AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊರೊನಾ ಅಬ್ಬರ…ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್​​ಲೈನ್ಸ್

Covid guidelines: ಕೊರೊನಾ ವೈರಾಣುವಿನ ಹೊಸ ರೂಪಾಂತರಿಯಾದ ಒಮಿಕ್ರಾನ್‌ ಬಗ್ಗೆ ಇಡೀ ಜಗತ್ತೇ ಈಗ ಆತಂಕಗೊಂಡಿತ್ತು. ಆದ್ರೆ ಇದೀಗ ದಿನ ಕಳೆದಂತೆ ಇಡೀ ಜಗತ್ತನ್ನೇ ನಡುಗಿಸಿದ್ದ ಮಹಾಮಾರಿ ಮತ್ತೆ ಕರ್ನಾಟಕದಲ್ಲಿ ಆ್ಯಕ್ಟೀವ್​ ಆಗಿದ್ದು, ಸಕ್ರಿಯ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಇದರ ನಡುವೆ ಶಾಲೆಗಳು ಸಹ ಪ್ರಾರಂಭವಾಗಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ, ಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದೆ.

ಕರ್ನಾಟಕದಲ್ಲಿ ಕೊರೊನಾ ಅಬ್ಬರ...ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್​​ಲೈನ್ಸ್
Covid Guidelines
Vinay Kashappanavar
| Updated By: ರಮೇಶ್ ಬಿ. ಜವಳಗೇರಾ|

Updated on: May 31, 2025 | 12:09 PM

Share

ಬೆಂಗಳೂರು, (ಮೇ 31): ಒಂದೆಡೆ ಬೇಸಿಗೆ ರಜೆ (Summer holidays) ಮುಗಿಸಿಕೊಂಡು ವಿದ್ಯಾರ್ಥಿಗಳು(Students) ವಾಪಸ್ ಶಾಲೆಗಳತ್ತ (Schools) ಹೊರಟ್ಟಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ದಿನೇ ದಿನೇ ಕೊವಿಡ್ (Coronavirus) ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ (Karnataka Health Department), ಸರ್ಕಾರಿ ಹಾಗೂ ಖಾಸಗಿ  ಶಾಲೆಗಳಿಗೆ ಹೊಸ ಮಾರ್ಗಸೂಚಿ(Covid guidelines)  ಪ್ರಕಟಿಸಿದೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್​ರಕಟಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಹಾಗೇ ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೊರೊನಾ ಮತ್ತಷ್ಟು ಹೆಚ್ಚಳ, ಹೆಮ್ಮಾರಿಗೆ 3ನೇ ಬಲಿ: ಟೆಸ್ಟಿಂಗ್ ಕಡ್ಡಾಯಗೊಳಿಸಿದ ಕೇಂದ್ರ

ಆರೋಗ್ಯ ಇಲಾಖೆಯ ಗೈಡ್​ಲೈನ್ಸ್​

  • ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.
  •  ⁠ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
  •  ⁠ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
  •  ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು.
  •  ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.

ಬೆಂಗಳೂರು ಕೊರೊನಾ ಹಾಟ್​ ಸ್ಟಾಟ್

ರಾಜ್ಯದಲ್ಲಿ ಮಳೆ ನಡುವೆ ಕೊರೊನಾ ಕ್ರಿಮಿಯ ಅಬ್ಬರ ಜೋರಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದರ ಜೊತೆ ದೇಶದ ಹಲವು ರಾಜ್ಯದಲ್ಲೂ ಸೋಂಕಿನ ಸಂಖ್ಯೆ ಹೆಚ್ಚು ಆಗುತ್ತಿರುವುದು ತಲೆ ನೋವಾಗಿ ಪರಿಣಮಿಸಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು