿಕ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ಸಂಪುಟ ಉಪಸಮಿತಿಯ ನೇತೃತ್ವ ವಹಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಶಿಫಾರಿಸಿನ ಆಧಾರದಲ್ಲಿ, ಯಡಿಯೂರಪ್ಪ ಸರ್ಕಾರ ಈ ತೀರ್ಮಾನಕ್ಕೆ ಬಂದಿತ್ತು. ಅದರ ಅನ್ವಯ ವಿವಿಧ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕಾನೂನು ಉಲ್ಲಂಘನೆ ಮಾಡಿದ್ದರಿಂದ ಮೈಸೂರು ಸಂಸದ ಪ್ರತಾಪ್​ ಸಿಂಹ, ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್​, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸೇರಿ ಇನ್ನೂ ಹಲವು ಪ್ರಮುಖ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್​ ಪ್ರಕರಣಗಳು ರದ್ದಾಗುತ್ತಿದ್ದವು. ಆದರೆ ಸದ್ಯಕ್ಕಂತೂ ಆ ಭಾಗ್ಯವನ್ನು ಹೈಕೋರ್ಟ್​ ನೀಡುತ್ತಿಲ್ಲ.

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂದರ್ಶನ: B Y ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ನನಗೆ ಯಾವ ದೂರೂ ಬಂದಿಲ್ಲ

Published On - 5:01 pm, Mon, 21 December 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ