AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆಯ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಇನ್ಮುಂದೆ ಸಿಬ್ಬಂದಿ ಹಾಜರತಿಗೆ ವೇತನ ಲಿಂಕ್!

ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಂದ್ರೆ ಹೇಳೊರಿಲ್ಲ ಕೇಳೊರಿಲ್ಲ ಎಂಬಂತಾಗಿದೆ. ಯಾವಾಗ ಆಸ್ಪತ್ರೆಗೆ ಬರುತ್ತಾರೋ ಹೋಗುತ್ತಾರೋ ಎನ್ನುವುದೇ ಗೊತ್ತಾಗಲ್ಲ. ಇದರಿಂದ ಸರಿಯಾದ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೇ ಅದೆಷ್ಟೋ ರೋಗಿಳು ಸಾವನ್ನಪ್ಪಿದ್ದುಂಟು. ಈ ಬಗ್ಗೆ ಗ್ರಾಮೀಣ ಭಾಗದಲ್ಲಿ ಸಾಕಷ್ಟು ದೂರುಗಳು ಕೇಳುರುತ್ತಿವೆ. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರ ಕಳ್ಳಾಟಕ್ಕೆ ಬ್ರೇಕ್ ಹಾಕಲು ಮುಂದಾಗಿದೆ.

ಸರ್ಕಾರಿ ಆಸ್ಪತ್ರೆಯ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಇನ್ಮುಂದೆ ಸಿಬ್ಬಂದಿ ಹಾಜರತಿಗೆ ವೇತನ ಲಿಂಕ್!
Doctor
ವಿನಯ್​ ಕಾಶಪ್ಪನವರ್​
| Edited By: |

Updated on:Jun 29, 2026 | 10:40 PM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟಕ್​ಕೆ ಬೀಳಲಿದೆ ಬ್ರೇಕ್
  • ಸರ್ಕಾರಿ ವೈದ್ಯರಿಗೆ ಬಂತು ಫೇಸಿಯಲ್ ಅಟೆಂಡೆನ್ಸ್
  • ಹಾಜರತಿಗೆ ಲಿಂಕ್ ಆಗಲಿದೆ ಆರೋಗ್ಯ ಇಲಾಖೆ ಸಿಬ್ಬಂದಿ ವೇತನ

ಬೆಂಗಳೂರು, (ಜೂನ್ 29): ಸರ್ಕಾರಿ ಆಸ್ಪತ್ರೆಯ ವೈದ್ಯರ Governmnet Hospital Doctor)  ಕಳ್ಳಾಟ ಹೆಚ್ಚಾಗಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಡಾಕ್ಟರ್​​​ಗಳು ಆಸ್ಪತ್ರೆಯಲ್ಲೇ ಇರಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ (Karnataka Health Deparment), ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಆರೋಗ್ಯ ಇಲಾಖೆ ಹೊಸ ರೂಲ್ಸ್ ಜಾರಿಗೆ ಮುಂದಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವು ವೈದ್ಯರು ಆಸ್ಪತ್ರೆಗೆ ಬಂದು ಅಟೆಂಡೆನ್ಸ್  (facial attendance) ಪಂಚ್ ಮಾಡಿ ಹೋಗುತ್ತಾರೆ, ಹೀಗೆ ಕಳ್ಳಾಟವಾಡುವ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಇನ್ಮುಂದೆ ಬೀಳಲಿದೆ ಬ್ರೇಕ್. ಹೌದು…ಮೊಬೈಲ್ ನಲ್ಲಿ ಫೇಸಿಯಲ್ ಅಟೆಂಡೆನ್ಸ್ ಸ್ಕ್ರೀನಿಂಗ್ ಆ್ಯಪ್ ಮೂಲಕ ವೈದ್ಯರ ಟ್ರ್ಯಾಕಿಂಗ್ ಮಾಡಲು ಪ್ಲ್ಯಾನ್ ಮಾಡಿದೆ.

ಸರ್ಕಾರಿ ವೈದ್ಯರಿಗೆ ಬಂತು ಫೇಸಿಯಲ್ ಅಟೆಂಡೆನ್ಸ್

ಇತ್ತೀಚೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದು ನೆಟ್ಟಗಿಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ. ವೈದ್ಯರು ಸರಿಯಾದ ಟೈಮ್ ಗೆ ಬರೋದಿಲ್ಲ. ಇನ್ನು ಕೆಲವು ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಬಂದು ಬಯೋಮೇಟ್ರಿಕ್ ಪಂಚ್ ಮಾಡಿ ಬೇರೆ ಆಸ್ಪತ್ರೆಗೆ ಹೋಗುವುದು. ಡ್ಯೂಟಿ ಬಿಟ್ಟು ಬೇರೆ ಪರ್ಸನಲ್ ಕೆಲಸದಲ್ಲಿ ಭಾಗಿಯಾಗುವ ಆರೋಪ ಕೇಳಿ ಬಂದಿದೆ. ಹೀಗಾಗಿ ಆರೋಗ್ಯ ಇಲಾಖೆ, ಫೇಸಿಯಲ್ ಅಟೆಂಡೆನ್ಸ್ ಎನ್ನುವ ಸರ್ಜಿಕಲ್ ಸ್ಟ್ರೈಕ್ ಗೆ ಮುಂದಾಗಿದೆ. ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆರೋಗ್ಯ ಸೌಧ ಸಿಬ್ಬಂದಿ, ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಫೇಸಿಯಲ್ ಅಟೆಂಡೆನ್ಸ್ ಜಾರಿಗೆ ಮುಂದಾಗಿದೆ.

ಇದನ್ನೂ ಓದಿ: ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್: ಬಸ್ ಪಾಸ್ ಶುಲ್ಕ ಮರುಪಾವತಿಗೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ?

ಹಾಜರತಿಗೆ ಲಿಂಕ್ ಆಗಲಿದೆ ಸಿಬ್ಬಂದಿ ವೇತನ!

ಮೊಬೈಲ್ ನಲ್ಲಿ ಫೇಸಿಯಲ್ ಅಟೆಂಡೆನ್ಸ್ ಸ್ಕ್ರೀನಿಂಗ್ ಆ್ಯಪ್ ಮೂಲಕ ಟ್ರ್ಯಾಕಿಂಗ್ ಮಾಡಲು ಮುಂದಾಗಿದೆ. ವೈದ್ಯರು ಡ್ಯೂಟಿ ಟೈಮ್ ನಲ್ಲಿ ನಿಗಧಿತ ಆಸ್ಪತ್ರೆ ವ್ಯಾಪ್ತಿಯಿಂದ ಹೊರ ಹೋದ್ರೆ ಮಾಹಿತಿ ಸಿಗಲಿದೆ. ಜೊತೆಗೆ ತಡವಾಗಿ ಕರ್ತವ್ಯಕ್ಕೆ ಬಂದ್ರೆ ಕೂಡಾ ಮಾಹಿತಿ ಸಿಗಲಿದ್ದು, ಇತಂಹ ವೈದ್ಯರ ವಿರುದ್ಧ ಕಾನೂನು ಶಿಸ್ತು ಕ್ರಮದ ಅಸ್ತ್ರ ಪ್ರಯೋಗಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಜೊತೆಗೆ ಸಿಬ್ಬಂದಿ ಹಾಜರಾತಿ ವೇತನಕ್ಕೆ ಲಿಂಕ್ ಆಗಲಿದ್ದು ಕೆಲಸಕ್ಕೆ ತಕ್ಕ ವೇತನ ನೀಡುವ ವ್ಯವಸ್ಥೆ ಜಾರಿಗೆ ತರಲು ತೀರ್ಮಾನಿಸಲಾಗಿದೆ.

ಒಟ್ನಲ್ಲಿ ಸಿಎಂ ಡಿಕೆ ಶಿವಕುಮಾರ್ ಸಿಎಂ ಆಗ್ತೀದ್ದಂತೆ ರಾಜ್ಯದ ಎಲ್ಲ ಸರ್ಕಾರಿ ಸಿಬ್ಬಂದಿಗೆ ಸರಿಯಾದ ಟೈಮ್ ಗೆ ಕಚೇರಿಗೆ ಬರುವಂತೆ ಎಚ್ಚರಿಕೆ ನೀಡಿದ್ದು,  ಇದರ ಬೆನ್ನಲ್ಲೇ  ಆರೋಗ್ಯ ಇಲಾಖೆ ಸಿಬ್ಬಂದಿಗೂ GPS ಬೇಸ್ಡ್ ಫೇಶಿಯಲ್ ಅಟೆಂಡೆನ್ ಪರಿಚಯಿಸಲು ಮುಂದಾಗಿದೆ. ಆದ್ರೆ, ಇದು ಎಷ್ಟರ ಮಟ್ಟಿಗೆ ಸಕ್ಸಸ್ ಆಗುತ್ತೆ ಎಂದು ಕಾದು ನೋಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:13 pm, Mon, 29 June 26

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ