Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ, ಟೆಂಡರ್ ವಿಳಂಬ ನಿಜ: ಸಚಿವ ದಿನೇಶ್ ಗುಂಡೂರಾವ್

ಕರ್ನಾಟಕದ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಟೆಂಡರ್ ವಿಳಂಬಕ್ಕೆ ತಾಂತ್ರಿಕ ಕಾರಣ ನೀಡಿರುವ ಅವರು, ಶೇ 75 ರಷ್ಟು ಔಷಧ ವೈದ್ಯಕೀಯ ಸರಬರಾಜು ನಿಗಮದಿಂದಲೇ ಪೂರೈಕೆಯಾಗುತ್ತಿದೆ ಎಂದಿದ್ದಾರೆ.

ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ, ಟೆಂಡರ್ ವಿಳಂಬ ನಿಜ: ಸಚಿವ ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Follow us
Vinay Kashappanavar
| Updated By: Ganapathi Sharma

Updated on: Nov 18, 2024 | 2:05 PM

ಬೆಂಗಳೂರು, ನವೆಂಬರ್ 18: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್ ಎಂಬ ವರದಿ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಇಲ್ಲ. ನಮ್ಮ ಸರ್ಕಾರ ಬಂದ ಆರಂಭದಲ್ಲಿ ಕೇವಲ ಶೇ 40 ರಷ್ಟು ಔಷಧ ಮಾತ್ರ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ 75 ರಷ್ಟು ವೈದ್ಯಕೀಯ ಸರಬರಾಜು ನಿಗಮದಿಂದಲೇ ಔಷಧ ಪೂರೈಕೆಯಾಗುತ್ತಿದೆ ಎಂದರು.

ತಾಂತ್ರಿಕ ಕಾರಣದಿಂದ ಟೆಂಡರ್​ ವಿಳಂಬವಾಗಿದೆ ಎಂದ ಅವರು, ಈ ವರ್ಷವೂ ಇಂಡೆಂಟ್​ ಪ್ರಕಾರವೇ ಔಷಧ ಖರೀದಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಸದ್ಯ, ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದ ಔಷಧ ಇದೆ ಎಂದರು.

ಇಲ್ಲದ ಔಷಧ ಖರೀದಿಗೆ ಸೂಚನೆ: ಗುಂಡೂರಾವ್

ಸರ್ಕಾರಿ ಆಸ್ಪತ್ರೆಗಳಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಯಾವ ಔಷಧ ಇಲ್ಲವೋ ಅಂಥವನ್ನು ಸ್ಥಳೀಯವಾಗಿ ಖರೀದಿಸಲು ಸೂಚನೆ ನೀಡಲಾಗಿದೆ. ಈ ಮೂಲಕ, ಔಷಧ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಗಳು ಅಗತ್ಯ ಔಷಧಗಳು ಇಲ್ಲದಿರುವುದು ಲಭ್ಯ ದಾಖಲೆಗಳಿಂದ ತಿಳಿದುಬಂದಿತ್ತು. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ ಔಷಧ ಸಂಗ್ರಹ ದಾಖಲೆಗಳಿಂದ ತಿಳಿದುಬಂದಿತ್ತು. ವಿಶೇಷವೆಂದರೆ, ಇದೀಗ ಆರೋಗ್ಯ ಸಚಿವರು ಔಷಧ ಕೊರತೆಯನ್ನು ನಿರಾಕರಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ