ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ: ಅಧಿಕೃತ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

Hookah Ban: ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧಿಸಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಇಂದು (ಫೆಬ್ರವರಿ 07) ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ: ಅಧಿಕೃತ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 07, 2024 | 9:14 PM

ಬೆಂಗಳೂರು, (ಫೆಬ್ರವರಿ 07): ಕರ್ನಾಟಕದಲ್ಲಿ ಹುಕ್ಕಾ ಬಾರ್ (Hookah Bar) ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ (Karnataka Health and Family Welfare department) ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹುಕ್ಕಾ ಬಾರ್‌ಗಳ ಪರಿಣಾಮವನ್ನು ಅಧ್ಯಯನ ಮಾಡಿದ ಆರೋಗ್ಯ ತಜ್ಞರು ನಿಷೇಧಕ್ಕೆ ಶಿಫಾರಸು ಮಾಡಿದ್ದರು. ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ ಹುಕ್ಕಾ ಉತ್ಪನ್ನ ಹಾಗೂ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ COTPA 2003, 2015 ಕಾಯ್ದೆ ಅನ್ವಯ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಈ ಹಿಂದೆ ಹುಕ್ಕಾ ನಿಷೇಧದ ಸುಳಿವು ನೀಡಿದ್ದ ಸಚಿವ

ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹಿಂದಿನ ಸರ್ಕಾರಗಳು ಕ್ರಮಗಳನ್ನು ಕೈಗೊಂಡು ಕಾಲಕಾಲಕ್ಕೆ ಬದಲಾವಣೆಗಳನ್ನು ತರಲು ಪ್ರಯತ್ನಿಸಿದವು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲೂ ಹುಕ್ಕಾ ನಿಷೇಧ ಮತ್ತು ನಗರ ಪ್ರದೇಶಗಳಲ್ಲಿ ಧೂಮಪಾನ ನಿಷೇಧ ವಲಯಗಳನ್ನು ರಚಿಸುವ ಪ್ರಯತ್ನಗಳು ನಡೆದಿದ್ದವು. ಈ ಉಪಕ್ರಮಕ್ಕಾಗಿ ನಾವು ವಿಶ್ವಸಂಸ್ಥೆಯಿಂದ ಪ್ರಶಸ್ತಿಯನ್ನು ಸಹ ಪಡೆದಿದ್ದೇವೆ. ಇಂತಹ ಉತ್ಪನ್ನಗಳನ್ನು ನಿಷೇಧಿಸುವಲ್ಲಿ ಕರ್ನಾಟಕ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ದಿನೇಶ್ ಗುಂಡೂರಾವ್ ಇತ್ತೀಚೆಗೆ ಹೇಳಿದ್ದರು.

ಹುಕ್ಕಾ ಬಾರ್‌ಗಳು ಜನರ ಮೇಲೆ ವಿಶೇಷವಾಗಿ ಯುವಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ. 13 ವರ್ಷದಿಂದ 28-29 ರವರೆಗಿನ ಯುವಕರು ತಂಬಾಕು ಬಳಸುವ ಹುಕ್ಕಾಗೆ ಬಲಿಯಾಗುತ್ತಿದ್ದಾರೆ. ಈಗಿರುವ COPTA ಕ್ಕೆ ನಾವು ಕೆಲವು ತಿದ್ದುಪಡಿಗಳನ್ನು ಮಾಡಿದ್ದೇವೆ ಮತ್ತು ಸಾರ್ವಜನಿಕವಾಗಿ ಸಿಗರೇಟ್ ಮಾತ್ರವಲ್ಲದೆ ಇತರ ಎಲ್ಲಾ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಿದ್ದೇವೆ. ದಂಡದ ಮೊತ್ತ ಹೆಚ್ಚಿಸಲು ಮುಂದಾಗಿದ್ದೇವೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Published On - 8:51 pm, Wed, 7 February 24

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ