Covid Vaccine: ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ: ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ
ರಾಜ್ಯದ 20 ನಗರ ಪ್ರದೇಶದಲ್ಲಿ ಕೊರೊನಾ ಹಾಟ್‌ಸ್ಪಾಟ್ ಆಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ 20 ಕೊರೊನಾ ಹಾಟ್ಸ್ಪಾಟ್ಗಳಿವೆ. ಮೈಸೂರಿನಲ್ಲಿ ಒಟ್ಟು 5 ಕೊರೊನಾ ಹಾಟ್ ಸ್ಪಾಟ್‌ಗಳಿವೆ. ಜತೆಗೆ ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ಲ್ಯಾಬ್ ಆರಂಭಕ್ಕೆ ಸಿದ್ದತೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೈಸೂರು: ರಾಜ್ಯದಲ್ಲಿ ಕೊವಿಡ್ ಲಸಿಕೆ ಕೊರತೆ ಇಲ್ಲ. ಪ್ರತಿನಿತ್ಯ 2-3 ಲಕ್ಷ ಕೊವಿಡ್ ಲಸಿಕೆಯನ್ನು ನೀಡುತ್ತಿದ್ದೇವೆ. ಈಗಲೂ ನಮ್ಮ ಬಳಿ 5 ಲಕ್ಷ ಲಸಿಕೆ ದಾಸ್ತಾನು ಇದೆ ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರದ ಜೊತೆಯೂ ಸಮಾಲೋಚನೆ ನಡೆಸಿದ್ದೇವೆ. ನಾಳೆ ಮತ್ತಷ್ಟು ಕೊವಿಡ್ ಲಸಿಕೆ ರಾಜ್ಯಕ್ಕೆ ಬರಲಿದೆ. ದೇಶದಲ್ಲೇ ಅತಿ ಹೆಚ್ಚು ವ್ಯಾಕ್ಸಿನ್ ಕೊಟ್ಟ ರಾಜ್ಯ ಕರ್ನಾಟಕ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದ್ದಾರೆ.
ರಾಜ್ಯದ 20 ನಗರ ಪ್ರದೇಶದಲ್ಲಿ ಕೊರೊನಾ ಹಾಟ್‌ಸ್ಪಾಟ್ ಆಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ 20 ಕೊರೊನಾ ಹಾಟ್ಸ್ಪಾಟ್ಗಳಿವೆ. ಮೈಸೂರಿನಲ್ಲಿ ಒಟ್ಟು 5 ಕೊರೊನಾ ಹಾಟ್ ಸ್ಪಾಟ್‌ಗಳಿವೆ. ಜತೆಗೆ ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ಲ್ಯಾಬ್ ಆರಂಭಕ್ಕೆ ಸಿದ್ದತೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸುವ ವಿಚಾರದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸಿಎಂ ಯಡಿಯೂರಪ್ಪನವರೇ ಹೇಳಿಕೆ ಕೊಟ್ಟಿದ್ದಾರೆ. ಇದರಲ್ಲಿ ಮತ್ತೆ ನನ್ನ ವೈಯಕ್ತಿಕ ಅಭಿಪ್ರಾಯ ಏನೂ ಇಲ್ಲ ಎಂದು ಎಸ್ಎಸ್ಎಲ್‌ಸಿ ಪರೀಕ್ಷೆ ಕುರಿತ ಸಚಿವದ್ವಯ ನಡುವಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಜೂ.21ರಂದು ಕೊವಿಡ್ 19 ಲಸಿಕೆ ಪಡೆದ 13 ವರ್ಷದ, ಅಂಗವಿಕಲ ಬಾಲಕ..!; ಇದೊಂದು ಮಹಾ ಎಡವಟ್ಟು
Big Update: ರಾಜ್ಯದಲ್ಲಿ ಕೊವಿಡ್ 3ನೇ ಅಲೆ ಎದುರಿಸಲು ಹೊಸ ಸಮಿತಿ ರಚನೆಗೆ ತೀರ್ಮಾನ
(Karnataka Health Minister Dr Sudhakar No shortage of Covid vaccine in the state)