AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್!

ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 800 ನೇರ ನೇಮಕಾತಿ ಹುದ್ದೆಗಳಿಗೆ ಅನುಮೋದನೆ ನೀಡಿದೆ. ಇದರಲ್ಲಿ 400 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಮತ್ತು 400 ಫಾರ್ಮಸಿ ಅಧಿಕಾರಿ ಹುದ್ದೆಗಳಿವೆ. ಜಿಲ್ಲಾವಾರು ಹಂಚಿಕೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಶೀಘ್ರದಲ್ಲೇ ಬಿಡುಗಡೆಯಾಗುವ ಅಧಿಸೂಚನೆಗಾಗಿ ಕಾಯಬೇಕು. ಅರ್ಜಿ ಪ್ರಕ್ರಿಯೆ, ವಿದ್ಯಾರ್ಹತೆ ಮತ್ತು ಆಯ್ಕೆ ವಿಧಾನದ ಕುರಿತು ವಿವರಗಳು ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ.

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್!
ಆರೋಗ್ಯ ಇಲಾಖೆಯಲ್ಲಿ ಉದ್ಯೋಗImage Credit source: Getty Images
ಅಕ್ಷತಾ ವರ್ಕಾಡಿ
|

Updated on: Jul 09, 2026 | 3:45 PM

Share

ಮುಖ್ಯಾಂಶಗಳು

  • ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ
  • 400 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಮತ್ತು 400 ಫಾರ್ಮಸಿ ಅಧಿಕಾರಿ ಹುದ್ದೆ
  • ಜಿಲ್ಲಾವಾರು ಹಂಚಿಕೆ ಮಾಡಲಾಗಿದ್ದು, ಶೀಘ್ರದಲ್ಲೇ ಬಿಡುಗಡೆ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 800 ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ನೇಮಕಾತಿಯಡಿ 400 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ (Junior Lab Technician Officer) ಹಾಗೂ 400 ಫಾರ್ಮಸಿ ಅಧಿಕಾರಿ (Pharmacy Officer) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

800 ಹುದ್ದೆಗಳ ಭರ್ತಿಗೆ ಸರ್ಕಾರದ ಆದೇಶ:

ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಈ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಅನುಮೋದನೆ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಯಾವ ಹುದ್ದೆಗಳಿಗೆ ನೇಮಕಾತಿ?

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 800 ಹುದ್ದೆಗಳು ಭರ್ತಿಯಾಗಲಿದ್ದು, ಅವುಗಳಲ್ಲಿ 400 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳು ಮತ್ತು 400 ಫಾರ್ಮಸಿ ಅಧಿಕಾರಿ ಹುದ್ದೆಗಳು ಸೇರಿವೆ.

ಜಿಲ್ಲಾವಾರು ಹುದ್ದೆಗಳ ಹಂಚಿಕೆ:

ಸರ್ಕಾರದ ಆದೇಶದ ಪ್ರಕಾರ ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಉಳಿದ ಜಿಲ್ಲೆಗಳಿಗೂ ಪ್ರತ್ಯೇಕ ಹುದ್ದೆಗಳ ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ: ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

ನೇಮಕಾತಿ ಅಧಿಸೂಚನೆ ಶೀಘ್ರದಲ್ಲೇ:

ಸರ್ಕಾರ ಹುದ್ದೆಗಳ ಭರ್ತಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ, ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಕೆ ದಿನಾಂಕ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ ಹಾಗೂ ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ.

ಉದ್ಯೋಗಾಕಾಂಕ್ಷಿಗಳು ಗಮನಿಸಬೇಕಾದುದು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಹಾಗೂ ಕರ್ನಾಟಕ ಸರ್ಕಾರದ ನೇಮಕಾತಿ ಸಂಬಂಧಿತ ಅಧಿಕೃತ ಪ್ರಕಟಣೆಗಳನ್ನು ನಿಯಮಿತವಾಗಿ ಪರಿಶೀಲಿಸುವುದು ಸೂಕ್ತ. ಅಧಿಸೂಚನೆ ಪ್ರಕಟವಾದ ಬಳಿಕವೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ