AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Dept Recruitment 2026: ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳಿಗೆ ಅರ್ಜಿ ಆಹ್ವಾನ; ಗುತ್ತಿಗೆ ಆಧಾರದ ನೇಮಕಾತಿ

ಕರ್ನಾಟಕ ಆರೋಗ್ಯ ಇಲಾಖೆಯು 800 ಲ್ಯಾಬ್ ಟೆಕ್ನಿಷಿಯನ್ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಿದೆ. D.Pharma ಅಥವಾ DMLT ವಿದ್ಯಾರ್ಹತೆ ಮತ್ತು 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ನೇರ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದ್ದು, ಹಾಸನ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳು ಲಭ್ಯವಿವೆ. ಆಸಕ್ತರು ಶೀಘ್ರವೇ ಅರ್ಜಿ ಸಲ್ಲಿಸಿ.

Health Dept Recruitment 2026: ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳಿಗೆ ಅರ್ಜಿ ಆಹ್ವಾನ; ಗುತ್ತಿಗೆ ಆಧಾರದ ನೇಮಕಾತಿ
ಆರೋಗ್ಯ ಇಲಾಖೆಯಲ್ಲಿ ನೇಮಕಾತಿImage Credit source: hfwcom
ಅಕ್ಷತಾ ವರ್ಕಾಡಿ
|

Updated on: Jun 20, 2026 | 4:09 PM

Share

ಬೆಂಗಳೂರು, ಜೂ.20: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಒಟ್ಟು 800 ಸ್ಥಾನಗಳ ಭರ್ತಿಗೆ ಗುತ್ತಿಗೆ ಆಧಾರದ ನೇಮಕಾತಿಗೆ ಅನುಮತಿ ನೀಡಿದೆ. ಈ ನೇಮಕಾತಿಯ ಅಡಿಯಲ್ಲಿ ಕಿರಿಯ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ (ಲ್ಯಾಬ್ ಟೆಕ್ನಿಷಿಯನ್) ಹುದ್ದೆಗಳ 400 ಸ್ಥಾನಗಳು ಹಾಗೂ ಫಾರ್ಮಸಿ ಅಧಿಕಾರಿಗಳ (ಫಾರ್ಮಾಸಿಸ್ಟ್) 400 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳ ಸೇವಾ ಅವಧಿಯು ಒಂದು ವರ್ಷ ಅಥವಾ ನೇರ ನೇಮಕಾತಿಯಿಂದ ಹುದ್ದೆ ಭರ್ತಿಯಾಗುವವರೆಗೆ ಮಾತ್ರ ಇರಲಿದ್ದು, ಇದಕ್ಕೆ ಕೆಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಲಾಗಿದೆ.

ಅಗತ್ಯವಿರುವ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಫಾರ್ಮಾಸಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಡಿ.ಫಾರ್ಮಾ (D.Pharma) ಪೂರ್ಣಗೊಳಿಸಿರಬೇಕು ಮತ್ತು ಕರ್ನಾಟಕ ಫಾರ್ಮಸಿ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಕೊಂಡಿರಬೇಕು. ಕಿರಿಯ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಡಿಪ್ಲೊಮಾ ಇನ್ ಲ್ಯಾಬೊರೇಟರಿ ತಾಂತ್ರಿಕ (DMLT) ವಿದ್ಯಾರ್ಹತೆಯನ್ನು ಪಡೆದಿರಬೇಕಾಗುತ್ತದೆ. ಇನ್ನು ವಯೋಮಿತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷದೊಳಗಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ಸಾರ್ವಜನಿಕರ ಕುಂದು ಕೊರತೆ ನಿರ್ವಹಣೆಗೆ ಡಿಕೆಶಿ ದಿಟ್ಟ ಹೆಜ್ಜೆ: ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಪ್ರಜಾಸೇವೆ ಇಲಾಖೆ ಸ್ಥಾಪನೆ

ಆಯ್ಕೆ ವಿಧಾನ ಮತ್ತು ಸಮಿತಿ ರಚನೆ:

ಈ ಹುದ್ದೆಗಳ ಆಯ್ಕೆಯನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ಆಯಾ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (CEO) ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (DHO) ಸದಸ್ಯ ಕಾರ್ಯದರ್ಶಿಯಾಗಿದ್ದು, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರು, ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಆರ್‌ಸಿಹೆಚ್ ಅಧಿಕಾರಿಗಳು ಈ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಾರೆ.

ಹೆಚ್ಚು ಹುದ್ದೆಗಳಿರುವ ಪ್ರಮುಖ ಜಿಲ್ಲೆಗಳ ವಿವರ:

ಈ ನೇಮಕಾತಿಯಲ್ಲಿ ಜಿಲ್ಲಾವಾರು ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಪ್ರಮುಖ ಜಿಲ್ಲೆಗಳ ವಿವರ ಇಂತಿದೆ: ಹಾಸನ ಜಿಲ್ಲೆಯಲ್ಲಿ 20 ಲ್ಯಾಬ್ ಟೆಕ್ನಿಷಿಯನ್ ಮತ್ತು 51 ಫಾರ್ಮಾಸಿಸ್ಟ್ ಹುದ್ದೆಗಳಿವೆ. ಮೈಸೂರಿನಲ್ಲಿ 23 ಲ್ಯಾಬ್ ಟೆಕ್ನಿಷಿಯನ್ ಮತ್ತು 30 ಫಾರ್ಮಾಸಿಸ್ಟ್, ಮಂಡ್ಯದಲ್ಲಿ 25 ಲ್ಯಾಬ್ ಟೆಕ್ನಿಷಿಯನ್ ಮತ್ತು 15 ಫಾರ್ಮಾಸಿಸ್ಟ್, ದಕ್ಷಿಣ ಕನ್ನಡದಲ್ಲಿ 22 ಲ್ಯಾಬ್ ಟೆಕ್ನಿಷಿಯನ್ ಮತ್ತು 12 ಫಾರ್ಮಾಸಿಸ್ಟ್ ಹುದ್ದೆಗಳಿವೆ. ಚಿಕ್ಕಮಗಳೂರಿನಲ್ಲಿ 14 ಮತ್ತು 29, ಚಾಮರಾಜನಗರದಲ್ಲಿ 28 ಮತ್ತು 22, ಉತ್ತರ ಕನ್ನಡದಲ್ಲಿ 27 ಮತ್ತು 23, ಕಲಬುರಗಿಯಲ್ಲಿ 13 ಮತ್ತು 26, ಶಿವಮೊಗ್ಗದಲ್ಲಿ 18 ಮತ್ತು 24, ತುಮಕೂರಿನಲ್ಲಿ 25 ಮತ್ತು 18 ಹುದ್ದೆಗಳಿವೆ. ಯಾದಗಿರಿಯಲ್ಲಿ 15 ಮತ್ತು 11, ಕೊಡಗಿನಲ್ಲಿ 13 ಮತ್ತು 11, ರಾಯಚೂರಿನಲ್ಲಿ 19 ಮತ್ತು 8, ಚಿಕ್ಕಬಳ್ಳಾಪುರದಲ್ಲಿ 23 ಮತ್ತು 7 ಹಾಗೂ ಚಿತ್ರದುರ್ಗದಲ್ಲಿ 1 ಲ್ಯಾಬ್ ಟೆಕ್ನಿಷಿಯನ್ ಮತ್ತು 24 ಫಾರ್ಮಾಸಿಸ್ಟ್ ಹುದ್ದೆಗಳು ಖಾಲಿ ಇವೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ