ನಕಲಿ ಔಷಧ ಜಾಲಕ್ಕೆ ಕಡಿವಾಣ ಹಾಕಲು ಮಹತ್ವದ ಕ್ರಮ: ಸುಳಿವು ನೀಡಿದವರಿಗೆ ₹50 ಸಾವಿರದವರೆಗೆ ಬಹುಮಾನ!

ನಕಲಿ ಔಷಧ ಜಾಲದ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಕರ್ನಾಟಕ ಆರೋಗ್ಯ ಇಲಾಖೆ, ದಂಧೆಯ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ 10 ಸಾವಿರ ರೂಪಾಯಿಯಿಂದ 50 ಸಾವಿರ ರೂಪಾಯಿವರೆಗೆ ನಗದು ಬಹುಮಾನ ನೀಡಲು ಮುಂದಾಗಿದೆ. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುತ್ತದೆ ಎಂದು ಇಲಾಖೆ ಭರವಸೆ ನೀಡಿದೆ.

ನಕಲಿ ಔಷಧ ಜಾಲಕ್ಕೆ ಕಡಿವಾಣ ಹಾಕಲು ಮಹತ್ವದ ಕ್ರಮ: ಸುಳಿವು ನೀಡಿದವರಿಗೆ ₹50 ಸಾವಿರದವರೆಗೆ ಬಹುಮಾನ!
ಸಾಂದರ್ಭಿಕ ಚಿತ್ರ
Image Credit source: tv9
Edited By:

Updated on: Aug 20, 2026 | 11:33 AM

ಮುಖ್ಯಾಂಶಗಳು

  • ನಕಲಿ ಔಷಧ ಸುಳಿವು ನೀಡಿದರೆ ಬಹುಮಾನ
  • ₹10 ಸಾವಿರದಿಂದ ₹50 ಸಾವಿರದವರೆಗೆ ನಗದು ಗಿಫ್ಟ್
  • ನಕಲಿ ಔಷಧಕ್ಕೆ ಕಡಿವಾಣ ಹಾಕಲು ಕ್ರಮ

ಬೆಂಗಳೂರು, ಆಗಸ್ಟ್ 20: ದೇಶಾದ್ಯಂತ ನಕಲಿ ಔಷಧ (Fake Medicine) ಜಾಲದ ಸಂಪರ್ಕದ ಬಗ್ಗೆ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಕರ್ನಾಟಕ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ನಕಲಿ ಔಷಧಗಳ ತಯಾರಿಕೆ, ದಾಸ್ತಾನು, ಮಾರಾಟ ಮತ್ತು ಪೂರೈಕೆಯ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ 10 ಸಾವಿರ ರೂ.ನಿಂದ 50 ಸಾವಿರ ರೂ.ವರೆಗೆ ನಗದು ಬಹುಮಾನ ನೀಡಲು ಇಲಾಖೆ ಮುಂದಾಗಿದೆ.

ಔಷಧ ನಿಯಂತ್ರಣ ಮಂಡಳಿ ಸಹಾಯವಾಣಿಗೆ ಮಾಹಿತಿ ನೀಡಲು ಮನವಿ

ನಕಲಿ ಔಷಧಗಳ ಜಾಲದ ಬಗ್ಗೆ ಸಾರ್ವಜನಿಕರಿಂದಲೇ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಅನುಮಾನಾಸ್ಪದ ಔಷಧಗಳು, ಮೆಡಿಕಲ್ ಸ್ಟೋರ್‌ಗಳು ಅಥವಾ ನಕಲಿ ಔಷಧ ದಂಧೆಯ ಬಗ್ಗೆ ಮಾಹಿತಿ ಇದ್ದರೆ ಔಷಧ ನಿಯಂತ್ರಣ ಮಂಡಳಿ (Drug Control Board) ಸಹಾಯವಾಣಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಸಾರ್ವಜನಿಕರಿಂದ ಲಭ್ಯವಾಗುವ ಮಾಹಿತಿಯನ್ನು ಆಧರಿಸಿ ಔಷಧ ನಿಯಂತ್ರಣ ಅಧಿಕಾರಿಗಳು ಪರಿಶೀಲನೆ ಹಾಗೂ ತನಿಖೆ ನಡೆಸಲಿದ್ದಾರೆ. ನಕಲಿ ಔಷಧ ತಯಾರಿಕೆ ಅಥವಾ ಮಾರಾಟದ ಬಗ್ಗೆ ಖಚಿತ ಸುಳಿವು ದೊರೆತರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ.

ನಕಲಿ ಔಷಧ ಜಾಲಕ್ಕೆ ಕಡಿವಾಣ ಹಾಕಲು ಜನರ ಸಹಕಾರಕ್ಕೆ ಮನವಿ

ಇತ್ತೀಚೆಗೆ ಬೆಂಗಳೂರಿನಲ್ಲಿ ಪತ್ತೆಯಾದ ನಕಲಿ ಔಷಧ ತಯಾರಿಕಾ ಜಾಲದ ತನಿಖೆ ದೇಶದ ಹಲವು ರಾಜ್ಯಗಳಿಗೆ ವಿಸ್ತರಿಸಿರುವ ಸಾಧ್ಯತೆ ಬೆಳಕಿಗೆ ಬಂದಿತ್ತು. ಬೆಂಗಳೂರಿನಿಂದ ಮುಂಬೈವರೆಗೆ ಸಂಪರ್ಕ ಹೊಂದಿರುವ ಅಂತರರಾಜ್ಯ ಜಾಲದ ಬಗ್ಗೆ ದೇಶದ ವಿವಿಧ ರಾಜ್ಯಗಳ Drug Controllers ಮತ್ತು State Licensing Authoritiesಗೆ ಎಚ್ಚರಿಕೆ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ನಕಲಿ ಔಷಧಗಳ ಜಾಲವನ್ನು ಸಂಪೂರ್ಣವಾಗಿ ಪತ್ತೆಹಚ್ಚಲು ಸಾರ್ವಜನಿಕರ ಸಹಕಾರ ಪಡೆಯುವುದು ಮಹತ್ವದ ಹೆಜ್ಜೆಯಾಗಿದೆ. ರೋಗಿಗಳ ಆರೋಗ್ಯ ಮತ್ತು ಜೀವಕ್ಕೆ ಅಪಾಯ ಉಂಟುಮಾಡುವ ನಕಲಿ ಔಷಧಗಳ ದಂಧೆಯನ್ನು ಮಟ್ಟಹಾಕಲು ಜನರು ಜಾಗೃತರಾಗಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈ, ಹಿಮಾಚಲವರೆಗೂ ನಕಲಿ ಔಷಧ ಜಾಲ! ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ಔಷಧಗಳೇ ಟಾರ್ಗೆಟ್, ದೇಶಾದ್ಯಂತ ಹೈ ಅಲರ್ಟ್

ನಕಲಿ ಅಥವಾ ಅನುಮಾನಾಸ್ಪದ ಔಷಧ ಕಂಡುಬಂದರೆ ಸುಮ್ಮನಿರದೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡುವ ವ್ಯವಸ್ಥೆಯನ್ನೂ ಕಲ್ಪಿಸಲು ಇಲಾಖೆ ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us