Covid19 Guidelines: ಕರ್ನಾಟಕದಲ್ಲಿ ಕ್ರಿಸ್‌ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ
ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸಭೆ ಸಮಾರಂಭ ಆಯೋಜಕರಿಗೆ ಕರ್ನಾಟಕ ಆರೋಗ್ಯ ಇಲಾಖೆ ಹೊಸದಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಬೆಂಗಳೂರು: ಹೊಸ ವರ್ಷ ಸಮೀಪಿಸುತ್ತಿದೆ. 2022ಕ್ಕೆ ಬೈ ಹೇಳಿ 2023 ಹೊಸ ವರ್ಷವನ್ನು (New Year 2023) ಬರಮಾಡಿಕೊಳ್ಳಲು ವಿಶ್ವದಾದ್ಯಂತ ಜನರು ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದರ ಮಧ್ಯೆ BF.7 ಉಪತಳಿ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಆಚರಣೆಗೆ (Christmas and New Year) ಗೈಡ್‌ಲೈನ್ಸ್ ಪ್ರಕಟಿಸಿದೆ. ಸಾರ್ವಜನಿಕರು ಹಾಗೂ ಸಭೆ ಸಮಾರಂಭ ಆಯೋಜಕರಿಗೆ ಮಾರ್ಗಸೂಚಿ (Covid19 guidelines) ಪ್ರಕಟಿಸಲಾಗಿದ್ದು, ಅದು ಈ ಕೆಳಗಿನಂತಿದೆ ನೋಡಿ.
ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ, ಎಸಿ ಹಾಲ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡಾಯ: ಸುಧಾಕರ್
ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿ, ಬಸ್, ರೈಲು, ಮೆಟ್ರೋ, ವಿಮಾನಯಾನ ವೇಳೆ ಮಾಸ್ಕ್ ಧರಿಸಬೇಕು ಎಂದು ಗೈಡ್ಲೈನ್ಸ್ನಲ್ಲಿ ತಿಳಿಸಲಾಗಿದೆ.
ಇಂದು(ಡಿಸೆಂಬರ್ 22) ಮಧ್ಯರಾತ್ರಿಯಿಂದಲೇ ಹೊಸ ಗೈಡ್‌ಲೈನ್ಸ್ ಅನ್ವಯವಾಗಲಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುವ ಹೊಸ ಗೈಡ್‌ಲೈನ್ಸ್ ಮುಂದುವರಿಯಲಿದೆ.
ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಚ್-19 ಪ್ರಕರಣಗಳು ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸವರ್ಷಾಚರಣೆಯ ಸಂದರ್ಭಗಳಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು.@cmofKarnataka @mla_sudhakar @Comm_dhfwka @MDNHM_Kar @iiscbangalore @SWRRLY @KARailway @PIBBengaluru @KarnatakaVarthe pic.twitter.com/QA9sW1G1z8
— K’taka Health Dept (@DHFWKA) December 22, 2022
ಕ್ರಿಸ್‌ಮಸ್ ಹಾಗೂ ಹೊಸವರ್ಷ ಆಚರಣೆಗೆ ಮಾರ್ಗಸೂಚಿ
- ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ -ಬೆಳಕಿನ ಮಧ್ಯೆ ಆಯೋಜಿಸಬೇಕು.
- ಹಗಲು ವೇಳೆಯಲ್ಲಿಯೇ ಕಾರ್ಯಕ್ರಮ ಆಯೋಜನೆಗೆ ಸಲಹೆ.
- ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು.
- ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ
- ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ
- ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು ತಡೆಯಬೇಕು
- ಸಾಮಾಜಿಕ ಅಂತರ ಪಾಲನೆ ಮಾಡುವಂತೆ ಸಲಹೆ
- ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಳ್ಳಬೇಕು
- ಉಸಿರಾಟದ ಸಮಸ್ಯೆ, ಸೋಂಕಿನ ಲಕ್ಷಣ ಹೊಂದಿರುವವರು ಸ್ವಯಂಪ್ರೇರಿತವಾಗಿ ಪ್ರತ್ಯೇಕವಾಗಿದ್ದು ಪರೀಕ್ಷೆ ಮಾಡಿಸಿಕೊಳ್ಳಬೇಕು.
- ವೃದ್ಧರು, ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮಾಸ್ಕ್ ಧರಿಸಿ ಸಾರ್ವಜನಿಕವಾಗಿ ಓಡಾಡುವಂತೆ ಸಲಹೆ ನೀಡಲಾಗಿದೆ.