ಡೆಂಘೀ ತಡೆಗಟ್ಟಲು ಆಸ್ಪತ್ರೆ, ಪಾಲಿಕೆಗಳಿಗೆ ಸೂಚನೆ ನೀಡಿದ್ದೇವೆ: ಶರಣ ಪ್ರಕಾಶ್​​​, ಗುಂಡೂರಾವ್​

​ಮಳೆಗಾಲ ಆಗಿರುವುದರಿಂದ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ವರದಿಯಾಗಿವೆ. ಡೆಂಘೀ ಪೀಡಿತರ ಸಾವಿನ ಪ್ರಮಾಣ ಕಡಿಮೆಯಿದೆ. ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು.

ಡೆಂಘೀ ತಡೆಗಟ್ಟಲು ಆಸ್ಪತ್ರೆ, ಪಾಲಿಕೆಗಳಿಗೆ ಸೂಚನೆ ನೀಡಿದ್ದೇವೆ: ಶರಣ ಪ್ರಕಾಶ್​​​, ಗುಂಡೂರಾವ್​
ಶರಣ ಪ್ರಕಾಶ್​ ಪಾಟೀಲ್​, ದಿನೇಶ್​ ಗುಂಡೂರಾವ್​​
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on: Jun 22, 2024 | 12:48 PM

ಬೆಂಗಳೂರು, ಜೂನ್​ 22: ರಾಜ್ಯಾದ್ಯಂತ ಡೆಂಘೀ (Dengue) ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಎಲ್ಲ ಆಸ್ಪತ್ರೆಗಳಿಗೂ ಅಲರ್ಟ್​​ ಆಗಿರುವಂತೆ ಸೂಚಿಸಿದ್ದೇನೆ. ಮಳೆಗಾಲ ಆರಂಭವಾಗಿದ್ದರಿಂದ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಾನಗರ ಪಾಲಿಕೆಗಳಿಗೆ ಎಲ್ಲ ಸೂಚನೆ ನೀಡಲಾಗಿದೆ. ಫಾಗಿಂಗ್ ಸಿಂಪರಣೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಹೇಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ (Sharan Prakash Patil) ಹೇಳಿದರು.

ಈಗಾಗಲೇ ಸರ್ಕಾರದಿಂದ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಿಗೆ ಸೂಚನೆ ನೀಡಿದ್ದೇವೆ. ಕಲಬುರಗಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಇವತ್ತು ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದೇವೆ ಎಂದು ತಿಳಿಸಿದರು.

ಕಲಬುರಗಿಯ ಜಯದೇವ ಆಸ್ಪತ್ರೆಯಲ್ಲಿ ನೀರಿನ ಕೊರತೆ ಉಂಟಾಗಿರುವ ವಿಚಾರವಾಗಿ ಮಾತನಾಡಿದ ಅವರು, ಜಯದೇವ ಆಸ್ಪತ್ರೆಯಲ್ಲಿ ಯಾವುದೇ ಲೋಪವಾಗಿಲ್ಲ. ಭಾರಿ ಮಳೆಯಿಂದ ಮಣ್ಣು ಮಿಶ್ರಿತ ನೀರು ಸರಬರಾಜು ಆಗಿದೆ. ಹೀಗಾಗಿ ಕೆಲ ಕಾಲ ಆಪರೇಷನ್ ಮುಂದೂಡಲಾಗಿತ್ತು. ವಿಪಕ್ಷ ನಾಯಕ ಅಶೋಕ್ ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ. ಅಶೋಕ್ ಕೆಲಸ ನೋಡಿ ನಗು ಬರುತ್ತೆ. ಆರ್​​.ಅಶೋಕ್ ಪತ್ರ ಬರೆಯಲಿ ನಾವು ಪರಿಶೀಲನೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಘೀ, ಚಿಕನ್ ಗುನ್ಯಾ ಹಾವಳಿ; ವಾರಕ್ಕೆ 80 ಕೇಸ್ ಪತ್ತೆ

ಡೆಂಘೀಯಿಂದ ಮೃತರ ಸಂಖ್ಯೆ ಕಡಿಮೆ: ದಿನೇಶ್ ಗುಂಡೂರಾವ್

ಮಳೆಗಾಲ ಆಗಿರುವುದರಿಂದ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ವರದಿಯಾಗಿವೆ. ಡೆಂಘೀ ಪೀಡಿತರ ಸಾವಿನ ಪ್ರಮಾಣ ಕಡಿಮೆಯಿದೆ. ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಕೂಡ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸೊಳ್ಳೆಗಳ ಮೂಲಕ ಡೆಂಘೀ ಹರಡುತ್ತಿದೆ. ನೀರು ನಿಂತರೆ ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಮನೆಗಳ ಮುಂದೆ ನೀರು ನಿಲ್ಲದಂತೆ ಜನರು ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಗಾ ವಹಿಸಬೇಕು ಎಂದರು.

ಹಾವೇರಿಯಲ್ಲಿ 389 ಡೆಂಘೀ ಕೇಸ್ ಪತ್ತೆ

ಹಾವೇರಿ ಜಿಲ್ಲೆಯಾದ್ಯಂತ ಡೆಂಘೀ ಅಬ್ಬರ ಜೋರಾಗಿದೆ. ಈವರೆಗೆ 389 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಡೆಂಘೀ ಇಬ್ಬರು ಮೃತಪಟ್ಟಿದ್ದಾರೆ. ಜನವರಿಯಿಂದ ಇಲ್ಲಿವರೆಗೆ 2310 ಜನರಿಗೆ ಡೆಂಘೀ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 389 ಜನರಿಗೆ ಡೆಂಘೀ ದೃಢಪಟ್ಟಿದೆ. ಇದರಲ್ಲಿ 375 ಜನರು ಈಗಾಗಲೇ ಗುಣಮುಖರಾಗಿದ್ದಾರೆ. 12 ಡೆಂಘೀ ಪಿಡಿತರು ಹಾವೇರಿ ಜಿಲ್ಲಾಸ್ಪತ್ರೆ, ಹಾನಗಲ್ಲ, ಹುಬ್ಬಳ್ಳಿ, ದಾವಣಗೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರಿ ಡೆಂಘೀಗೆ ಇಬ್ಬರು ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್